ವಿಷ್ಣು ಅಭಿಮಾನಿಗಳಿಂದ ಅನ್ನಸಂತರ್ಪಣೆ

| Published : Jan 01 2024, 01:15 AM IST

ಸಾರಾಂಶ

ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 141ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಶನಿವಾರ ನಗರದ ನೆಹರು ವೃತ್ತದ ಬಳಿ ವಿಷ್ಣ ಅಭಿಮಾನಿ ಬಳದ ವತಿಯಿಂದ ಅನ್ನಸಂತರ್ಪಣೆ

ಕನ್ನಡಪ್ರಭ ವಾರ್ತೆ ನಂಜನಗೂಡು

ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 141ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಶನಿವಾರ ನಗರದ ನೆಹರು ವೃತ್ತದ ಬಳಿ ವಿಷ್ಣ ಅಭಿಮಾನಿ ಬಳದ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಜಿಪಂ ಮಾಜಿ ಸದಸ್ಯ ಹಾಗೂ ತಾಲೂಕು ಕಸಾಪ ಗೌರವಾಧ್ಯಕ್ಷ ಸಿ. ಚಿಕ್ಕರಂಗನಾಯಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಕನ್ನಡಿನ ಸಾಂಸ್ಕೃತಿಕ ಲೋಕಕ್ಕೆ ಡಾ. ವಿಷ್ಣುವರ್ಧನ್ ಅವರು ತನ್ನದೇ ಆದ ಕೊಡುಗೆ ನೀಡಿದ್ದಾರೆ. ನಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಕ್ರಮಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದ ಸಜ್ಜನ ನಟರಲ್ಲಿ ಅವರೂ ಒಬ್ಬರಾಗಿದ್ದರು. ಅನೇಕ ಚಲಚಿತ್ರಗಳಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ಕೊಡುವ ಚಿತ್ರಗಳಲ್ಲಿ ಅವರು ನಟಿಸಿ ಯುವಕರನ್ನು ಸರಿದಾರಿಯಲ್ಲಿ ಮುನ್ನಡೆಸುತ್ತಿದ್ದಾಗಿ ಹೇಳಿದರು.

ಈ ವೇಳೆ ನಗರಸಭಾ ಆಯುಕ್ತ ನಂಜುಂಡಸ್ವಾಮಿ, ನಗರಸಭಾ ಸದಸ್ಯರಾದ ಮಹದೇವಪ್ರಸಾದ್, ಮಹೇಶ್, ಗಜೇಂದ್ರ, ವೆಂಕಟೇಶ್ ಇದ್ದರು.