ಸಾರಾಂಶ
ಕಳೆದ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಲ್ಲಿ ಹಿನ್ನಡೆಯಾಗುತ್ತಿದೆ. ಈಗಾಗಲೆ ಕೆಲ ವಿವಿಗಳು ಪರೀಕ್ಷೆ ವೇಳಾಪಟ್ಟಿ ಬಿಡುಗಡೆಗೊಳಿಸಿವೆ. ಈ ಹಿನ್ನೆಲೆಯಲ್ಲಿ ತರಗತಿಗಳು ನಡೆಯುವುದು ವಿದ್ಯಾರ್ಥಿಗಳ ತೀವ್ರ ಅಗತ್ಯವಾಗಿದೆ.
ಹಗರಿಬೊಮ್ಮನಹಳ್ಳಿ: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ ಸುಗಮವಾಗಿ ತರಗತಿಗಳು ನಡೆಸುವಂತೆ ರಾಜ್ಯ ಸರ್ಕಾರ ಕೂಡಲೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಉತ್ತರ ಪ್ರಾಂತ ಎಬಿವಿಪಿ ತಾಲೂಕು ಪದಾಧಿಕಾರಿಗಳು ಪಟ್ಟಣದ ಬಸವೇಶ್ವರ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ಭರತ್ ಮಾತನಾಡಿ, ಕಳೆದ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಲ್ಲಿ ಹಿನ್ನಡೆಯಾಗುತ್ತಿದೆ. ಈಗಾಗಲೆ ಕೆಲ ವಿವಿಗಳು ಪರೀಕ್ಷೆ ವೇಳಾಪಟ್ಟಿ ಬಿಡುಗಡೆಗೊಳಿಸಿವೆ. ಈ ಹಿನ್ನೆಲೆಯಲ್ಲಿ ತರಗತಿಗಳು ನಡೆಯುವುದು ವಿದ್ಯಾರ್ಥಿಗಳ ತೀವ್ರ ಅಗತ್ಯವಾಗಿದೆ.ಅತಿಥಿ ಉಪನ್ಯಾಸಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನೀಡಬೇಕು. ಪ್ರತಿ ತಿಂಗಳು ಸಂಬಳ ನೀಡಬೇಕು. ಉಪನ್ಯಾಸಕರ ಖಾಲಿ ಹುದ್ದೆಗಳನ್ನು ಕೂಡಲೆ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು. ಉಪತಹಸೀಲ್ದಾರ್ ಶಿವಕುಮಾರಗೌಡಗೆ ಮನವಿ ಸಲ್ಲಿಸಿದರು. ಇದಕ್ಕೂ ಮುನ್ನ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಿಂದ ಪ್ರಮುಖ ಬೀದಿಗಳ ಮೂಲಕ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆಸಿದರು. ಸಹಸಂಚಾಲಕಿ ಅನುಶ್ರೀ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಚೈತ್ರಾ, ಕಾರ್ಯಕರ್ತರಾದ ಶಂಕರನಾಯ್ಕ, ಆಕಾಶ್, ಕಾರ್ತೀಕ್, ಹಾಲೇಶ್ ಇತರರಿದ್ದರು.