ಮಾಜಿ ಸಿಎಂ ಕುಮಾರಸ್ವಾಮಿ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡಿ: ಡಾ.ಎನ್.ಎಸ್.ಇಂದ್ರೇಶ್

| Published : Mar 30 2024, 12:51 AM IST

ಮಾಜಿ ಸಿಎಂ ಕುಮಾರಸ್ವಾಮಿ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡಿ: ಡಾ.ಎನ್.ಎಸ್.ಇಂದ್ರೇಶ್
Share this Article
  • FB
  • TW
  • Linkdin
  • Email

ಸಾರಾಂಶ

ನಾವೆಲ್ಲೆರು ಚುನಾವಣೆಗೆ ಸೀಮಿತಗೊಳ್ಳದೆ ಜಿಲ್ಲೆಯಲ್ಲಿ ಪಕ್ಷವನ್ನು ಗಟ್ಟಿಯಾಗಿ ಕಟ್ಟಿ, ಬೆಳೆಸಿ ಬಿಜೆಪಿ ಸಿದ್ಧಾಂತದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಕಾರ್ಯಕರ್ತರ ಬಿಜೆಪಿ ಪಕ್ಷದ ಯೋಜನೆಗಳನ್ನು ಪ್ರತಿ ಮನೆಮನೆಗೂ ತಲುಪಿಸಿ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಿ, ಎನ್ ಡಿಎ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡಿ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಗೆಲುವಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್‍ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ತಾಲೂಕಿನ ಜಕ್ಕನಹಳ್ಳಿಯಲ್ಲಿ ಮಹಾಶಕ್ತಿ ಕೇಂದ್ರದಿಂದ ನಡೆದ ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಅವರಿಗೆ ಅಭಿನಂದನೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಬರಗಾಲ ಎದುರಾಗಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಆದರೆ, ಆದರೆ, ತಮಿಳುನಾಡಿ ಸಿಎಂ ಸ್ಟಾಲಿನ್ ವಿಶ್ವಾಸಗೊಳಿಸಲು ರಾಜ್ಯದಿಂದ ತಮಿಳುನಾಡಿ ನೀರು ಹರಿಸಿ ರಾಜ್ಯದ ಜನರಿಗೆ ಅನ್ಯಾಯ ಮಾಡಿದೆ ಎಂದು ದೂರಿದರು.

ಕಳೆದ ಬಾರಿ ಕಾಂಗ್ರೆಸ್ ನವರು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಮತ ನೀಡಿದೇ ಬೆನ್ನಿಗೆ ಚೂರಿಹಾಕುವ ಕೆಲಸ ಮಾಡಿದರು. ಆದರೆ, ಬಿಜೆಪಿ ಪಕ್ಷ ಹಾಗಲ್ಲ, ನಮ್ಮದು ಶಿಸ್ತಿನ ಪಕ್ಷ. ನಮ್ಮ ಎನ್ ಡಿಎ ಭಾಗವಾಗಿರುವ ಜೆಡಿಎಸ್ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಮತಕೊಟ್ಟು ಗೆಲ್ಲಿಸಿ ಲೋಕಸಭೆಗೆ ಕಳುಹಿಸುವ ಕೆಲಸ ಮಾಡುತ್ತೇವೆ ಎಂದರು.

ಏಪ್ರಿಲ್ 2 ಕ್ಕೆ ಜಂಟಿ ಸಭೆ:

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಏಪ್ರಿಲ್ 2 ರಂದು ಬಿಜೆಪಿ-ಜೆಡಿಎಸ್ ಜಂಟಿ ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ. ಸಭೆ ರಾಜ್ಯ ಬಿಜೆಪಿ ನಾಯಕರು ಹಾಗೂ ಜೆಡಿಎಸ್ ಯುವ ರಾಜ್ಯಾಧ್ಯಕ್ಷ, ಚಿತ್ರನಟ ನಿಖಿಲ್ ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲಾ ರೈತ ಮೋರ್ಚ್ ಅಧ್ಯಕ್ಷ ಅಶೋಕ್ ಜಯರಾಮು ಮಾತನಾಡಿ, ನಾವೆಲ್ಲೆರು ಚುನಾವಣೆಗೆ ಸೀಮಿತಗೊಳ್ಳದೆ ಜಿಲ್ಲೆಯಲ್ಲಿ ಪಕ್ಷವನ್ನು ಗಟ್ಟಿಯಾಗಿ ಕಟ್ಟಿ, ಬೆಳೆಸಿ ಬಿಜೆಪಿ ಸಿದ್ಧಾಂತದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಕಾರ್ಯಕರ್ತರ ಬಿಜೆಪಿ ಪಕ್ಷದ ಯೋಜನೆಗಳನ್ನು ಪ್ರತಿ ಮನೆಮನೆಗೂ ತಲುಪಿಸಿ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಿ, ಎನ್ ಡಿಎ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡಿ ಎಂದು ಮನವಿ ಮಾಡಿದರು.

ಮಹಿಳಾ ಜಿಲ್ಲಾಧ್ಯಕ್ಷೆ ಮಂಗಳ ನವೀನ್ ಕುಮಾರ್ ಮಾತನಾಡಿ, ಡಾ.ಇಂದ್ರೇಶ್ ಅವರ ಕ್ರೀಯಾಶೀಲತೆ ಹಾಗೂ ಉತ್ತನ ಸಂಘಟಿಕರಾಗಿ ಕೆಲಸ ಮಾಡಿದ ಪರಿಣಾಮ ಪಕ್ಷದ ವರಿಷ್ಢರು ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಿದ್ದಾರೆ. ನಾವೆಲ್ಲರೂ ಭವ್ಯ ಭಾರತ ನಿರ್ಮಾಣಕ್ಕಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರಮೋದಿ ಅವರು ಕೈಬಲಪಡಿಸಬೇಕಾಗುತ್ತದೆ ಎಂದರು.

ಸಮಾರಂಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಧನಂಜಯ್, ಜಕ್ಕನಹಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಎನ್.ಟಿ. ಸೋಮಶೇಖರ್‌ ಮಾತನಾಡಿದರು. ಜಿಲ್ಲಾ ಮಹಿಳಾ ಮೋರ್ಚ ಅಧ್ಯಕ್ಷೆ ಮಂಗಳನವೀನ್ ಕುಮಾರ್ ನೇತೃತ್ವದಲ್ಲಿ ಹಲವು ಮಹಿಳೆಯರು ಬಿಜೆಪಿ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಉಪಾಧ್ಯಕ್ಷ ಪಿ.ಕೆ.ರಮೇಶ್, ಪುರುಷೋತ್ತಮ್, ಮಹಿಳಾ ಅಧ್ಯಕ್ಷತೆ ಮಂಜುಳ ಶಂಕರ್ ನಾಗ್, ಮಲ್ಲೇಶ್, ಚಿಕ್ಕಾಡೆ ವಿನಿ, ಚಿಕ್ಕಮರಳಿ ನವೀನ್ ಕುಮಾರ್, ಸೋಮಣ್ಣ,ನಾಗಪ್ಪ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಗುರು, ಮಂಜುನಾಥ್‌ ಸೇರಿದಂತೆ ಅನೇಕರು ಇದ್ದರು.