ಸಾರಾಂಶ
ಹೊಳಲ್ಕೆರೆ: ಕ್ರೀಡೆ ಮತ್ತು ಸಾಂಸ್ಕತಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿರಲು ಸಹಕಾರಿಯಾಗುತ್ತದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.
ಹೊಳಲ್ಕೆರೆ: ಕ್ರೀಡೆ ಮತ್ತು ಸಾಂಸ್ಕತಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿರಲು ಸಹಕಾರಿಯಾಗುತ್ತದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಅಡಿಯಲ್ಲಿ ನಡೆದ 2024-25 ನೇ ಶೈಕ್ಷಣಿಕ ಸಾಲಿನ ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆ, ಎನ್ಎಸ್ಎಸ್ ಯೂತ್ ರೆಡ್‍ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಎನ್.ಎಸ್.ಎಸ್. ಮತ್ತು ಯೂತ್ ರೆಡ್‍ಕ್ರಾಸ್, ರೋವರ್ಸ್ ರೇಂಜರ್ಸ್‍ಗಳಲ್ಲಿ ಮಕ್ಕಳು ಪಾಲ್ಗೊಳ್ಳುವುದರಿಂದ ಸೇವಾ ಮನೋಭಾವ ರೂಢಿಸಿಕೊಳ್ಳಬಹುದು ಎಂದುರು.
ಕವಿ ಹಾಗೂ ಸರ್ಕಾರಿ ಪದವಿ ಕಾಲೇಜಿನ ಸಲಹಾ ಮಂಡಳಿ ಸದಸ್ಯ ಚಂದ್ರಶೇಖರ ತಾಳ್ಯ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಙಾನ ನಮ್ಮಲ್ಲಿ ಭಯ ಹುಟ್ಟಿಸುವಂತೆ ಬೆಳೆಯುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಹನೆ, ಪ್ರೀತಿ ಮತ್ತು ಸಹಬಾಳ್ವೆಯ ಆಶಯಗಳನ್ನು ರೂಢಿಸಿಕೊಂಡು ಬೆಳೆಯಬೇಕು ಎಂದು ಹೇಳಿದರು.ಸಹನೆ ಮತ್ತು ಪ್ರೀತಿಗಳನ್ನು ಬೆಳೆಸಿಕೊಳ್ಳುವುದರಿಂದ ನಿಮ್ಮಲ್ಲಿ ಎಲ್ಲರನ್ನೂ ಗೌರವಿಸುವ ಸ್ವಭಾವ ಬೆಳೆಯುತ್ತದೆ. ನಿಮ್ಮ ಶತ್ರುಗಳನ್ನು ಸಹ ನೀವು ಸಹನೆಯಿಂದ ಕಾಣುವುದು ಸಾಧ್ಯವಾಗುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಶಿವಮೂರ್ತಿ ನಾಯ್ಕ, ಪಿ.ಎಚ್.ಮುರುಗೇಶ್, ಚೇತನ್, ಜಮದಗ್ನಿ, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.