ಕಾಂಗ್ರೆಸ್ ಸರ್ಕಾರ ಬಂದಾಗ ಬರಗಾಲ

| Published : Apr 18 2024, 02:23 AM IST

ಸಾರಾಂಶ

ಮಹಿಳೆಯರಿಗೆ 2000 ಹಣ ನೀಡುವ ನೆಪದಲ್ಲಿ ಮಧ್ಯದ ಬೆಲೆಯನ್ನು ಏರಿಕೆ ಮಾಡುವ ಮೂಲಕ ಪಿಕ್ ಪಾಕೆಟ್ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ರೈತರ ಯಾವುದೇ ಸಮಸ್ಯೆ ಬಗೆಹರಿಸದೆ ಸುಳ್ಳು ಭರವಸೆ ನೀಡುತ್ತಾ ರಾಜ್ಯದ ಜನರಿಗೆ ಮೋಸ ಮಾಡಿ ಜನ ವಿರೋಧಿ ನೀತಿ ಅನುಸರಿಸುತ್ತಿರುವ ಈ ಸರ್ಕಾರಕ್ಕೆ ಪಾಠ ಕಲಿಸುವ ಸಲುವಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸ ಮಾಡಿ

ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣ

ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಬರಗಾಲ ಬರುತ್ತಿದ್ದು, ಕಳೆದ ಏಳು ತಿಂಗಳಿಂದ ವಿವಿಧ ಯೋಜನೆಯ ಫಲಾನುಭವಿಗಳಿಗೆ ಹಣ ಹಾಕದೆ ಇರುವ ಕಾಂಗ್ರೆಸ್ ಸರ್ಕಾರ ಪಿಕ್ ಪಾಕೆಟ್ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.

ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಯದುವಿರ್ ಪರ ಪಟ್ಟಣದ ಬಿ.ಎಮ್. ರಸ್ತೆಯಲ್ಲಿ ಮಂಗಳವಾರ ರೋಡ್ ಶೋ ನಡೆಸಿ ಮತ ಯಾಚಿಸಿದರು. ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ರೈತರು ಕಂಗಾಲಾಗಿದ್ದು ಕಾಂಗ್ರೆಸ್ ನಂಥ ಕೆಟ್ಟ ಸರ್ಕಾರ ರಾಜ್ಯದಲ್ಲಿ ಹಿಂದೆಂದೂ ನಾವೆಂದು ಕಂಡಿರಲಿಲ್ಲ. ರೈತರಿಗೆ ಬರಗಾಲದ ಪರಿಹಾರವನ್ನು ಕೇವಲ 2000 ನೀಡುವ ಮೂಲಕ ರೈತರನ್ನು ಇನ್ನಷ್ಟು ಕಷ್ಟಕ್ಕೆ ದುಡುತ್ತಿದ್ದಾರೆ ಎಂದು ಟೀಕಿಸಿದರು.

ಮಹಿಳೆಯರಿಗೆ 2000 ಹಣ ನೀಡುವ ನೆಪದಲ್ಲಿ ಮಧ್ಯದ ಬೆಲೆಯನ್ನು ಏರಿಕೆ ಮಾಡುವ ಮೂಲಕ ಪಿಕ್ ಪಾಕೆಟ್ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ರೈತರ ಯಾವುದೇ ಸಮಸ್ಯೆ ಬಗೆಹರಿಸದೆ ಸುಳ್ಳು ಭರವಸೆ ನೀಡುತ್ತಾ ರಾಜ್ಯದ ಜನರಿಗೆ ಮೋಸ ಮಾಡಿ ಜನ ವಿರೋಧಿ ನೀತಿ ಅನುಸರಿಸುತ್ತಿರುವ ಈ ಸರ್ಕಾರಕ್ಕೆ ಪಾಠ ಕಲಿಸುವ ಸಲುವಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸ ಮಾಡಿ ಎಂದು ಅವರು ಕರೆ ನೀಡಿದರು.

ಯದುವೀರ್ ಅವರು ಅತ್ಯಂತ ಸಂಭಾವಿತ ವ್ಯಕ್ತಿಯಾಗಿದ್ದು ಮಾದರಿ ಸಂಸದರಾಗಿ ಕೆಲಸ ಮಾಡುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಮತಗಟ್ಟೆಯಲ್ಲಿ ನಮ್ಮ ಪಕ್ಷದ ಚಿನ್ಹೆ ಕಾಣುತ್ತಿಲ್ಲವೆಂದು ಜೆಡಿಎಸ್ ಕಾರ್ಯಕರ್ತರು ಗೊಂದಲಕ್ಕೀಡಾಗುವುದು ಬೇಡ ಕಮಲದ ಗುರುತಿಗೆ ಮತ ನೀಡಿ ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಮತ್ತೊಮ್ಮೆ ಮೋದಿ ಪ್ರಧಾನಮಂತ್ರಿ ಆಗಬೇಕು, ಅವರ ಕೈ ಬಲಪಡಿಸಲು ಯದುವೀರ ಅವರನ್ನು ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.

ಈ ವೇಳೆ ಮಾಜಿ ಶಾಸಕ ಕೆ. ಮಹದೇವ್, ಮೈಮುಲ್ ಅಧ್ಯಕ್ಷ ಪಿ.ಎಂ. ಪ್ರಸನ್ನ, ಕೆ. ರಮೇಶ್, ಸುಂದರೇಗೌಡ, ಲೋಕಸಭೆ ಬಿಜೆಪಿ ಅಭ್ಯರ್ಥಿ ಯದುವೀರ್, ಶಾಸಕ ಜಿ.ಡಿ. ಹರೀಶ್ ಗೌಡ, ತಾಲೂಕು ಬಿಜೆಪಿ ಅಧ್ಯಕ್ಷ ವಿ. ರಾಜೇಂದ್ರ, ತಾಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ದೀಪು ಇದ್ದರು.