ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಮುಂಬರುವ ಲೋಕಸಭಾ ಚುನಾವಣೆಯ ನಿಮಿತ್ತ ನಗರದ ಪಂಡಿತ್ ದೀನ್ ದಯಾಳ್ ರಸ್ತೆಯಲ್ಲಿ ಭಾರತೀಯ ಜನತಾ ಪಕ್ಷದ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯವನ್ನು ಗುರುವಾರ ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.ಈ ಸಂದರ್ಭ ಅವರು ಮಾತನಾಡಿ, ಕಾರ್ಯಾಲಯದ ಮೂಲಕ ಕಾರ್ಯಕರ್ತರು ಕೆಲಸ ಮಾಡಲಿದಾರೆ. ಚುನಾವಣೆಯಲ್ಲಿ ಯಾವ ರೀತಿ ಕೆಲಸ ಮಾಡಬೇಕು ಎಂಬ ಕಾರಣಕ್ಕೆ ಕಾರ್ಯಾಲಯ ಆರಂಭಿಸಲಾಗಿದೆ ಎಂದರು.
ಉದ್ಯೋಗ ಸೃಷ್ಠಿ, ಅಭಿವೃದ್ಧಿಯ ಕೆಲಸಗಳಿಗೆ ಒತ್ತು ನೀಡುವುದು ಈ ಬಾರಿಯ ಚುನಾವಣಿ ಮುಖ್ಯ ಉದ್ದೇಶವಾಗಿದೆ. ದಕ್ಷಿಣ ಕನ್ನಡ ಮತ್ತು ಮಲೆನಾಡಿನ ನಡುವಿನ ಹೆಬ್ಬಾಗಿಲಾಗಿರುವ ಆಗುಂಬೆಯಲ್ಲಿ ಟನಲ್ ನಿರ್ಮಿಸಲು ಡಿಪಿಆರ್ ರಚಿಸಲಾಗುತ್ತಿದೆ. ಇವತ್ತಲ್ಲ ನಾಳೆ ಅದನ್ನ ಪೂರ್ಣಗೊಳಿಸುತ್ತೇವೆ ಎಂದು ಹೇಳಿದರು.ಬಿಜೆಪಿ ಹಿರಿಯ ಮುಖಂಡ ಎಂ.ಬಿ. ಭಾನುಪ್ರಕಾಶ್, ಶಾಸಕ ಎಸ್.ಎನ್. ಚನ್ನಬಸಪ್ಪ, ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್ , ಡಾ.ಧನಂಜಯ್ ಸರ್ಜಿ , ಎಸ್.ಎಸ್. ಜ್ಯೋತಿಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಲವು ಬಡಾವಣೆಗೆ ಸಂಸದರ ಭೇಟಿ:ಮಾ.18ರಂದು ಶಿವಮೊಗ್ಗ ನಗರಕ್ಕೆ ಚುನಾವಣಾ ಪ್ರಚಾರ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆ ಅಂದು ಅಲ್ಲಮ ಪ್ರಭು ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶ ಅಂಗವಾಗಿ ಗುರುವಾರ ನಗರದ ಗಾಡಿಕೊಪ್ಪ, ಆದರ್ಶ ಬಡಾವಣೆ, ಅಲ್ಕೊಳ, ತಮಿಳು ಕ್ಯಾಂಪ್ ಹಾಗೂ ಬೆಂಕಿ ನಗರದ ಬಡಾವಣೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ, ಸಾರ್ವಜನಿಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಈ ಸಂದರ್ಭ ಶಾಸಕ ಎಸ್.ಎನ್. ಚನ್ನಬಸಪ್ಪ, ಬಿಜೆಪಿ ನಗರ ಅಧ್ಯಕ್ಷ ಮೋಹನ್ ರೆಡ್ಡಿ, ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ:
ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಹಿನ್ನೆಲೆ ಸಂಸದ ಬಿ.ವೈ.ರಾಘವೇಂದ್ರ ಅವರು ಗುರುವಾರ ತಮ್ಮ ಬೆಂಬಲಿಗರೊಂದಿಗೆ ತಿಲಕ್ ನಗರದ ರಾಘವೇಂದ್ರಸ್ವಾಮಿ ಮಠಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.- - -
-14ಎಸ್‌ಎಂಜಿಕೆಪಿ07:ಶಿವಮೊಗ್ಗ ನಗರದ ಪಂಡಿತ್ ದೀನ್ ದಯಾಳ್ ರಸ್ತೆಯಲ್ಲಿ ಲೋಕಸಭಾ ಚುನಾವಣೆಯ ನಿಮಿತ್ತ ಭಾರತೀಯ ಜನತಾ ಪಕ್ಷದ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯವನ್ನು ಗುರುವಾರ ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.