ಸಾರಾಂಶ
ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯು ೭ನೇ ಸುತ್ತಿನ ಕಾಲು ಬಾಯಿ ಜ್ವರ ಹಾಗು ಚರ್ಮ ಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ ಆರಂಭಿಸಿದ್ದು, ಕಾಲು ಬಾಯಿ ಮುಕ್ತ ಮಾಡಲು ಮುಂದಾಗಬೇಕು, ಇದಕ್ಕೆ ರೈತರು ಸಹಕರಿಸಬೇಕು .
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಕಾಲು ಬಾಯಿ ಜ್ವರ ಹಾಗು ಚರ್ಮ ಗಂಟು ರೋಗಕ್ಕೆ ಲಸಿಕಾ ಅಭಿಯಾನದಲ್ಲಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಗೋ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.ಪಟ್ಟಣದ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಮುಖ್ಯ ವೈದ್ಯರ ಕಚೇರಿ ಆವರಣದಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕರು ಮಾತನಾಡಿ, ತಾಲೂಕಿನ ಜಾನುವಾರುಗಳಿಗೆ ಕಾಲು ಬಾಯಿ ಜ್ವರ ಹಾಗು ಚರ್ಮ ಗಂಟು ರೋಗ ನಿವಾರಣೆಗೆ ಲಸಿಕೆ ಕಡ್ಡಾಯವಾಗಿ ಹಾಕಿ ಎಂದರು.
ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯು ೭ನೇ ಸುತ್ತಿನ ಕಾಲು ಬಾಯಿ ಜ್ವರ ಹಾಗು ಚರ್ಮ ಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ ಆರಂಭಿಸಿದ್ದು, ಕಾಲು ಬಾಯಿ ಮುಕ್ತ ಮಾಡಲು ಮುಂದಾಗಬೇಕು, ಇದಕ್ಕೆ ರೈತರು ಸಹಕರಿಸಬೇಕು ಎಂದು ಮನವಿ ಮಾಡಿದರು.ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್.ನಂಜುಂಡ ಪ್ರಸಾದ್, ಪುರಸಭೆ ಅಧ್ಯಕ್ಷ ಮಧು, ಉಪಾಧ್ಯಕ್ಷ ಅಣ್ಣಯ್ಯಸ್ವಾಮಿ, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಮಾಜಿ ಸದಸ್ಯ ನೀಲಕಂಠಪ್ಪ, ಪುರಸಭೆ ಮಾಜಿ ಉಪಾಧ್ಯಕ್ಷ ಕಾರ್ಗಳ್ಳಿ ಸುರೇಶ್, ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ಎಚ್.ಮೋಹನ್ ಕುಮಾರ್ ಹಲವರಿದ್ದರು.
೨೯ಜಿಪಿಟಿ೧ಗುಂಡ್ಲುಪೇಟೆಯಲ್ಲಿ ಕಾಲು ಬಾಯಿ ಜ್ವರ ಲಸಿಕಾ ಅಭಿಯಾನದಲ್ಲಿ ಗೋ ಪೂಜೆ ಸಲ್ಲಿಸುವ ಮೂಲಕ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಚಾಲನೆ ನೀಡಿದರು.
----------------