ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು ರೈತರ ಹಿತದೃಷ್ಠಿ ಮನಗೊಂಡು ಎಲ್ಲರೂ ಪಕ್ಷ ಬೇಧ ಮರೆತು ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಕಾರ್ಯ ಮಾಡಬೇಕೆಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.ಪಟ್ಟಣದ ರಾಣಿ ಚನ್ನಮ್ಮಾಜಿಯ ಸ್ಮಾರಕ ಭವನದಲ್ಲಿ ರವಿವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರ ಕಷ್ಟ ಕಾರ್ಪಣ್ಯಗಳಿಗೆ ಎಲ್ಲರೂ ಸ್ಪಂದಿಸುವ ಅಗತ್ಯತೆ ಇದೆ.
ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು
ರೈತರ ಹಿತದೃಷ್ಠಿ ಮನಗೊಂಡು ಎಲ್ಲರೂ ಪಕ್ಷ ಬೇಧ ಮರೆತು ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಕಾರ್ಯ ಮಾಡಬೇಕೆಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.ಪಟ್ಟಣದ ರಾಣಿ ಚನ್ನಮ್ಮಾಜಿಯ ಸ್ಮಾರಕ ಭವನದಲ್ಲಿ ರವಿವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರ ಕಷ್ಟ ಕಾರ್ಪಣ್ಯಗಳಿಗೆ ಎಲ್ಲರೂ ಸ್ಪಂದಿಸುವ ಅಗತ್ಯತೆ ಇದೆ. ಹೀಗಾಗಿ, ಸಹಕಾರಿ ರಂಗದಲ್ಲಿ ರೈತರ ಹಿತದೃಷ್ಠಿ ಕಾಪಾಡುವ ಎಲ್ಲ ಕಾರ್ಯಗಳು ನಡೆಯುತ್ತವೆ. ಆ ಕಾರ್ಯಗಳಿಗೆ ಎಲ್ಲರೂ ಸ್ಪಂದಿಸಬೇಕು. ಒಕ್ಕಲುತನ ಜೊತೆಗೆ ಹೈನುಗಾರಿಕೆಗೆ ಆದ್ಯತೆ ನೀಡಬೇಕು. ಜೊತೆಗೆ ಹೈನುಗಾರಿಕೆಗೆ ಸಹಕಾರಿ ಸಂಘಗಳ ಮೂಲಕ ಸಾಲ ನೀಡಲು ಸಹ ಕ್ರಮವಹಿಸಲಾಗುವದು. ಮಹಿಳಾ ಸಂಘಗಳು ಉತ್ಪಾದಿಸುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲಾಗುವುದು. ಸಹಕಾರಿ ಕ್ಷೇತ್ರದ ಮೂಲಕ ರೈತರಿಗೆ ಹೆಚ್ಚಿನ ಸೌಕರ್ಯಗಳನ್ನು ಒದಗಿಸಲಾಗುವುದೆಂದು ಹೇಳಿದರು.ಬೆಳಗಾವಿ ಹಾಲು ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಕೆಲವೊಂದು ಜನ ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಮಾಡುತ್ತಾರೆ. ಆದರೆ, ಸಹಕಾರಿ ರಂಗದಲ್ಲಿ ರಾಜಕೀಯ ಹೊರತು ಪಡಿಸಿ ಕೆಲಸ ಮಾಡಬೇಕು. ಸಹಕಾರಿ ಗಟ್ಟಿಯಾಗಿದ್ದರೆ ರೈತರು ಗಟ್ಟಿಯಾಗಿರುತ್ತಾರೆ. ಸಹಕಾರಿ ಕ್ಷೇತ್ರದಲ್ಲಿ ಶಾಸಕರು ಸೇರಿದಂತೆ ಎಲ್ಲರೂ ಒಗ್ಗಟಿನಿಂದ ಕೆಲಸ ಮಾಡಬೇಕು. ನಮ್ಮ ಗ್ರಾಮೀಣ ಜನ ಹೈನುಗಾರಿಕೆಗೆ ಹೆಚ್ಚು ಗಮನ ಹರಿಸಬೇಕು. ಸಹಕಾರಿ ಕ್ಷೇತ್ರದಲ್ಲಿ ರೈತರಿಗೆ ಬೆನ್ನೆಲುಬಾಗಿ ನಿಂತು ಕೆಲಸ ಮಾಡಿ. ಸಹಕಾರಿ ಸಂಘಗಳು ಗಟ್ಟಿಯಾಗಿದ್ದರೆ ರೈತರು ಗಟ್ಟಿಯಾಗಿರಲು ಸಾಧ್ಯವಾಗುತ್ತದೆ ಎಂದರು.ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಸಾಹೇಬ ಜೊಲ್ಲೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ನಾನಾಸಾಹೇಬ ಪಾಟೀಲ, ಕೆಎಂಎಫ್. ನಿರ್ದೇಶಕ ಬಸವರಾಜ ಪರವಣ್ಣವರ, ಕೆಎಂಎಫ್ ನಿರ್ದೇಶಕ ಬಾಬು ಕಟ್ಟಿ ಮಾತನಾಡಿದರು. ಪಟ್ಟಣ ಪಂಚಾಯತಿ ಅಧ್ಯಕ್ಷ ಜಯಸಿದ್ದರಾಮ ಮಾರಿಹಾಳ, ಸಿ.ಆರ್.ಪಾಟೀಲ, ರಮೇಶ ಪರವಿನಾಯ್ಕರ, ರಮೇಶ ಬಾಳೇಕುಂದರಗಿ ಉಪಸ್ಥಿತರಿದ್ದರು. ಮಲಪ್ರಭಾ ಸಹಕಾರಿ ಸಕ್ಕರೆ, ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಯ ನಿರ್ದೇಶಕರು ಉಪಸ್ಥಿತರಿದ್ದರು.ಪ್ರಾಥಮಿಕ ಕೃಷಿ ಪತ್ತಿನ ಮತ್ತು ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ನಿರ್ದೇಶಕರು ಸಿಬ್ಬಂದಿ ವರ್ಗದವರನ್ನು ಸನ್ಮಾನಿಸಲಾಯಿತು.
------ಕೋಟ್ಡಾ.ಬಸವರಾಜ ಪರವಣ್ಣವರ ಕೆಎಂಎಫ್ ನಿರ್ದೇಶಕರಿದ್ದು, ರಾಜ್ಯಾಧ್ಯಕ್ಷರ ಮೂಲಕ ಅವರನ್ನು ಪಕ್ಷದ ಸಂಘಟನೆ ದೃಷ್ಠಿಯಿಂದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಅವರನ್ನು ಕೈ ಬಿಡುವ ಪ್ರಶ್ನೆ ಇಲ್ಲ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಪಕ್ಷಾತೀತವಾಗಿ, ಜ್ಯಾತ್ಯಾತೀತವಾಗಿ ನಡೆದಿದೆ. ಯಾವುದೇ ಪಕ್ಷದ ಚಿನ್ನೆಯಲ್ಲಿ ಚುನಾವಣೆ ನಡೆದಿಲ್ಲ. ಸೋಲು ಗೆಲವು ಇಲ್ಲಿ ಅನಿವಾರ್ಯವಾಗಿದೆ.ಬಾಲಚಂದ್ರ ಜಾರಕಿಹೊಳಿ, ಬೆಮುಲ್ ಅಧ್ಯಕ್ಷರು, ಶಾಸಕ