ಸಾರಾಂಶ
ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಎಸ್.ಎಂ.ಕೃಷ್ಣ ಸಮಷ್ಠಿ ಹಿತಚಿಂತನಾ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು, ಹೈಕೋರ್ಟ್ ಹಿರಿಯ ನಿವೃತ್ತ ನ್ಯಾಯಮೂರ್ತಿ ಪಿ.ಜಿ.ಶಿವಶಂಕರೇಗೌಡರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕನ್ನಡಪ್ರಭ ವಾರ್ತೆ ಮದ್ದೂರು
ಮಾಜಿ ಮುಖ್ಯಮಂತ್ರಿ ಕೀರ್ತಿ ಶೇಷರಾದ ಎಸ್.ಎಂ.ಕೃಷ್ಣರ 93ನೇ ಜನ್ಮದಿನೋತ್ಸವ ಅಂಗವಾಗಿ ಅವರ ಹೆಸರಿನಲ್ಲಿ ಸಮಷ್ಠಿ ಹಿತಚಿಂತನಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೇ 3ರಂದು ಹಮ್ಮಿಕೊಳ್ಳಲಾಗಿದೆ ಎಂದು ಚುಂಚಶ್ರೀ ಗೆಳೆಯರ ಬಳಗದ ಅಧ್ಯಕ್ಷ ಡಾ.ಬಿ.ಕೃಷ್ಣ ಮಂಗಳವಾರ ಹೇಳಿದರು.ಚುಂಚಶ್ರೀ ಗೆಳೆಯರ ಬಳಗ, ಶ್ರೀ ನಾಡಪ್ರಭು ಕೆಂಪೇಗೌಡರ ಒಕ್ಕಲಿಗರ ಸಂಘ, ನಾಗರೀಕ ವೇದಿಕೆ ಟೌನ್ ಕ್ಲಬ್ ಸಹಯೋಗದಲ್ಲಿ ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ಆವಣದಲ್ಲಿ ಅಂದು ಮಧ್ಯಾಹ್ನ 3.30 ಗಂಟೆಗೆ ನಡೆಯುವ ಸಮಾರಂಭವನ್ನು ಕೆಂಗೇರಿ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀಡಾ.ನಿಶ್ಚಲಾನಂದನಾಥ ಸ್ವಾಮೀಜಿ ಉದ್ಘಾಟಿಸುವರು. ಶಾಸಕ ಕೆ.ಎಂ.ಉದಯ್ ಅಧ್ಯಕ್ಷತೆಯಲ್ಲಿ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಎಸ್.ಎಂ.ಕೃಷ್ಣ ಸಮಷ್ಠಿ ಹಿತಚಿಂತನಾ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು, ಹೈಕೋರ್ಟ್ ಹಿರಿಯ ನಿವೃತ್ತ ನ್ಯಾಯಮೂರ್ತಿ ಪಿ.ಜಿ.ಶಿವಶಂಕರೇಗೌಡರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.
ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ಎಸ್.ಎಂ.ಕೃಷ್ಣರ ಕುರಿತು ಮಾತನಾಡಲಿದ್ದಾರೆ. ನಿವೃತ್ತ ಪ್ರಾಂಶುಪಾಲ ಡಾ.ಎಸ್.ಬಿ.ಶಂಕರೇಗೌಡ ಪ್ರಶಸ್ತಿ ಪುರಸ್ಕೃತರ ಕುರಿತು ಭಾಷಣ ಮಾಡುವರು. ಕಾರ್ಯಕ್ರಮದಲ್ಲಿ ಪ್ರೇಮ ಎಸ್.ಎಂ.ಕೃಷ್ಣ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮನ್ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಸಾಹಿತಿ ತೈಲೂರು ವೆಂಕಟಕೃಷ್ಣ, ಪುರಸಭಾ ಅಧ್ಯಕ್ಷೆ ಕೋಕಿಲಾ ಅರುಣ್, ಮಹಿಳಾ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಬಿ.ನಾರಾಯಣ್ ಸೇರಿದಂತೆ ಕೃಷ್ಣ ಅವರ ಅಭಿಮಾನಿಗಳು, ಸಂಘಟನೆಗಳ ಕಾರ್ಯಕರ್ತರು ಕಾರ್ಯಕ್ರದಲ್ಲಿ ಭಾಗವಹಿಸಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ವಿ.ಟಿ.ರವಿಕುಮಾರ್, ಉಪಾಧ್ಯಕ್ಷ ಸಿ.ಎಸ್.ಶಂಕರಯ್ಯ, ಪೂಣಪ್ರಜ್ಞಾ ವಿದ್ಯಾಸಂಸ್ಥೆ ಕಾರ್ಯದರ್ಶಿ ಎಚ್.ಆರ್.ಅನಂತೇಗೌಡ, ಪುರಸಭಾ ಮಾಜಿ ಅಧ್ಯಕ್ಷ ಎಂ.ಕೆ.ಮರಿಗೌಡ, ಮುಖಂಡರಾದ ಎಂ.ಎ.ಕೃಷ್ಣ, ಚನ್ನಪ್ಪ, ಶ್ರೀನಿವಾಸ್, ದೊರೆಸ್ವಾಮಿ ಇದ್ದರು.