ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಗೆಲುವು ಖಚಿತ: ಜ್ಯೋತಿ ಪ್ರಕಾಶ್ ಮಿರ್ಜಿ

| Published : Mar 28 2024, 12:49 AM IST

ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಗೆಲುವು ಖಚಿತ: ಜ್ಯೋತಿ ಪ್ರಕಾಶ್ ಮಿರ್ಜಿ
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಪ್ರಧಾನಿ ದೇವೇಗೌಡರು ರಾಜ್ಯದಲ್ಲಿ ರೈತ ಪರ, ನೀರಾವರಿಗಾಗಿ ಹೆಚ್ಚು ಒತ್ತುಕೊಟ್ಟಿದ್ದಾರೆ. ಅವರು ಮಾಡಿರುವ ಕೆಲಸಗಳು ಇದುವರೆಗೂ ಯಾವ ರಾಜಕಾರಣಿಯು ಮಾಡಿಲ್ಲ. ರಾಜ್ಯದ ಏಳಿಗೆಗೆ ಶ್ರಮಿಸಿದ್ದಾರೆ. ಈ ವಯಸ್ಸಿನಲ್ಲೂ ಸಹ ಅವರು ರಾಜ್ಯದ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ, ಬಡವರು ಹಾಗು ದೀನ ದಲಿತರ ಏಳ್ಗೆಗಾಗಿ ಹಾಗೂ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಅನೇಕ ಯೋಜನೆ ಜಾರಿಗೆ ತಂದಿದ್ದಾರೆ. ಅವರನ್ನು ಮತ್ತೆ ಗೆಲ್ಲಿಸಿದರೆ ಕರ್ನಾಟಕದ ಅಭಿವೃದ್ಧಿ ಮತ್ತಷ್ಟು ಅನುಕೂಲವಾಗಿದೆ.

ಕನ್ನಡಪ್ರಭ ವಾರ್ತೆ ಹಲಗೂರು

ಮಂಡ್ಯ ಲೋಕಸಭಾ ಚುನಾವಣೆಗೆ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು ನೂರಕ್ಕೆ ನೂರರಷ್ಟು ಗೆಲವು ಸಾಧಿಸುತ್ತಾರೆ ಎಂದು ರಾಜ್ಯ ಜೆಡಿಎಸ್ ಹಿರಿಯ ಉಪಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿಪ್ರಕಾಶ್ ಮಿರ್ಜಿ ವಿಶ್ವಾಸ ವ್ಯಕ್ತಪಡಿಸಿದರು.

ನಡುಕೇರಿ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಣೆ, ಚುನಾವಣೆಯಲ್ಲಿ ಗೆಲುವು ಸಾಧಿಸುವಂತೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿ, ಪ್ರಧಾನಿ ಮೋದಿ ತೆಗೆದುಕೊಂಡಿರುವ ನಿರ್ಧಾರಗಳು ಇಡೀ ರಾಷ್ಟ್ರವೇ ಮೆಚ್ಚುತ್ತಿದೆ. ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಾಗಿರುವುದು ದೇಶದ ಭದ್ರತೆ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿ ಎಂದರು.

ಮಾಜಿ ಪ್ರಧಾನಿ ದೇವೇಗೌಡರು ರಾಜ್ಯದಲ್ಲಿ ರೈತ ಪರ, ನೀರಾವರಿಗಾಗಿ ಹೆಚ್ಚು ಒತ್ತುಕೊಟ್ಟಿದ್ದಾರೆ. ಅವರು ಮಾಡಿರುವ ಕೆಲಸಗಳು ಇದುವರೆಗೂ ಯಾವ ರಾಜಕಾರಣಿಯು ಮಾಡಿಲ್ಲ. ರಾಜ್ಯದ ಏಳಿಗೆಗೆ ಶ್ರಮಿಸಿದ್ದಾರೆ. ಈ ವಯಸ್ಸಿನಲ್ಲೂ ಸಹ ಅವರು ರಾಜ್ಯದ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ ಎಂದರು.

ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ, ಬಡವರು ಹಾಗು ದೀನ ದಲಿತರ ಏಳ್ಗೆಗಾಗಿ ಹಾಗೂ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಅನೇಕ ಯೋಜನೆ ಜಾರಿಗೆ ತಂದಿದ್ದಾರೆ. ಅವರನ್ನು ಮತ್ತೆ ಗೆಲ್ಲಿಸಿದರೆ ಕರ್ನಾಟಕದ ಅಭಿವೃದ್ಧಿ ಮತ್ತಷ್ಟು ಅನುಕೂಲವಾಗಿದೆ ಎಂದರು.

ವೀರಶೈವ ಮುಖಂಡ ಬಟ್ಟೆ ಅಂಗಡಿ ರವಿ ಮತ್ತು ಎಚ್.ಎಂ.ಆನಂದ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ ಗೆಲುವಿಗೆ ಶ್ರಮಿಸುವಂತೆ ಕೋರಿದರು.

ಈ ವೇಳೆ ಅರ್ಚಕರಾದ ನಾಗರಾಜು ವೀರಭದ್ರೇಶ್ವರ ದೇವರಿಗೆ ವಿಶೇಷ ಪೂಜೆಗಳನ್ನು ನಡೆಸಿ ಪ್ರಸಾದ ನೀಡಿದರು. ನಂತರ ವಿದ್ವಾಂಸ ಪ್ರಸಾದ್ ಅವರ ನೇತೃತ್ವದಲ್ಲಿ ನಿವೃತ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡರಾದ ಎಚ್.ಎನ್.ರಾಮಚಂದ್ರಗೌಡ, ತಮ್ಮಣ್ಣೇಗೌಡ , ಕರಲುಕಟ್ಟೆ ಸುರೇಶ್, ಅಂಕನಹಳ್ಳಿ ಸದಾಶಿವ, ಮಂಜುನಾಥ (ಎಸ್.ಎಸ್ ), ಎಚ್.ಆರ್.ವಿಶ್ವ, ಬಸವರಾಜು (ಅಭಿ), ಗ್ರಾಪಂ ಸದಸ್ಯ ಎಚ್. ಎನ್ .ಶಿವಕುಮಾರ್ ,ಶಶಿ, ರವೀಶ್, ಆನಂದ, ಗಂಗಾಧರ, ರವಿ ಮೋದಿ ಮೆಡಿಕಲ್ ಸ್ಟೋರ್ ಯತೇಂದ್ರ ಸೇರಿದಂತೆ ಇತರರು ಇದ್ದರು.