ಸಾರಾಂಶ
ಬಾಗಲಕೋಟೆ: ಆರ್ಥಿಕವಾಗಿ ದುರ್ಬಲರಾದ ಹಿರಿಯ ನಾಗರಿಕರಿಗೆ ಸರ್ಕಾರ ಪ್ರತಿ ತಿಂಗಳು ₹ 10 ಸಾವಿರ ಮಾಸಾಶನ ನೀಡಬೇಕು ಎಂದು ರಾಷ್ಟ್ರೀಯ ಹಿರಿಯ ನಾಗರಿಕರ ಅರ್ಥಕ್ರಾಂತಿ ಟ್ರಸ್ಟ್ ಜಿಲ್ಲಾಧ್ಯಕ್ಷ ವಿ.ಜಿ. ಮಠಪತಿ ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಆರ್ಥಿಕವಾಗಿ ದುರ್ಬಲರಾದ ಹಿರಿಯ ನಾಗರಿಕರಿಗೆ ಸರ್ಕಾರ ಪ್ರತಿ ತಿಂಗಳು ₹ 10 ಸಾವಿರ ಮಾಸಾಶನ ನೀಡಬೇಕು ಎಂದು ರಾಷ್ಟ್ರೀಯ ಹಿರಿಯ ನಾಗರಿಕರ ಅರ್ಥಕ್ರಾಂತಿ ಟ್ರಸ್ಟ್ ಜಿಲ್ಲಾಧ್ಯಕ್ಷ ವಿ.ಜಿ. ಮಠಪತಿ ಆಗ್ರಹಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಹಿರಿಯ ನಾಗರಿಕರಿಗೆ ವೈದ್ಯಕೀಯ ಚಿಕಿತ್ಸೆಯನ್ನು ಉಚಿತಗೊಳಿಸುವ ಜೊತೆಗೆ ಸರ್ಕಾರ ಕಡ್ಡಾಯವಾಗಿ ಹೆಲ್ತ್ ಇನ್ಶೂರನ್ಸ್ ಮಾಡಿಸಬೇಕು. ಹಿರಿಯ ನಾಗರಿಕರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತ್ಯೇಕ ಸಚಿವಾಲಯ ಆರಂಭಿಸಬೇಕು. ಈ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಷ್ಟ್ರದ 15 ಕೋಟಿಗಿಂತ ಹೆಚ್ಚಿನ ಹಿರಿಯ ನಾಗರಿಕರು ಸಂಘಟಿತರಾಗುತ್ತಿದ್ದಾರೆ ಎಂದು ತಿಳಿಸಿದರು.
ಟ್ರಸ್ಟ್ ಸದಸ್ಯರಾದ ಬಸವರಾಜ ಇಂಡಿ, ಮಹಾಬಳೇಶ್ವರ ಗುಡಗುಂಟಿ, ಆರ್.ಕೆ. ಮಠದ, ವಿಜಯಶ್ರೀ ಮುರನಾಳ ಹಾಗೂ ಜಿ.ಎನ್. ಪಾಟೀಲ ಇತರರಿದ್ದರು.