ಸಾರಾಂಶ
ಕಾಂತರಾಜ್ ಆಯೋಗ ಸರ್ಕಾರಕ್ಕೆ ನೀಡಿದ ಜಾತಿಗಣತಿ ಅವೈಜ್ಞಾನಿಕವಾಗಿದೆ. ವೀರಶೈವ ಲಿಂಗಾಯತರನ್ನು ಒಬಿಸಿ ಪಟ್ಟಿಗೆ ಸೇರಿಸಬೇಕಾದರೆ ಸರ್ಕಾರದ ಮೇಲೆ ಒತ್ತಡ ತರುವುದು ಅನಿವಾರ್ಯವಾಗಿದೆ.
ಕುರುಗೋಡು: ವೀರಶೈವ ಲಿಂಗಾಯತರು ಒಳಪಂಗಡ ಮರೆತು ಒಗ್ಗಟ್ಟು ಪ್ರದರ್ಶಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಚಾನಾಳ್ ಶೇಖರ್ ಸಲಹೆ ನೀಡಿದರು.
ಪಟ್ಟಣದಲ್ಲಿ ಮಂಗಳವಾರ ಆಯೋಜಿಸಿದ್ದ ವೀರಶೈವ ಲಿಂಗಾಯತ ಮಹಾಸಭಾ ಜಾಗೃತಿ ಸಭೆಯಲ್ಲಿ ಮಾತನಾಡಿದರು.ಕಾಂತರಾಜ್ ಆಯೋಗ ಸರ್ಕಾರಕ್ಕೆ ನೀಡಿದ ಜಾತಿಗಣತಿ ಅವೈಜ್ಞಾನಿಕವಾಗಿದೆ. ವೀರಶೈವ ಲಿಂಗಾಯತರನ್ನು ಒಬಿಸಿ ಪಟ್ಟಿಗೆ ಸೇರಿಸಬೇಕಾದರೆ ಸರ್ಕಾರದ ಮೇಲೆ ಒತ್ತಡ ತರುವುದು ಅನಿವಾರ್ಯವಾಗಿದೆ. ಡಿ. 23 ಮತ್ತು 24ರಂದು ದಾವಣಗೆರೆಯಲ್ಲಿ ಜರುಗುವ ವೀರಶೈವ ಲಿಂಗಾಯತ ಮಹಾಸಭಾ ಮಹಾ ಅಧಿವೇಶನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಳ್ಳಾರಿ ಜಿಲ್ಲೆಯಿಂದ ಸುಮಾರು 100 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗಾವತಿ ವೀರೇಶ್ ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷ ಎಚ್. ಹೇಮಾದ್ರಿ, ತಾಲೂಕು ಅಧ್ಯಕ್ಷ ಜೆ. ಸೋಮಶೇಖರ ಗೌಡ, ಎನ್. ಜಯದೇವಗೌಡ, ವಾಣಿಜ್ಯ ಘಟಕದ ಜಿಲ್ಲಾಉಪಾಧ್ಯಕ್ಷ ಶಾಪುರ ರಂಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನನ ಗೌಡ, ಯುವ ಘಟಕದ ರಾಜ್ಯ ಕಾರ್ಯದರ್ಶಿ, ಅಂಗಡಿ ಶಂಕರ್, ತಾಲೂಕು ಪ್ರಧಾನ ಕಾರ್ಯದರ್ಶಿ ಗೆಣಿಕೆಹಾಳು ವೀರೇಶ, ಸದಾಶಿವ, ನಾಗರಾಜಗೌಡ ಮತ್ತು ಎನ್.ಎಂ. ಸದಾನಂದ ಸ್ವಾಮಿ ಇದ್ದರು.