ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರುಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ದೇಶದಲ್ಲೇ ಪ್ರಥಮ ಬಾರಿಗೆ ವಿದೇಶಿ ಡ್ರಗ್ಸ್ ಪೆಡ್ಲರ್‌ವೊಬ್ಬನ ಬ್ಯಾಂಕ್ ಖಾತೆಗಳಲ್ಲಿದ್ದ ₹12.60 ಲಕ್ಷವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನಾರ್ಕೊಟಿಕ್ ಡ್ರಗ್ಸ್ ಆ್ಯಂಡ್ ಸೈಕೋಟ್ರೋಪಿಕ್ ಸಬ್‌ಸ್ಟಾನ್ಸಸ್ ಆ್ಯಕ್ಟ್ (ಎನ್‌ಡಿಪಿಎಸ್) ಕಾಯ್ದೆಯಲ್ಲಿ ಕಲ್ಪಿಸಿರುವ ಅಧಿಕಾರ ಚಲಾಯಿಸಿ ಹಣ ಜಪ್ತಿ ಮಾಡಲಾಗಿದೆ.
ಕಳೆದ ನವೆಂಬರ್‌ನಲ್ಲಿ ವಿದ್ಯಾರಣ್ಯಪುರ ಠಾಣಾ ಪೊಲೀಸರು ನೈಜಿರಿಯಾ ಮೂಲದ ಡ್ರಗ್ಸ್ ಪೆಡ್ಲರ್ ಪೀಟರ್ ಇಕೇಡಿ ಬಿಲಾನ್ವೋ(38)ನನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸಿಸಿಬಿ ಎನ್‌ಡಿಪಿಎಸ್ ಕಾಯ್ದೆ ಅಧಿಕಾರ ಚಲಾಯಿಸಿ ನಗದು ಹಣ ಹಾಗೂ ಏಳು ಬ್ಯಾಂಕ್ ಖಾತೆಗಳಲ್ಲಿದ್ದ ಒಟ್ಟು ₹12.60 ಲಕ್ಷವನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಇದಕ್ಕೆ ಚೆನ್ನೈನ ಸಕ್ಷಮ ಪ್ರಾಧಿಕಾರ ಮತ್ತು ಆಡಳಿತಾಧಿಕಾರಿ ಅನುಮೋದಿಸಿದ್ದಾರೆ. ವಿದೇಶಿ ಡ್ರಗ್ಸ್ ಪೆಡ್ಲರ್ ಅಕ್ರಮವಾಗಿ ಸಂಪಾದಿಸಿದ ಹಣವನ್ನು ಮುಟ್ಟುಗೋಲು ಹಾಕಿಕೊಂಡಿರುವುದು ದೇಶದಲ್ಲಿ ಇದೇ ಮೊದಲು ಎಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು.ಮುರುಘಾ ಕೇಸ್: ಜಡ್ಜ್ ವರ್ಗ ವಿರೋಧಿಸಿದ ಭರತ್‌ಗೆ ಸಮನ್ಸ್:ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರಾಗಿದ್ದ ಬಿ.ಎಸ್.ರೇಖಾ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಬಾರದು ಎಂದು ಕೋರಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದ ಎಸ್‌ಜೆಎಂ ವಿದ್ಯಾಪೀಠದ ಸಿಇಒ ಎಂ.ಭರತ್ ಕುಮಾರ್‌ಗೆ ಹೈಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರು ದಾಖಲಿಸಿರುವ ಸ್ವಯಂಪ್ರೇರಿತ ಕ್ರಿಮಿನಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಪೋಕ್ಸೊ ಪ್ರಕರಣದಡಿ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಜೈಲು ಸೇರಿದ ನಂತರ 2022ರ ಡಿ.2ರಂದು ಎಸ್‌ಜೆಎಂ ವಿದ್ಯಾಪೀಠದ ಸಿಇಒ ಆಗಿ ಎಂ.ಭರತ್ ಕುಮಾರ್ ಅವರನ್ನು ಶರಣರು ನೇಮಿಸಿದ್ದರು. ನಂತರ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರನ್ನು ಆಡಳಿತಾಧಿಕಾರಿಯಾಗಿ 2022ರ ಡಿ.13ರಂದು ಸರ್ಕಾರ ನೇಮಕ ಮಾಡಿತ್ತು. ಆ ಆದೇಶವನ್ನು ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ರದ್ದುಪಡಿಸಿತ್ತು. ನಂತರ ಹೈಕೋರ್ಟ್ ವಿಭಾಗೀಯ ಪೀಠವು ಮಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ತಾತ್ಕಾಲಿಕವಾಗಿ ನೇಮಕ ಮಾಡಿ ಆದೇಶಿಸಿತ್ತು.ಪೋಕ್ಸೋ ಪ್ರಕರಣ ಸಂಬಂಧ ಕಾನೂನು ಹೋರಾಟದ ವಿವಿಧ ಬೆಳವಣಿಗೆಗಳು ನಡೆದ ಬೆನ್ನಲ್ಲೇ ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರಾಗಿದ್ದ ಬಿ.ಎಸ್.ರೇಖಾ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಈ ವರ್ಗಾವಣೆಯನ್ನು ತಡೆಯಬೇಕು ಮತ್ತು ಮಠದ ಆಡಳಿತದ ಹಿತದೃಷ್ಟಿಯಿಂದ ಅವರನ್ನು ಇಲ್ಲಿಯೇ ಉಳಿಸಬೇಕು ಎಂದು ಕೋರಿ ಎಂ.ಭರತ್ ಕುಮಾರ್ 2023ರ ಡಿ.15ರಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರಿಗೆ ಪತ್ರ ಬರೆದಿದ್ದರು.ಇದಕ್ಕೆ ಆಕ್ಷೇಪಿಸಿದ್ದ ರಿಜಿಸ್ಟ್ರಾರ್ ಜನರಲ್, ನ್ಯಾಯಾಧೀಶರ ವರ್ಗಾವಣೆ ಹೈಕೋರ್ಟ್ ಆಡಳಿತಕ್ಕೆ ಸಂಬಂಧಿಸಿದೆ. ಇಂತಹ ಸೂಕ್ಷ್ಮ ವಿಷಯದಲ್ಲಿ ಭರತ್ ಕುಮಾರ್ ಮೂಗು ತೂರಿಸಿದ್ದಾರೆ. ಆ ಮೂಲಕ ನ್ಯಾಯಾಂಗದ ಘನತೆಗೆ ಅಗೌರವ ಉಂಟು ಮಾಡಿದ್ದಾರೆ ಎಂದು ಆರೋಪಿಸಿ 2024ರ ಜ.3ರಂದು ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.