ಪಟ್ಟಣದ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಬೀದಿ ವ್ಯಾಪಾರಿಗಳನ್ನು ಪಟ್ಟಣ ಪಂಚಾಯಿತಿಯಿಂದ ಪುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ ಏಕಾಏಕಿ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಬೀದಿ ವ್ಯಾಪಾರಿಗಳು ಶಾಸಕರ ಮುಂದೆ ಕಣ್ಣೀರಿಟ್ಟರು.
ಕನ್ನಡಪ್ರಭ ವಾರ್ತೆ ಗುಬ್ಬಿ
ಪಟ್ಟಣದ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಬೀದಿ ವ್ಯಾಪಾರಿಗಳನ್ನು ಪಟ್ಟಣ ಪಂಚಾಯಿತಿಯಿಂದ ಪುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ ಏಕಾಏಕಿ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಬೀದಿ ವ್ಯಾಪಾರಿಗಳು ಶಾಸಕರ ಮುಂದೆ ಕಣ್ಣೀರಿಟ್ಟರು. ನಾವುಗಳು ಬೀದಿ ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದೇವೆ ಏಕಾಏಕಿ ಈ ರೀತಿ ಕ್ರಮ ಕೈಗೊಂಡಿದ್ದರಿಂದ ನಾವು ಬೀದಿಗೆ ಬಿದ್ದಿದ್ದೇವೆ ಬೀದಿ ವ್ಯಾಪಾರದಿಂದ ನಮ್ಮ ಮಕ್ಕಳನ್ನು ಓದಿಸುತ್ತಿದ್ದೇವೆ, ಮನೆ ಬಾಡಿಗೆ ಕಟ್ಟುತ್ತಿದ್ದೇವೆ, ಸಾಲದ ಕಂತು ಕಟ್ಟುತ್ತಿದ್ದೇವೆ ಇನ್ನು ಅನೇಕ ಸಮಸ್ಯೆಗಳನ್ನು ನಾವು ಎದುರಿಸಬೇಕಾಗಿದೆ. ನಾವು ಬೀದಿ ವ್ಯಾಪಾರ ಮಾಡುತ್ತಿರುವ ಸ್ಥಳದಲ್ಲಿ ನಾಗರಿಕರಿಗೆ ತೊಂದರೆ ಆಗದಂತೆ ವ್ಯಾಪಾರ ಮಾಡಿಕೊಂಡು ಬರುತ್ತಿದ್ದೇವೆ ಹಾಗೂ ನಮಗೆ ಯಾವುದೇ ತರಹ ತೆರವುಗೊಳಿಸಿ ಎಂದು ನೋಟಿಸ್ ನೀಡಿಲ್ಲ ವಿನಾಕಾರಣ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ನಮ್ಮನ್ನು ಬೀದಿ ಪಾಲು ಮಾಡಿದ್ದಾರೆ ಎಂದು ಶಾಸಕರಲ್ಲಿ ದೂರು ನೀಡಿರು.