ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿದರು.ಜೆಡಿಎಸ್ ತಾಲೂಕು ಅಧ್ಯಕ್ಷ ಎ.ಎನ್.ಜಾನಕಿರಾಮ್ ಮಾತನಾಡಿ, ರಾಜ್ಯ ಕಂಡ ರೈತರ ಪರ ಅಪರೂಪದ ಮಾಜಿ ಮುಖ್ಯ ಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬವನ್ನು ಶಾಸಕ ಎಚ್.ಟಿ.ಮಂಜು ಅವರ ಅನುಪಸ್ಥಿತಿಯಲ್ಲಿ ತಾಲೂಕು ಜೆಡಿಎಸ್ ಕಾರ್ಯಕರ್ತರು ಮುಖಂಡರು ಸೇರಿ ಆಚರಣೆ ಮಾಡುತ್ತಿದ್ದೇವೆ ಎಂದರು.
ಮುಖ್ಯಮಂತ್ರಿಯಾಗಿ ರಾಜ್ಯದ ರೈತರು, ಕಾರ್ಮಿಕರು ಸೇರಿದಂತೆ ದುಡಿಯುವ ಶ್ರಮಿಕ ವರ್ಗದ ಪರ ಸಾಮಾಜಿಕ ನ್ಯಾಯ ಕಲ್ಪಿಸಿ ರಾಜ್ಯದ ರೈತರ ಧೀನ ದಲಿತರ ಬಗ್ಗೆ ಸದಾ ಚಿಂತಿಸಿದ ಏಕೈಕ ಅಪರೂಪದ ರಾಜಕಾರಣಿ ಎಚ್.ಡಿ.ಕುಮಾರಣ್ಣ ಎಂದರು.ಮುಂದಿನ ದಿನಗಳಲ್ಲಿ ದೇಶ ಮತ್ತು ರಾಜ್ಯಕ್ಕೆ ಅವರ ಸೇವೆ ಅವಶ್ಯಕ. ಅವರ ಆರೋಗ್ಯ ಮತ್ತು ಆಯಸ್ಸು ವೃದ್ಧಿಸಲಿ ಎಂದು ತಾಲೂಕು ಸರ್ಕಾರಿ ಆಸ್ಪತ್ರೆ ಹೊರ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿದ್ದೇವೆ ಎಂದರು.
ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಎಚ್.ಟಿ.ಲೋಕೇಶ್ ಮಾತನಾಡಿ, ರಾಜ್ಯ ರೈತರ ಅಭಿವೃದ್ಧಿಗೆ ದುಡಿಯುತ್ತಿರುವ ನಮ್ಮ ನಾಯಕರಾದ ಎಚ್.ಡಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಆಚರಿಸುವುದು ನಮ್ಮೆಲ್ಲರ ಕರ್ತವ್ಯ. ಎಚ್ಡಿಕೆ ಅವರಿಗೆ ದೇವರು ಶಕ್ತಿ ನೀಡಿ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ನೋಡಲು ರಾಜ್ಯದ ಜನತೆ ಕಾತುರರಾಗಿದ್ದಾರೆ ಎಂದರು.ಈ ವೇಳೆ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶಶಿಧರ್, ರಾಜ್ಯ ಸಹಕಾರ ಮರಾಟ ಮಹಾಮಂಡಳಿ ನಿರ್ದೇಶಕ ಶೀಳನೆರೆ ಮೋಹನ್, ಎಂಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೊಸಹೊಳಲು ಅಶೋಕ್, ತಾಪಂ ಮಾಜಿ ಸದಸ್ಯ ಮಲ್ಲೇನಹಳ್ಳಿ ಮೋಹನ್, ಮುಖಂಡ ನಾಟನಹಳ್ಳಿ ಬೋರ್ ವೆಲ್ ಮಹೇಶ್, ಕಸಬಾ ಜೆಡಿಎಸ್ ಅಧ್ಯಕ್ಷ ಮಾಕವಳ್ಳಿ ವಸಂತಕುಮಾರ್, ಸಂತೆಬಾಚಹಳ್ಳಿ ಜೆಡಿಎಸ್ ಅಧ್ಯಕ್ಷ ರವಿಕುಮಾರ್, ಚೌಡೇನಹಳ್ಳಿ ನಾಗರಾಜು, ಅಕ್ಕಿಹೆಬ್ಬಾಳು ಜೆಡಿಎಸ್ ಬಸವಲಿಂಗಪ್ಪ, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಅಗ್ರಹಾರ ಬಾಚಹಳ್ಳಿ ನಾಗೇಶ್, ಪುರಸಭಾ ಸದಸ್ಯರಾದ ಗಿರೀಶ್, ಇಂದ್ರಾಣಿ ವಿಶ್ವನಾಥ್, ತಾಲೂಕು ವೀರಶೈವ ಮಹಾಸಬಾದ ಮಾಜಿ ಅಧ್ಯಕ್ಷ ವಡ್ಡರಹಳ್ಳಿ ಧನಂಜಯ, ಸಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ, ಮಾಕವಳ್ಳಿ ಕುಮಾರ್ ಸೇರಿದಂತೆ ನೂರಾರು ಜೆಡಿಎಸ್ ಕಾರ್ಯಕರ್ತರು ಇದ್ದರು.