ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ

| Published : Mar 23 2024, 01:03 AM IST

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆ ಮಂಡ್ಯ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವ ಮೂಲಕ ಗೆಲುವು ಸಾಧಿಸಿ ರಾಷ್ಟ್ರ ರಾಜಕಾರಣದ ಮಾಡಲಿದ್ದಾರೆ. ಇನ್ನು ಹಲವು ವರ್ಷಗಳ ಕಾಲ ಕುಮಾರಸ್ವಾಮಿ ಅವರ ಸೇವೆ ರಾಷ್ಟ್ರ ಮತ್ತು ರಾಜ್ಯ ರಾಜಕಾರಣಕ್ಕೆ ಸದ್ಬಳಕೆಯಾಗಲಿ. ಭಗವಂತನ ಕೃಪೆ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಟುಂಬ ವರ್ಗದವರ ಆಶೀರ್ವಾದ ಮತ್ತು ಹಾರೈಕೆಯಿಂದ ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಹೃದಯ ಸಂಬಂಧಿಸಿದ ಶಸ್ತ್ರ ಚಿಕಿತ್ಸೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಗುರುವಾರ ಪಟ್ಟಣದ ಶ್ರೀ ಉಗ್ರ ನರಸಿಂಹಸ್ವಾಮಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ ನೇತೃತ್ವದಲ್ಲಿ ಪಕ್ಷದ ಜನಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಪುರಾಣ ಪ್ರಸಿದ್ಧ ಶ್ರೀ ಉಗ್ರ ನರಸಿಂಹ ಸ್ವಾಮಿ, ಹೊಳೆ ಆಂಜನೇಯ ಸ್ವಾಮಿ ಹಾಗೂ ಶಕ್ತಿ ದೇವತೆ ಮದ್ದೂರಮ್ಮ ದೇವಾಲಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ ಶೀಘ್ರ ಗುಣಮುಖ ರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

ವಿಶೇಷ ಪೂಜೆ ನಂತರ ಸುದ್ದಿಗಾರರಿಗೆ ಮಾತನಾಡಿದ ಮಾದನಾಯಕನಹಳ್ಳಿ ರಾಜಣ್ಣ, ಭಗವಂತನ ಕೃಪೆ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಟುಂಬ ವರ್ಗದವರ ಆಶೀರ್ವಾದ ಮತ್ತು ಹಾರೈಕೆಯಿಂದ ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ ಎಂದರು.

ಲೋಕಸಭಾ ಚುನಾವಣೆ ಮಂಡ್ಯ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವ ಮೂಲಕ ಗೆಲುವು ಸಾಧಿಸಿ ರಾಷ್ಟ್ರ ರಾಜಕಾರಣದ ಮಾಡಲಿದ್ದಾರೆ ಎಂದರು.

ಇನ್ನು ಹಲವು ವರ್ಷಗಳ ಕಾಲ ಕುಮಾರಸ್ವಾಮಿ ಅವರ ಸೇವೆ ರಾಷ್ಟ್ರ ಮತ್ತು ರಾಜ್ಯ ರಾಜಕಾರಣಕ್ಕೆ ಸದ್ಬಳಕೆಯಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಚಿಕ್ಕ ತಿಮ್ಮೇಗೌಡ ಮಾತನಾಡಿ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ವಿಚಾರದಲ್ಲಿ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಂಸದೆ ಸುಮಲತಾ ಬೆಂಬಲಿಗರು ಮತ್ತು ಅಂಬರೀಶ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಬೆಂಬಲಿಸುವ ಮೂಲಕ ಅತ್ಯಧಿಕ ಮತಗಳಿಂದ ಗೆಲುವು ತಂದುಕೊಡಲಿದ್ದಾರೆ ಎಂದು ಭವಿಷ್ಯ ನುಡಿದರು.

ಈ ವೇಳೆ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷ ದಿವ್ಯ ರಾಮಚಂದ್ರ ಶೆಟ್ಟಿ, ಯುವ ಘಟಕದ ಅಧ್ಯಕ್ಷ ಎಂ.ಐ.ಪ್ರವೀಣ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಕೃಷಿಕ ಸಮಾಜದ ನಿರ್ದೇಶಕ ಗೆಜ್ಜಲಗೆರೆ ಪುಟ್ಟಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಳಿಯಪ್ಪ, ಪುರಸಭಾ ಸದಸ್ಯರಾದ ಮಹೇಶ್, ಟಿ.ಆರ್. ಪ್ರಸನ್ನ ಕುಮಾರ್, ವನಿತಾ, ಪ್ರಮೀಳಾ, ರತ್ನಮ್ಮ, ಬಸವರಾಜು, ಆದಿಲ್, ಮುಖಂಡರಾದ ಕೂಳೆಗೆರೆ ಶೇಖರ್, ಅಪ್ಪುಗೌಡ, ಶಿವನಂಜಪ್ಪ, ಬಸವರಾಜು, ಬಾಲರಾಜು, ಬಿ.ಸಿ.ಮಹೇಂದ್ರ, ರಾಧಾಕೃಷ್ಣ, ಪುಟ್ಟಸ್ವಾಮಿ, ಪಂಚಲಿಂಗೇಗೌಡ, ಸಿ.ಕೆ.ಮೂರ್ತಿ, ಚಾಮನಹಳ್ಳಿ ಗ್ರಾಪಂ ಅಧ್ಯಕ್ಷ ಸಿದ್ದರಾಜು, ಜಿಪಂ ಮಾಜಿ ಸದಸ್ಯ ಕೆ.ರವಿ ಮತ್ತಿತರರು ಇದ್ದರು.