ಆತ್ಮಸ್ಥೈರ್ಯ ತುಂಬುವಲ್ಲಿ ಆಹಾರ ಮೇಳ ಸಹಕಾರಿ: ವಂದನಾ

| Published : Feb 05 2024, 01:46 AM IST

ಸಾರಾಂಶ

ಕಳೆದ ಹಲವಾರು ವರ್ಷಗಳಿಂದ ವೀರಶೈವ ಮಹಿಳಾ ಸಂಘದ ವತಿಯಿಂದ ಆಹಾರ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ನಗರದ ನಾಗರೀಕರಿಗೆ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಿ ನೀಡುವ ಮೂಲಕ ಉತ್ತಮ ಅಭಿರುಚಿಯನ್ನು ಮಹಿಳಾ ಸಂಘ ಕಾಯ್ದುಕೊಂಡಿದೆ.

ಚಳ್ಳಕೆರೆ: ಕಳೆದ ಹಲವಾರು ವರ್ಷಗಳಿಂದ ವೀರಶೈವ ಮಹಿಳಾ ಸಂಘದ ವತಿಯಿಂದ ಆಹಾರ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ನಗರದ ನಾಗರೀಕರಿಗೆ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಿ ನೀಡುವ ಮೂಲಕ ಉತ್ತಮ ಅಭಿರುಚಿಯನ್ನು ಮಹಿಳಾ ಸಂಘ ಕಾಯ್ದುಕೊಂಡಿದೆ. ಆಹಾರ ಮೇಳ ಕಾರ್ಯಕ್ರಮ ಹೆಚ್ಚು ಜನಪ್ರಿಯವಾಗಿದೆ ಎಂದು ತಾಲೂಕು ವೀರಶೈವ ಸೇವಾಸಮಾಜದ ಗೌರವಾಧ್ಯಕ್ಷ ವಂದನಾ ಬಸವರಾಜು ತಿಳಿಸಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ವೀರಶೈವ ಮಹಿಳಾ ವೇದಿಕೆ ಹಮ್ಮಿಕೊಂಡಿದ್ದ ಆಹಾರ ಮೇಳ ಕಾರ್ಯಕ್ರಮ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಇಂತಹ ಕಾರ್ಯಕ್ರಮ ಆಯೋಜನೆಯಿಂದ ಮಹಿಳೆಯರಲ್ಲಿ ಹೆಚ್ಚು ಜಾಗೃತಿ ಉಂಟಾಗುತ್ತದೆ ಎಂದರು.

ಕಾರ್ಯದರ್ಶಿ ಮಂಜುಳಾರಾಜ್ ಮಾತನಾಡಿ, ಪ್ರತಿನಿತ್ಯ ಮಹಿಳೆ ತನ್ನ ಮನೆಯಲ್ಲಿಯೇ ಅವಶ್ಯವಿರುವ ಆಹಾರ ಪದಾರ್ಥಗಳನ್ನು ಸಿದ್ದಪಡಿಸಿಕೊಳ್ಳುತ್ತಾಳೆ. ಆದರೆ, ಇಂದು ಸಾರ್ವಜನಿಕರ ಹಿತದೃಷ್ಠಿಯಿಂದ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ರುಚಿಯಾಗಿ ಸಿದ್ದಪಡಿಸಿ ಗ್ರಾಹಕರಿಗೆ ನೀಡಲಾಗುತ್ತಿದೆ. ಸುಮಾರು ೩೦ಕ್ಕೂ ಹೆಚ್ಚು ತಂಡಗಳು ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಸಿದ್ದಪಡಿಸಿ ಮಾರಾಟ ಮಾಡುತ್ತಿದ್ಧಾರೆ. ಕಾರ್ಯಕ್ರಮಕ್ಕೆ ಸಹಕರಿಸುತ್ತಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿಕೆ ಅಧ್ಯಕ್ಷೆ ಪದ್ಮ ನಾಗರಾಜು ವಹಿಸಿದ್ದರು. ನಿರ್ದೇಶಕರಾದ ವನಜಾ, ಮಮತ, ಸುನಿತಾ, ಗೀತ, ಸುಮನಾಗರಾಜು, ಕವಿತಾ ವಿಶುಕುಮಾರ್, ಮಧುರ, ಹೊಸಮನೆಸ್ವಾಮಿ, ವಿಜಯೇಂದ್ರ ಮುಂತಾದವರು ಉಪಸ್ಥಿತರಿದ್ದರು.