ಸಾರಾಂಶ
ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿಗೆ ಆಗಮಿಸಿದ ಎಚ್ಡಿಕೆ ಪಕ್ಷದ ಮುಖಂಡರೊಂದಿಗೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಕುರಿತು ಮಾತುಕತೆ ನಡೆಸಿದರು. ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ಕಾರ್ಯಕರ್ತರು ಒಗ್ಗಟ್ಟಿನಿಂದ ಪ್ರಚಾರ ನಡೆಸಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ ಮದ್ದೂರು
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಪಟ್ಟಣದ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಚುನಾವಣೆ ಸಂಬಂಧ ಮುಖಂಡರೊಂದಿಗೆ ಚರ್ಚೆ ನಡೆಸಿದರು.ಪಟ್ಟಣದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿಗೆ ಆಗಮಿಸಿದ ಎಚ್ಡಿಕೆ ಪಕ್ಷದ ಮುಖಂಡರೊಂದಿಗೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಕುರಿತು ಮಾತುಕತೆ ನಡೆಸಿದರು. ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ಕಾರ್ಯಕರ್ತರು ಒಗ್ಗಟ್ಟಿನಿಂದ ಪ್ರಚಾರ ನಡೆಸಬೇಕು ಎಂದು ಮನವಿ ಮಾಡಿದರು.
ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸುವುದು ನಿಶ್ಚಯವಾಗಿದೆ. ಬಿಜೆಪಿ ಮುಖಂಡ, ಮನ್ಮುಲ್ ನಿರ್ದೇಶಕ ಎಸ್. ಪಿ. ಸ್ವಾಮಿ ಮತ್ತು ಅವರ ಬೆಂಬಲಿಗರು ಈ ಹಿಂದೆ ಜೆಡಿಎಸ್ ಪಕ್ಷದಲ್ಲಿ ಇದ್ದು ಕೆಲವೊಂದು ಕಾರಣಗಳಿಂದಾಗಿ ದೂರ ಸರಿದಿದ್ದರು. ಈಗ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಹೊಂದಾಣಿಕೆಯಿಂದಾಗಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಇದರಿಂದ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ಗೆಲುವು ಸಾಧಿಸುವುದು ನಿಶ್ಚಯವಾಗಿದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.ಈ ವೇಳೆ ಮಾಜಿ ಸಚಿವ ಡಿ.ಸಿ. ತಮ್ಮಣ್ಣ. ಬಿಜೆಪಿ ಜಿಲ್ಲಾಧ್ಯಕ್ಷ ಇಂದ್ರೇಶ, ಮಾಜಿ ಅಧ್ಯಕ್ಷ ಉಮೇಶ, ಮದ್ದೂರು ಮಂಡಲದ ಅಧ್ಯಕ್ಷ ಸಿ.ಕೆ. ಸತೀಶ್, ಜಿಪಂ ಮಾಜಿ ಸದಸ್ಯ ಸಾದೊಳಲು ಕೃಷ್ಣೇಗೌಡ, ಮುಖಂಡರಾದ ಹಾಗಲಹಳ್ಳಿ ರಘು. ಡಾಬಾ ಕಿಟ್ಟಿ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಇದ್ದರು.