ಕಾಳೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳಿಂದ ಆಹಾರ ಮೇಳವನ್ನು ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಶಾಲಾ ಎಸ್ ಡಿಎಮ್ ಸಿ ( ಶಾಲಾಭಿವೃದ್ಧಿ ಮಂಡಳಿ) ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ದಿನೇಶ್ ನೆರವೇರಸಿ, ಇಂದು ಆಹಾರ ತಯಾರಿಕೆಯ ವಿಧಾನವನ್ನು ಕಲಿತು ಲಕ್ಷಾಂತರ ಕುಟುಂಬಗಳು ಜೀವನ ನಿರ್ವಹಣೆ ಮಾಡುತ್ತಿದ್ದು, ಇಂತಹ ಆಹಾರ ಮೇಳಗಳಿಂದ ವಿದ್ಯಾರ್ಥಿಗಳಲ್ಲಿ ಸ್ವಾವಲಂಭನೆ ಗುಣದ ಜೊತೆಗೆ ವ್ಯಾವಹಾರಿಕ ಜ್ಞಾನಕ್ಕೂ ಸಹಾಯಕವಾಗುತ್ತದೆ ಎಂದು ತಿಳಿಸಿದರು.
ಬಸವಾಪಟ್ಟಣ: ಸಮೀಪದ ಕಾಳೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳಿಂದ ಆಹಾರ ಮೇಳವನ್ನು ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಶಾಲಾ ಎಸ್ ಡಿಎಮ್ ಸಿ ( ಶಾಲಾಭಿವೃದ್ಧಿ ಮಂಡಳಿ) ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ದಿನೇಶ್ ನೆರವೇರಸಿ, ಇಂದು ಆಹಾರ ತಯಾರಿಕೆಯ ವಿಧಾನವನ್ನು ಕಲಿತು ಲಕ್ಷಾಂತರ ಕುಟುಂಬಗಳು ಜೀವನ ನಿರ್ವಹಣೆ ಮಾಡುತ್ತಿದ್ದು, ಇಂತಹ ಆಹಾರ ಮೇಳಗಳಿಂದ ವಿದ್ಯಾರ್ಥಿಗಳಲ್ಲಿ ಸ್ವಾವಲಂಭನೆ ಗುಣದ ಜೊತೆಗೆ ವ್ಯಾವಹಾರಿಕ ಜ್ಞಾನಕ್ಕೂ ಸಹಾಯಕವಾಗುತ್ತದೆ ಎಂದು ತಿಳಿಸಿದರು.
ಶಾಲಾ ಮುಖ್ಯಶಿಕ್ಷಕ ಮಧುಕರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವ್ಯಾವಹಾರಿಕ ಜ್ಞಾನದ ಜೊತೆಗೆ ಉದ್ಯಮಶೀಲತೆಯ ಬೆಳವಣಿಗೆಗೂ ಆಹಾರ ಮೇಳ ಸಹಾಯಕ ಎಂದರು.ಮೇಳದಲ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅನೇಕ ತಿಂಡಿ- ತಿನಿಸುಗಳನ್ನು ಮನೆಯಲ್ಲಿ ತಯಾರಿಸಿ ತಂದು ಅಲ್ಲದೆ , ಕೊಂಡು ತಂದು ವ್ಯಾಪಾರ ನಡೆಸಿದರು. ಪೋಷಕರು, ಅಕ್ಕಪಕ್ಕದ ಶಾಲೆಯ ಮಕ್ಕಳು, ಶಿಕ್ಷಕರು, ಸಾರ್ವಜನಿಕರು ಆಹಾರ ಮೇಳದಲ್ಲಿ ಪಾಲ್ಗೊಂಡಿದ್ದರು.