ಸಾರಾಂಶ
ಬೆಂಗಳೂರು : ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ನಗರ ಪಾಲಿಕೆಗಳ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳಿಗೆ ₹1,241.57 ಕೋಟಿ ವೆಚ್ಚದಲ್ಲಿ ಡಾಂಬರಿಕರಣ ಕಾಮಗಾರಿ ಹಾಗೂ ₹1,055 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗಳ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ₹1,241 ಕೋಟಿ ವೆಚ್ಚದಲ್ಲಿ ಮುಖ್ಯ, ಉಪಮುಖ್ಯ ರಸ್ತೆಗಳ ಡಾಂಬರೀಕರಣಕ್ಕೆ ಸಂಪುಟ ನಿರ್ಧಾರ ಮಾಡಿದೆ. ಈ ಕುರಿತ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
5 ಪಾಲಿಕೆಗಳಲ್ಲಿ ಅಭಿವೃದ್ಧಿ:
ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಅನುದಾನದಡಿ ಜಿಬಿಎ ವ್ಯಾಪ್ತಿಯಲ್ಲಿರುವ 5 ಬೆಂಗಳೂರು ನಗರ ಪಾಲಿಕೆಗಳ ವ್ಯಾಪ್ತಿಯ ವಾರ್ಡ್ ಅಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ₹1055.00 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳುವ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಎಚ್.ಕೆ.ಪಾಟೀಲ್
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಎಚ್.ಕೆ.ಪಾಟೀಲ್, ಬೆಂಗಳೂರಿನ 5 ಹೊಸ ಪಾಲಿಕೆಗಳಲ್ಲಿ ವಿವಿಧ ವಾರ್ಡ್ ರಸ್ತೆ, ಚರಂಡಿ ಅಭಿವೃದ್ಧಿ, ನಿರ್ವಹಣೆ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ₹900 ಕೋಟಿ ಅಂದಾಜು ವೆಚ್ಚದಲ್ಲಿ ಮಾಡಲು ಉದ್ದೇಶಿಸಲಾಗಿದೆ. ಈ ಕಾಮಗಾರಿಗಳನ್ನು ₹10 ಕೋಟಿಗೆ ಕಡಿಮೆ ಇರದಂತೆ ಪ್ಯಾಕೇಜ್ ಮಾಡಿ ಕಾಮಗಾರಿಗಳನ್ನು ನಡೆಸಬೇಕು. ದೀರ್ಘಾವಧಿ ಬಾಳಿಕೆಯುಳ್ಳ ಆಸ್ತಿ ಸೃಜನೆಯ ಸ್ವರೂಪದಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸಂಪುಟದಲ್ಲಿ ತೀರ್ಮಾನಿಸಿರುವುದಾಗಿ ತಿಳಿಸಿದರು.
)
)
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))