ಸಾರಾಂಶ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 81ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದಲ್ಲಿ ಬಿಜೆಪಿ ಮುಖಂಡರು ಹಾಗೂ ಹಿತೈಷಿಗಳು ನೂರಾರು ಮಂದಿ ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿದರು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 81ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದಲ್ಲಿ ಬಿಜೆಪಿ ಮುಖಂಡರು ಹಾಗೂ ಹಿತೈಷಿಗಳು ನೂರಾರು ಮಂದಿ ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿದರು.
ಬಿಜೆಪಿ ಯುವ ಮುಖಂಡ ಇಂಡುವಾಳು ಸಚ್ಚಿದಾನಂದ, ರೈತ ಹೋರಾಟಗಾರ ಕೆ.ಎಸ್ ನಂಜುಂಡೇಗೌಡ, ಟಿ.ಶ್ರೀಧರ್, ಬಿಜೆಪಿ ತಾಲೂಕು ಅಧ್ಯಕ್ಷ ಪೀ.ಹಳ್ಳಿ ರಮೇಶ್ ಸೇರಿದಂತೆ ಇತರರ ನೇತೃತ್ವದಲ್ಲಿ ಪಟ್ಟಣದ ಶ್ರೀರಂಗನಾಥಸ್ವಾಮಿ ದೇಗುಲದ ಆವರಣದಲ್ಲಿ ಸಮವಸ್ತ್ರ ವಿತರಿಸಲಾಯಿತು.
ಇದೇ ವೇಳೆ ಪರಸ್ಪರ ಸಿಹಿ-ಹಂಚಿ ಸಂಭ್ರಮಿಸಿದ ಮುಖಂಡರು, ಯಡಿಯೂರಪ್ಪ ದಕ್ಷ ಆಡಳಿತಗಾರರಾಗಿದ್ದು ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 28 ಸ್ಥಾನ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ರೈತರ ಬಗ್ಗೆ ವಿಶೇಷ ಕಾಳಜಿಯಿಂದ ಮೊದಲ ಬಾರಿಗೆ ಬಜೆಟ್‌ನಲ್ಲಿ ರೈತರ ಅಭ್ಯುದಯಕ್ಕಾಗಿ ಹಣ ಮೀಸಲಿಟ್ಟ ಯಡಿಯೂರಪ್ಪ ಅವರ ಮಾರ್ಗದರ್ಶನವು ರಾಜ್ಯ ಮತ್ತು ರಾಷ್ಟ್ರ ರಾಜಕಾರಣಕ್ಕೆ ಅತ್ಯವಶ್ಯಕವಾಗಿದೆ. ಪಕ್ಷ ಬಲವರ್ಧನೆಗೆ ಮತ್ತಷ್ಟು ಶಕ್ತಿ ತುಂಬಲಿದ್ದಾರೆ ಎಂದರು.
ಈ ವೇಳೆ ಪುರಸಭೆ ಸದಸ್ಯರಾದ ಗಂಜಾಂ ಕೃಷ್ಣಪ್ಪ, ಗಂಜಾಂ ಶಿವು, ಎಸ್.ಪ್ರಕಾಶ್, ಎಸ್.ಟಿ.ರಾಜು, ಮಾಜಿ ಸದಸ್ಯೆ ಜಯಲಕ್ಷ್ಮಿ, ದರ್ಶನ್ ಲಿಂಗರಾಜು ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.
ಮಳವಳ್ಳಿಯಲ್ಲಿ ಮಾಜಿ ಸಿಎಂ ಬಿಎಸ್‌ವೈ ಹುಟ್ಟುಹಬ್ಬ ಆಚರಣೆ
ಮಳವಳ್ಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 81 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪ್ಯಾನ್ ನೀಡಿ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಕೃಷ್ಣ ಮಾತನಾಡಿ, ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿ ರಾಜ್ಯಕ್ಕೆ ಹಲವು ಕೊಡುಗೆ ನೀಡಿದ್ದಾರೆ, ಬಿಜೆಪಿ ಪಕ್ಷ ಕಟ್ಟಲು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು.
ಯಡಿಯೂರಪ್ಪ ಅವರಿಗೆ ದೇವರು ಆಯಸ್ಸು ಆರೋಗ್ಯವನ್ನು ನೀಡಲಿ ಎಂದರು.ಪ್ರಸ್ತುತ ಬರಗಾಲ ಇರುವುದರಿಂದ ರೈತಪರ ನಾಯಕ ಯಡಿಯೂರಪ್ಪರವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡುತ್ತಿದ್ದು, ಲೋಕಸಭಾ ಚುನಾವಣೆ ನೇತೃತ್ವ ವಹಿಸಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲಲಿ ಆಶಿಸಿದರು.
ಇದಕ್ಕೂ ಮುನ್ನ ಕೋಟೆ ಶ್ರೀಗಂಗಾಧರೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಚಿಕ್ಕಣ್ಣ, ಶಿವಲಿಂಗಸ್ಥಾಮಿ, ಜಗದೀಶ, ಪುರಸಭೆ ಸದಸ್ಯರವಿ, ಮುದ್ದಮಲ್ಲು, ದೇವರಾಜು,ಸ್ವಾಮಿ, ಅಶೋಕ ಸೇರಿದಂತೆ ಹಲವರು ಇದ್ದರು.