ಸಾರಾಂಶ
ಕನ್ನಡಪ್ರಭ ವಾರ್ತೆ ಚಿತ್ರದುರ್ಗಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಅಗುವ ಹೆಚ್ಚಿನ ಒತ್ತಡ ಖಂಡಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ ಹಾಕಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಂದಾಯ ಇಲಾಖೆ ಸರ್ಕಾರದಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ತಂತ್ರಾಂಶಗಳಿಂದ ಗ್ರಾಮ ಲೆಕ್ಕಾಧಿಕಾರಿಗಳು ಕೆಲಸ ನಿರ್ವಹಿಸುವುದು ಕಷ್ಟವಾಗುತ್ತಿದೆ. ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆವಿಗೂ ಆಗಿರುವ ಎಲ್ಲಾ ಅಮಾನತು ರದ್ದುಪಡಿಸಬೇಕು. ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಒತ್ತಡ ಹೇರಬಾರದು ಎಂದು ಒತ್ತಾಯಿಸಿದರು.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾಲಿಯಿರುವ ಪ್ರಥಮ ದರ್ಜೆ ಸಹಾಯಕ/ರಾಜಸ್ವ ನಿರೀಕ್ಷಕರ ಹುದ್ದೆಗಳಿಗೆ ತಕ್ಷಣವೆ ಪದೋನ್ನತಿ ನೀಡುವಂತೆ ಪ್ರತಿಭಟನಾನಿರತ ಗ್ರಾಮ ಲೆಕ್ಕಾಧಿಕಾರಿಗಳು ಸರ್ಕಾರಕ್ಕೆ ಆಗ್ರಹಿಸಿದರು.ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ರಾಜ್ಯ ಗೌರವಾಧ್ಯಕ್ಷ ವಿ. ಪಾಂಡುರಂಗಪ್ಪ, ಗ್ರಾಮ ಆಡಳಿತಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ ಮುದ್ದಜ್ಜಿ, ಕಂದಾಯ ಇಲಾಖೆ ಜಿಲ್ಲಾಧ್ಯಕ್ಷ ಬಿ.ಎಸ್. ಸಿದ್ದೇಶಿ, ತಾಲೂಕು ಅಧ್ಯಕ್ಷ ಸಂಪತ್‍ಕುಮಾರ್ ಎಂ.ಪಿ., ಜಿಲ್ಲಾ ಪ್ರದಾನ ಕಾರ್ಯದರ್ಶಿ ಮಹಮದ್ ಇರ್ಫಾನ್, ತಾಲೂಕಿನ ಎಲ್ಲಾ ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.