ಸಾರಾಂಶ
ಮಹಿಳಾ ಐಎಎಸ್ ಅಧಿಕಾರಿಯಾಗಿ ಜಿಲ್ಲೆಯ ಎಲ್ಲ ತಾಲೂಕುಗಳಿಗೂ ಸಂಚರಿಸಿ ಆಡಳಿತ ನಡೆಸುವುದು ಸುಲಭದ ಮಾತಲ್ಲ.
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ನಿರ್ವಹಣೆಗಾಗಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೆಸರಿನಲ್ಲಿ ರಾಜ್ಯ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಎಸ್.ಎಸ್. ಭಟ್ ಲೋಕೇಶ್ವರ ಮಾರಿಕಾಂಬೆಗೆ ಮಹಾಪೂಜೆ ಸಲ್ಲಿಸಿದರು.
ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಎಸ್.ಎಸ್. ಭಟ್, ಮಹಿಳಾ ಐಎಎಸ್ ಅಧಿಕಾರಿಯಾಗಿ ಜಿಲ್ಲೆಯ ಎಲ್ಲ ತಾಲೂಕುಗಳಿಗೂ ಸಂಚರಿಸಿ ಆಡಳಿತ ನಡೆಸುವುದು ಸುಲಭದ ಮಾತಲ್ಲ. ಅಂತಹುದರಲ್ಲಿ ಡಿಸಿ ಲಕ್ಷ್ಮೀಪ್ರಿಯಾ ಇಡೀ ಜಿಲ್ಲೆಯ ಒಳಿತಿಗಾಗಿ ಶ್ರಮಿಸುತ್ತಿರುವುದು ನಮಗೆಲ್ಲ ಹೆಮ್ಮೆಯ ವಿಷಯ. ಈ ಕಾರಣದಿಂದ ಅವರಿಗೆ ಆಡಳಿತ ನಡೆಸುವಲ್ಲಿ ಭಗವತಿಯ ಅನುಗ್ರಹ ಇರಲೆಂದು ದೇವಿಯಲ್ಲಿ ಪ್ರಾರ್ಥಿಸಿ ಕುಂಕುಮಾರ್ಚನೆ ಸಹಿತ ಮಹಾಪೂಜೆ ಸಲ್ಲಿಸುತ್ತಿದ್ದೇನೆ ಎಂದರು.ಈ ಸಂದರ್ಭದಲ್ಲಿ ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕ ಹಾಗೂ ನಿಕಟಪೂರ್ವ ಮಾರಿಕಾಂಬಾ ದೇವಸ್ಥಾನದ ಅಧ್ಯಕ್ಷ ಡಾ.ವೆಂಕಟೇಶ ನಾಯ್ಕ, ಹಾಲಿ ಅಧ್ಯಕ್ಷ ಆರ್.ಜಿ. ನಾಯ್ಕ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.