ಸಾರಾಂಶ
ಮಲೆಮಾದೇಶ್ವರ ವನ್ಯಜೀವಿ ವಿಭಾಗದ ಹನೂರು ಬಫರ್ ಜೋನ್ ವಲಯದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣದ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ತಿಳಿದು ಬಂದಿದೆ.
ಹನೂರು: ಮಲೆಮಾದೇಶ್ವರ ವನ್ಯಜೀವಿ ವಿಭಾಗದ ಹನೂರು ಬಫರ್ ಜೋನ್ ವಲಯದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣದ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ತಿಳಿದು ಬಂದಿದೆ. ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಹೊತ್ತಿ ಉರಿಯುತ್ತಿರುವ ಅರಣ್ಯ ಪ್ರದೇಶವನ್ನು ವಲಯ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಮರಗಿಡಗಳು ಸುಟ್ಟು ಕರಕಲಾಗಿದ್ದು ಜೊತೆಗೆ ಪ್ರಾಣಿ-ಪಕ್ಷಿಗಳು ದಿಕ್ಕಾಪಾಲಾಗಿ ಓಡಿ ಹೋಗಿರುವ ಬಗ್ಗೆ ವರದಿಯಾಗಿದೆ.
ಮಳೆ ಇಲ್ಲದೆ ಕಾಡ್ಗಿಚ್ಚು: ಬಿರುಬಿಸಲಿನಿಂದ ಅರಣ್ಯ ಪ್ರದೇಶ ಸಂಪೂರ್ಣವಾಗಿ ಗಿಡಗಂಟಿ ಲಾಂಟಣಗಳು ಒಣಗಿ ನಿಂತಿರುವುದರಿಂದ ಸುಡು ಬಿಸಿಲಿನಲ್ಲಿ ಪಚ್ಚೆದೊಡ್ಡಿ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಕಾಡ್ಗಿಚ್ಚು ಉಂಟಾಗಿರುವುದು ಕತ್ತಲೆ ಆಗಿರುವುದರಿಂದ ಅರಣ್ಯ ಇಲಾಖೆ ಸಿಬ್ಬಂದಿಗೆ ತಲೆ ನೋವಾಗಿ ಪರಿಣಮಿಸಿರುವುದರಿಂದ ಇರುವಷ್ಟು ಸಿಬ್ಬಂದಿ ಬೆಂಕಿ ನಂದಿಸಲು ಟಾರ್ಚ್‌ಗಳನ್ನು ಬಳಸಿಕೊಂಡು ಬೆಂಕಿ ನಂದಿಸಲು ಹೆಣೆಗಾಡುತ್ತಿದ್ದಾರೆ.