ಅಸ್ವಸ್ಥರ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

| Published : Dec 30 2023, 01:15 AM IST

ಅಸ್ವಸ್ಥರ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ
Share this Article
  • FB
  • TW
  • Linkdin
  • Email

ಸಾರಾಂಶ

ಹೊಸಕೋಟೆ: ಹನುಮ ಜಯಂತಿಯಂದು ವಿವಿಧ ದೇವಾಲಯಗಳಲ್ಲಿ ಪ್ರಸಾದ ಸೇವಿಸಿ 280ಕ್ಕೂ ಹೆಚ್ಚಿನ ಭಕ್ತರು ಅಸ್ವಸ್ಥಗೊಂಡು ಆಸ್ಪತ್ರೆಗಳಿಗೆ ದಾಖಲಾಗಿದ್ದವರನ್ನು ಮಾಜಿ ಸಿಎಂ ಡಾ.ಎಂ.ವೀರಪ್ಪ ಮೊಯ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದರು.

ಆಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಮಾತನಾಡಿದ ಮೊಯ್ಲಿ ಅವರು, ಹನುಮ ಜಯಂತಿ ಸಂದರ್ಭದಲ್ಲಿ ಅಕಸ್ಮಿಕವಾಗಿ ಈ ಒಂದು ಘಟನೆ ನಡೆದಿದೆ. ಅದರಿಂದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕ ಶರತ್ ಬಚ್ಚೇಗೌಡರು ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಎಲ್ಲರ ಯೋಗಕ್ಷೇಮ ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ಪ್ರಸಾದ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಅಸ್ವಸ್ಥರಲ್ಲಿ ಶೇ.80ರಷ್ಟು ಅಸ್ವಸ್ಥರು ಗುಣಮುಖರಾಗಿದ್ದಾರೆ. ನಗರಸಭೆ ವ್ಯಾಪ್ತಿಯಲ್ಲಿ ಸರಬರಾಜಾಗುತ್ತಿರುವ ನೀರಿನ ಪರೀಕ್ಷೆ ನಡೆಸಿದ್ದು, ಯಾವುದೇ ರೀತಿಯ ನೀರಿನ ದೋಷ ಕಂಡು ಬಂದಿಲ್ಲ ಎಂದು ಹೇಳಿದರು.

ಈ ವೇಳೆ ಜಿಪಂ ಮಾಜಿ ಅಧ್ಯಕ್ಷ ವಿ.ಪ್ರಸಾದ್, ಮಾವು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷೆ ಕಮಲಾಕ್ಷಿ ರಾಜಣ್ಣ, ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸತೀಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಜರಿದ್ದರು.ಫೋಟೋ: 29 ಹೆಚ್‌ಎಸ್‌ಕೆ 3

ಹೊಸಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರನ್ನು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪಮೊಯ್ಲಿ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.