ಸಾರಾಂಶ
ರಾಮನಗರ: ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲೆಯ ಸರ್ಕಾರಿ ನೌಕರರು ಬುಧವಾರ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಅಧ್ಯಕ್ಷ ಕೆ.ಸತೀಶ್ ಮತ್ತು ಜಿಲ್ಲಾ ಕಾರ್ಯದರ್ಶಿ ಶಿವಸ್ವಾಮಿ ನೇತೃತ್ವದಲ್ಲಿ ಸರ್ಕಾರಿ ನೌಕರರು ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.ರಾಜ್ಯ 7ನೇ ವೇತನ ಆಯೋಗ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸ್ಸು ವರದಿಯಲ್ಲಿನ ಫಿಟ್ಮೆಂಟ್ ಸೌಲಭ್ಯವನ್ನು ಕನಿಷ್ಠ ಶೇ.27.50ರಷ್ಟಕ್ಕೆ ಹೆಚ್ಚಿಸಿ ಕಾಲ್ಪನಿಕವಾಗಿ ದಿನಾಂಕ: 01-07-2022ರಿಂದ ಅನ್ವಯವಾಗುವಂತೆ ವೇತನ ನಿಗದಿಪಡಿಸಿ, 1-4-2024ರಿಂದ ಆರ್ಥಿಕ ಸೌಲಭ್ಯ ನೀಡಿ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದ ಎನ್‌ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್‌ಪಿಎಸ್ ನೌಕರರನ್ನು ಒಪಿಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ. ಈಗಾಗಲೇ ಪಂಜಾಬ್, ರಾಜಸ್ತಾನ, ಚತ್ತೀಸ್ ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್‌ಪಿಎಸ್ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್‌ಎಸ್)ಗೆ ಈ ಹಿಂದಿನ ರಾಜ್ಯ ಸರ್ಕಾರ 2021-22ರ ಆಯವ್ಯಯದಲ್ಲಿ ಘೋಷಿಸಿತ್ತು. ಈಗಾಗಲೇ ಸಚಿವ ಸಂಪುಟದ ಅನುಮೋದನೆ ಪಡೆದು 5-9-2022 ರಂದೇ ಸರ್ಕಾರಿ ಆದೇಶ ಹೊರಡಿಸಿದೆ.
ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಪ್ರತಿ ತಿಂಗಳು ವೃಂದವಾರು ವಂತಿಗೆ ಕಟಾವಣೆಯಾಗಲಿದ್ದು, ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ಯೋಜನೆಯ ಅನುಷ್ಠಾನಾಧಿಕಾರಿಗಳು ತಾಂತ್ರಿಕ ಹಾಗೂ ಇನ್ನಿತರ ಕಾರಣಗಳನ್ನು ನೀಡಿ ಈ ಯೋಜನೆಯನ್ನು ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡುತ್ತಿದ್ದು, ನೌಕರರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಶೀಘ್ರವಾಗಿ ಈ ಯೋಜನೆಯನ್ನು ಲೋಕಾರ್ಪಣೆ ಮಾಡಬೇಕು ಎಂದು ಸರ್ಕಾರಿ ನೌಕರರು ಒತ್ತಾಯಿಸಿದರು.ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಎಂ.ಕಾಂತರಾಜು, ಖಜಾಂಚಿ ಎಂ.ಸಿ.ರಾಜಶೇಖರಮೂರ್ತಿ, ರಾಜ್ಯ ಪರಿಷತ್ ಸದಸ್ಯ ಬಿ.ಎಲ್.ಸುರೇಂದ್ರ, ಕಾರ್ಯಾಧ್ಯಕ್ಷ ಎನ್. ರಮೇಶ್, ಹಿರಿಯ ಉಪಾಧ್ಯಕ್ಷ ಭೈರಪ್ಪ, ಕಾರ್ಯಾಧ್ಯಕ್ಷ ರಾಜೇಗೌಡರು, ಪ್ರಚಾರ ಸಮಿತಿ ಅಧ್ಯಕ್ಷ ಸತೀಶ್ ಪಾದ್ರಳ್ಳಿ, ಚನ್ನಪಟ್ಟಣ ಕಾರ್ಯದರ್ಶಿ ಗುಂಡಪ್ಪ, ಚನ್ನಪಟ್ಟಣ ಖಜಾಂಚಿ ಚಿಕ್ಕಚನ್ನೇಗೌಡ ಮತ್ತಿತರರು ಹಾಜರಿದ್ದರು.
10ಕೆಆರ್ ಎಂಎನ್ 9.ಜೆಪಿಜಿಸರ್ಕಾರಿ ನೌಕರರು ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರಿಗೆ ಮನವಿ ಸಲ್ಲಿಸಿದರು.
;Resize=(128,128))
;Resize=(128,128))
;Resize=(128,128))