ಸಾರಾಂಶ
ಅರಕಲಗೂಡು ತಾಲೂಕಿನ ಕಸಬಾ ಹೋಬಳಿಯ ಮಾದಿಹಳ್ಳಿ ಗ್ರಾಮದ ವಾಸಿ ಚಿಕ್ಕಮ್ಮ ಕೊಂ ಕಾಳಯ್ಯ ಅವರ ಮನೆ ಮಳೆಗೆ ಸಂಪೂರ್ಣ ಹಾನಿಯಾಗಿರುವುದರಿಂದ ವಾಸ ಮಾಡಲು ಮನೆ ಇಲ್ಲದ ಕಾರಣ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ರಾಜಸ್ವ ನಿರೀಕ್ಷಕರು ಭೇಟಿ ನೀಡಿ ಗ್ರಾಮದಲ್ಲಿರುವ ರಾಮಮಂದಿರದಲ್ಲಿ ತಾತ್ಕಾಲಿಕವಾಗಿ ವಾಸ ಮಾಡಲು ಅನುವು ಮಾಡಿಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ತಹಸೀಲ್ದಾರ್ ಕೆ.ಸಿ. ಸೌಮ್ಯ ಅವರು ಭೇಟಿ ನೀಡಿ ಸಂತ್ರಸ್ತರಿಗೆ ಆಹಾರದ ಕಿಟ್ ವಿತರಿಸಿದರು.
ಕನ್ನಡಪ್ರಭ ವಾರ್ತೆ ಅರಕಲಗೂಡು
ಮಳೆಯಿಂದ ಮನೆಹಾನಿಗೊಳಗಾದ ಸಂತ್ರಸ್ತರಿಗೆ ತಹಸೀಲ್ದಾರ್ ಕೆ. ಸಿ. ಸೌಮ್ಯ ಅವರು ಆಹಾರದ ಕಿಟ್ ವಿತರಿಸಿದರು. ತಾಲೂಕಿನ ಕಸಬಾ ಹೋಬಳಿಯ ಮಾದಿಹಳ್ಳಿ ಗ್ರಾಮದ ವಾಸಿ ಚಿಕ್ಕಮ್ಮ ಕೊಂ ಕಾಳಯ್ಯ ಅವರ ಮನೆ ಮಳೆಗೆ ಸಂಪೂರ್ಣ ಹಾನಿಯಾಗಿರುವುದರಿಂದ ವಾಸ ಮಾಡಲು ಮನೆ ಇಲ್ಲದ ಕಾರಣ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ರಾಜಸ್ವ ನಿರೀಕ್ಷಕರು ಭೇಟಿ ನೀಡಿ ಗ್ರಾಮದಲ್ಲಿರುವ ರಾಮಮಂದಿರದಲ್ಲಿ ತಾತ್ಕಾಲಿಕವಾಗಿ ವಾಸ ಮಾಡಲು ಅನುವು ಮಾಡಿಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ತಹಸೀಲ್ದಾರ್ ಕೆ.ಸಿ. ಸೌಮ್ಯ ಅವರು ಭೇಟಿ ನೀಡಿ ಸಂತ್ರಸ್ತರಿಗೆ ಆಹಾರದ ಕಿಟ್ ವಿತರಿಸಿದರು.ಬಳಿಕ ಮಾತನಾಡಿ, ಚಿಕ್ಕಮ್ಮ ಅವರ ಮನೆ ಸಂಪೂರ್ಣ ಹಾನಿಯಾಗಿದ್ದು ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಗ್ರಾಮದ ರಾಮಮಂದಿರದಲ್ಲಿ ವಾಸ ಮಾಡಲು ಅನುವು ಮಾಡಿಕೊಟ್ಟಿದ್ದು, ಅವರಿಗೆ ಸುಮಾರು 15 ದಿನಗಳಿಗೆ ಆಗುವಷ್ಟು ಆಹಾರದ ಕಿಟ್ ವಿತರಣೆ ಮಾಡಲಾಗಿದೆ. ಇವರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಜಿಲ್ಲಾಧಿಕಾರಿಗಳಿಗೆ ಕಡತ ಸಲ್ಲಿಸಿ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಶಿರಸ್ತೇದಾರ ಸಿ.ಸ್ವಾಮಿ, ರಾಜಸ್ವನಿರೀಕ್ಷಕ ಲೋಕೇಶ್, ಗ್ರಾಮ ಆಡಳಿತ ಅಧಿಕಾರಿ ಸಲ್ಮಾನ್ ಖಾನ್ ಹಾಗೂ ಗ್ರಾಮಸ್ಥರು ಹಾಜರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))