ಎಸ್ಸಿ, ಎಸ್ಟಿ ನೌಕರರಿಗೆ ಸಾಮಾಜಿಕ ನ್ಯಾಯ ಒದಗಿಸಲು ಒತ್ತಾಯ

| Published : May 12 2024, 01:21 AM IST

ಸಾರಾಂಶ

ಚಿಕ್ಕಮಗಳೂರು, ಪ.ಜಾತಿ ಮತ್ತು ಪ.ವರ್ಗದ ನೌಕರರಿಗೆ ಸಂವಿಧಾನದ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಿ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ದಸಂಸ ಮುಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ದಸಂಸ ಮುಖಂಡರಿಂದ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಪ.ಜಾತಿ ಮತ್ತು ಪ.ವರ್ಗದ ನೌಕರರಿಗೆ ಸಂವಿಧಾನದ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಿ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ದಸಂಸ ಮುಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು.ಬಳಿಕ ಮಾತನಾಡಿದ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಸ್ಸಿ, ಎಸ್ಟಿ ನೌಕರರಿಗೆ ಪದೋನ್ನತಿ ನೀಡುವಾಗ ಸಂವಿಧಾನದ ಶಾಸನ ಬದ್ಧವಾದ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿ ಮಾಡದೇ ಅನ್ಯಾಯವೆಸಗುತ್ತಿದೆ ಎಂದರು.ಶಾಸನಬದ್ಧ ಮೀಸಲಾತಿ ಜಾರಿ ಮಾಡದೇ ಅನ್ಯಾಯ ಮಾಡಿರುವ ಬಗ್ಗೆ ಬೆಂಗಳೂರು ಸಹಕಾರ ಸಂಘಗಳ ನಿಬಂಧಕರು ಹಾಗೂ ಮೈಸೂರು ಜಂಟಿ ನಿಬಂಧಕರು, ಜಿಲ್ಲಾ ಸಹಕಾರ ಸಂಘಕ್ಕೆ ಪತ್ರ ಮುಖೇನ ಕೂಲಂಕಷವಾಗಿ ಪರಿಶೀಲಿಸಿ ವರದಿ ಸಲ್ಲಿಸಲು ತಿಳಿಸಿದ್ದರು. ಆದರೆ, ಇದುವರೆಗೂ ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿ, ಬ್ಯಾಂಕಿನ ಆಡಳಿತ ಮಂಡಳಿ ಗಮನಕ್ಕೆ ತಾರದೇ ಉದ್ದೇಶಪೂರ್ವಕವಾಗಿ ವಿಷಯ ಮುಚ್ಚಿಟ್ಟು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದರು.ಚಿಕ್ಕಮಗಳೂರು ಸಹಕಾರ ಬ್ಯಾಂಕಿನಲ್ಲಿ ಅವ್ಯವಹಾರದ ಬಗ್ಗೆ ರಾಜ್ಯ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 64 ರಡಿ ವಿಚಾರಣೆ ನಡೆಯುತ್ತಿದೆ. ಈ ವಿಚಾರಣೆ ಆರೋಪ 8 ರಲ್ಲಿ ಬ್ಯಾಂಕಿನ ಸಿಬ್ಬಂದಿಗೆ ಮಾನವ ಸಂಪನ್ಮೂಲ ನಿಯಮ, ಜೇಷ್ಟತಾ ಪಟ್ಟಿ ಉಲ್ಲಂಘಿಸಿ ಪದೋನ್ನತಿ ನೀಡಿ ವರ್ಗಾವಣೆ ಮಾಡುವ ಮೂಲಕ ಅವ್ಯವಹಾರ ನಡೆಸಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ ಎಂದು ಹೇಳಿದರು.ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಜಿಲ್ಲಾ ಸಹಕಾರ ಬ್ಯಾಂಕ್‌ಗೆ ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸಿ ಎಸ್ಸಿ, ಎಸ್ಟಿ ನೌಕರರಿಗೆ ಸಂವಿಧಾನದ ಶಾಸನಬದ್ಧ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಿ ಪದೋನ್ನತಿ ಕೊಡಿಸಿ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ದಸಂಸ ಮುಖಂಡರಾದ ಹುಣಸೇಮಕ್ಕಿ ಲಕ್ಷ್ಮಣ್, ಹರೀಶ್ ಮಿತ್ರ, ಹರಿಯಪ್ಪ, ಜವರಯ್ಯ, ಈರಣ್ಣ, ಶಂಕರ್, ಶಿವಲಿಂಗಯ್ಯ, ವೀರಭದ್ರಯ್ಯ ಹಾಜರಿದ್ದರು.ಪೋಟೋ ಫೈಲ್‌ ನೇಮ್‌ 11 ಕೆಸಿಕೆಎಂ 2ಪ.ಜಾತಿ ಮತ್ತು ಪ.ವರ್ಗದ ನೌಕರರಿಗೆ ಸಂವಿಧಾನದ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಿ ಸಾಮಾಜಿಕ ನ್ಯಾಯವನ್ನು ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ದಸಂಸ ಮುಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು.