ಸಾರಾಂಶ
ತಾಲೂಕು ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ವತಿಯಿಂದ ಎನ್‌ಪಿಎಸ್ ರದ್ದು ಮಾಡಿ ಒಪಿಎಸ್ ಅನ್ನು ಕೂಡಲೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಗಿದೆ ಎಂದು ತಾಲೂಕು ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಎಚ್.ಒ. ರಾಜಣ್ಣ ತಿಳಿಸಿದರು.
ಕನ್ನಡಪ್ರಭ ವಾರ್ತೆ ಚಳ್ಳಕೆರೆ
ತಾಲೂಕು ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ವತಿಯಿಂದ ಎನ್‌ಪಿಎಸ್ ರದ್ದು ಮಾಡಿ ಒಪಿಎಸ್ ಅನ್ನು ಕೂಡಲೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಗಿದೆ ಎಂದು ತಾಲೂಕು ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಎಚ್.ಒ. ರಾಜಣ್ಣ ತಿಳಿಸಿದರು.ಅವರು, ತಾಲೂಕು ಕಚೇರಿ ಮುಂಭಾಗದಲ್ಲಿ ರಾಜ್ಯ ಸಂಘದ ಸೂಚನೆಯಂತೆ ಪದಾಧಿಕಾರಿಗಳೊಂದಿಗೆ ಕಪ್ಪುಪಟ್ಟಿ ಧರಿಸಿ ಓಪಿಎಸ್‌ನ್ನು ಕೂಡಲೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮನವಿ ನೀಡಿದರು. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರಿಗೆ ಓಪಿಎಸ್ ಜಾರಿ ಮಾಡಿದರೆ ಮಾತ್ರ ಹೆಚ್ಚಿನ ಜೀವನ ಭದ್ರತೆ ಹಾಗೂ ಇತರೆ ಸೌಲಭ್ಯಗಳು ದೊರಕುತ್ತವೆ. ಈ ನಿಟ್ಟಿನಲ್ಲಿ ಸರ್ಕಾರ ಗಂಭೀರ ಚಿಂತನೆ ನಡೆಸಬೇಕು ಎಂದರು.
ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿ.ಟಿ. ವೀರೇಶ್ ಮಾತನಾಡಿ, ಕಳೆದ ಸುಮಾರು ಎರಡು ವರ್ಷಗಳಿಂದ ನಿರಂತರವಾಗಿ ರಾಜ್ಯ ಸರ್ಕಾರಕ್ಕೆ ಎನ್‌ಪಿಎಸ್ ನೌಕರರ ಸಂಘದ ವತಿಯಿಂದ ಓಪಿಎಸ್ ಜಾರಿಗೊಳಿಸುವಂತೆ ಒತ್ತಾಯಿಸಿ ಮನವಿ ನೀಡಲಾಗುತ್ತಿದೆ. ಆದರೆ, ಸರ್ಕಾರ ಮಾತ್ರ ಈ ಬಗ್ಗೆ ಸಕರಾತ್ಮಕ ನಿರ್ಧಾರ ಕೈಗೊಳ್ಳದೇ ಇರುವುದು ಬೇಸರ ತರಿಸಿದೆ. ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.ಮನವಿ ಸ್ವೀಕರಿಸಿದ ತಹಸೀಲ್ದಾರ್ ರೇಹಾನ್‌ಪಾಷ, ತಾವು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯವರಿಗೆ ನೀಡಿದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಕಳಿಸುವ ಭರವಸೆ ನೀಡಿದರು.
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ. ರಾಜಕುಮಾರ್, ಕಾರ್ಯದರ್ಶಿ ಈರಣ್ಣ, ಗ್ರಾಮ ಆಡಳಿತಾಧಿಕಾರಿ ಸಂಘದ ತಾಲೂಕು ಅಧ್ಯಕ್ಷ ಎಂ. ಪ್ರಕಾಶ್, ಶಿಕ್ಷಕರಾದ ಕೆ.ಎಸ್. ಶ್ರೀಕಾಂತ್, ಪ್ರದೀಪ್, ಶಿವಮೂರ್ತಿ, ಮರಿಸ್ವಾಮಿ, ಪುಪ್ಪಲತಾ, ಶಿವಲೀಲಾ, ರಾಘವೇಂದ್ರ, ಬೆಸ್ಕಾಂ ಬೋರಯ್ಯ, ಮಂಜುನಾಥ ಮುಂತಾದವರು ಉಪಸ್ಥಿತರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))