ಕಲ್ಪತರು ನಾಡಿನಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದ ಪುರುಷರ ಪುಟ್ಬಾಲ್ ಪಂದ್ಯಾವಳಿಯಲ್ಲಿ ಬೆಳಗಾವಿ ತಂಡ ಚಿನ್ನದ ಪದಕ ಗೆಲ್ಲುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.
ಕನ್ನಡಪ್ರಭ ವಾರ್ತೆ, ತುಮಕೂರುಕಲ್ಪತರು ನಾಡಿನಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದ ಪುರುಷರ ಪುಟ್ಬಾಲ್ ಪಂದ್ಯಾವಳಿಯಲ್ಲಿ ಬೆಳಗಾವಿ ತಂಡ ಚಿನ್ನದ ಪದಕ ಗೆಲ್ಲುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಇಲ್ಲಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೈಸೂರು ವಿರುದ್ಧ ಪೆನಾಲ್ಟಿ ಶೂಟೌಟ್‌ನಲ್ಲಿ ಬೆಳಗಾವಿ ತಂಡ ಗೆಲುವು ಸಾಧಿಸಿತು. ಎರಡು ತಂಡಗಳು ಮೊದಲಾರ್ಧದಲ್ಲಿ 1-1 ಗೋಲುಗಳಿಂದ ಸಮಬಲ ಸಾಧಿಸಿದ್ದವು. ಬಳಿಕ ನಿಗದಿತ ಸಮಯದಲ್ಲಿ ಪಂದ್ಯ 2-2 ರಿಂದ ಅಂತ್ಯಗೊಂಡಿತು. ಫಲಿತಾಂಶಕ್ಕಾಗಿ ಪೆನಾಲ್ಟಿ ಶೂಟೌಟ್ ಮೊರೆ ಹೋಗಲಾಯಿತು. ಬೆಳಗಾವಿ ತಂಡ 5-3 ಗೋಲುಗಳಿಂದ ಮೈಸೂರು ತಂಡವನ್ನು ಸೋಲಿಸಿ ಚಾಂಪಿಯನ್ ಆಯಿತು. ಅಂತಿಮ ಪಂದ್ಯಾವಳಿಯಲ್ಲಿ ಮೈಸೂರು ತಂಡ ಉತ್ತಮ ಪ್ರದರ್ಶನ ನೀಡಿದರೂ ಸಹ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಳ್ಳುವಂತಾಯಿತು.