ಜ್ಞಾನಜ್ಯೋತಿ ವಿದ್ಯಾಸಂಸ್ಥೆ ಹಳೆ ವಿದ್ಯಾರ್ಥಿಗಳ ಸಂಘ ರಚನೆ

| Published : Nov 11 2024, 01:06 AM IST

ಸಾರಾಂಶ

ಹಳೆಯ ವಿದ್ಯಾರ್ಥಿಗಳು ಸಂಘದ ಅಧ್ಯಕ್ಷರನ್ನಾಗಿ ತಾಯಿಬ್‌ ಅವರನ್ನು ಆಯ್ಕೆ ಮಾಡಲಾಯಿತು. ಸಂಘದ ಉಪಾಧ್ಯಕ್ಷರಾಗಿ ವಂಶಿ ಅವರನ್ನು ಆಯ್ಕೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಮೂರ್ನಾಡು

ಇಲ್ಲಿನ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ರಚನೆ ಮಾಡಲಾಯಿತು.

ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ತಾಯಿಬ್ ಅವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಯಿತು.

ಸಂಘದ ಉಪಾಧ್ಯಕ್ಷರಾಗಿ ವಂಶಿ, ಕಾರ್ಯದರ್ಶಿಯಾಗಿ ಬಿ.ಪಿ. ವಿಘ್ನೇಶ್, ಸಹ ಕಾರ್ಯದರ್ಶಿ ಸೂರಜ್, ಖಜಾಂಚಿಯಾಗಿ ಜಮುನ, ಈವೆಂಟ್ ಸಂಯೋಜಕರಾಗಿ ಉತ್ತಪ್ಪ ಮತ್ತು ದಿವಿನ್ ಅವರನ್ನು ಆಯ್ಕೆಮಾಡಲಾಯಿತು. ಇದಲ್ಲದೆ ಸಂಘದ ನಿರ್ದೇಶಕರಾಗಿ ಪಿ.ಸಿ ಅಯ್ಯಪ್ಪ, ಜರಾ, ಕಾವೇರಪ್ಪ, ಅರ್ಶನ್, ನಾಚಪ್ಪ, ಬೋಜಮ್ಮ, ಪೊನ್ನಪ್ಪ, ಕಾವೇರಮ್ಮ, ಬಿದ್ದಪ್ಪ, ವರ್ಷಿಣಿ ಮತ್ತು ಮಹೇಶ್ವರಿ ಆಯ್ಕೆಯಾದರು.

ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಾಸ್ತಾವಿಕವಾಗಿ ಮಾತನಾಡಿದ ಡಾ. ಜೆ.ಎ. ಕುಂಞ ಅಬ್ದುಲ್ಲಾ ಹಳೆ ವಿದ್ಯಾರ್ಥಿಗಳ ಸಂಘವು ಸಂಪೂರ್ಣವಾಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ವ್ಯವಸ್ಥೆಯಡಿಯಲ್ಲಿದ್ದು, ಹಳೆಯ ವಿದ್ಯಾರ್ಥಿಗಳು ವಿದ್ಯಾಸಂಸ್ಥೆಯ ಒಡನಾಟದಲ್ಲಿರಲು ಸಂಘವನ್ನು ಸ್ಥಾಪನೆ ಮಾಡಲಾಗಿದೆ.

ವಿದ್ಯಾಸಂಸ್ಥೆಯಲ್ಲಿ ಸಂಘದ ವತಿಯಿಂದ ಆಯೋಜಿಸಲಾಗುವ ಎಲ್ಲ ಕಾರ್ಯಕ್ರಮಗಳಿಗೂ ಸಹಕಾರ, ಪ್ರೋತ್ಸಾಹ ನೀಡಲಾಗುವುದು ಎಂದ ಅವರು ಸಂಘದ ರಚನೆ ಉದ್ದೇಶಗಳ ಬಗ್ಗೆ ವಿವರಣೆ ನೀಡಿದರು.

ವಿದ್ಯಾಸಂಸ್ಥೆಯ ಮಾಜಿ ಅಧ್ಯಕ್ಷ ಮಾಳೇಟಿರ ನವೀನ್ ಕಾರ್ಯಪ್ಪ, ಖಜಾಂಚಿ ಎನ್.ಒ. ಮ್ಯಾಥ್ಯು, ನಿರ್ದೇಶಕ ಅವರೆಮಾದಂಡ ಸುಗುಣ ಸುಬ್ಬಯ್ಯ, ನಿವೃತ್ತ ಮುಖ್ಯೋಪಾಧ್ಯಾಯಿನಿ ಶೀಲಾ ಅಬ್ದುಲ್ಲಾ, ಶಾಲಾ ಮುಖ್ಯೋಪಾಧ್ಯಾಯಿನಿ ಶಿಲ್ಪ ಪೊನ್ನಮ್ಮ ಇದ್ದರು.

ಶಾಲಾ ಶಿಕ್ಷಕಿ ಸರಳ ಪ್ರಾರ್ಥಿಸಿದರು. ಮುಖ್ಯಶಿಕ್ಷಕಿ ಶಿಲ್ಪ ಪೊನ್ನಮ್ಮ ಸ್ವಾಗತಿಸಿ, ವಂದಿಸಿದರು.