ಸಾರಾಂಶ
ಡಿಸಿಎಂ ಅಶ್ವತ್ಥ ನಾರಾಯಣ್ ಹುಟ್ಟುಹಬ್ಬವನ್ನು ಸಾಮಾಜಿಕ ಸೇವಾ ಕೈಂಕರ್ಯಗಳನ್ನು ಕೈಗೊಳ್ಳುವ ಮೂಲಕ ಆಚರಣೆ ಮಾಡಲಾಗುತ್ತಿದೆ. ಭಗವಂತನು ಅವರಿಗೆ ದೀರ್ಘಾಯಸ್ಸು ಮತ್ತು ಉತ್ತಮ ಆರೋಗ್ಯ ನೀಡಿ ಕಾಪಾಡಲಿ.
ಕನ್ನಡಪ್ರಭ ವಾರ್ತೆ ಮದ್ದೂರು
ಮಾಜಿ ಉಪ ಮುಖ್ಯಮಂತ್ರಿ, ಶಾಸಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಅವರ 56ನೇ ವರ್ಷದ ಹುಟ್ಟುಹಬ್ಬವನ್ನು ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟ್ಟಣದಲ್ಲಿ ಭಾನುವಾರ ಗೋವುಗಳನ್ನು ದತ್ತು ಪಡೆಯುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಸಿ.ಕೆ.ಸತೀಶ್ ಮತ್ತು ಅಭಿಮಾನಿ ಬಳಗದ ನಿಡಘಟ್ಟ ಸುನೀಲ್ ನೇತೃತ್ವದಲ್ಲಿ ಕಾರ್ಯಕರ್ತರು ಪುರಾಣ ಪ್ರಸಿದ್ಧ ಶ್ರೀಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಅಶ್ವತ್ಥ ನಾರಾಯಣ್ ಹೆಸರಿನಲ್ಲಿ ಅಭಿಷೇಕದೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ದೇವರ ಸನ್ನಿಧಿಯಲ್ಲಿ ಇರುವ ಗೋಶಾಲೆಯಲ್ಲಿ ಗೋವುಗಳನ್ನು ದತ್ತು ಪಡೆಯುವ ಮೂಲಕ ಅವುಗಳ ಮೇವು, ಸಾಕಾಣಿಕೆ ವೆಚ್ಚ ಭರಿಸುವ ಸಂಕಲ್ಪ ಮಾಡಿದರು. ನಂತರ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ ಕಾರ್ಯಕರ್ತರು ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.ತರುವಾಯು ತಾಲೂಕಿನ ಬೋರಾಪುರ ಗ್ರಾಮದ ವೃದ್ಧಾಶ್ರಮದ ವೃದ್ಧರಿಗೆ ಮತ್ತು ಅನಾಥ ಮಕ್ಕಳಿಗೆ ಮಧ್ಯಾಹ್ನದ ಭೋಜನ ವ್ಯವಸ್ಥೆಯೊಂದಿಗೆ ಈ ವಿತರಣೆ ಮಾಡಿದರು.
ಈ ವೇಳೆ ಅಭಿಮಾನಿ ಬಳಗದ ನಿಡಘಟ್ಟ ಸುನಿಲ್ ಮಾತನಾಡಿ, ಡಿಸಿಎಂ ಅಶ್ವತ್ಥ ನಾರಾಯಣ್ ಹುಟ್ಟುಹಬ್ಬವನ್ನು ಸಾಮಾಜಿಕ ಸೇವಾ ಕೈಂಕರ್ಯಗಳನ್ನು ಕೈಗೊಳ್ಳುವ ಮೂಲಕ ಆಚರಣೆ ಮಾಡಲಾಗುತ್ತಿದೆ. ಭಗವಂತನು ಅವರಿಗೆ ದೀರ್ಘಾಯಸ್ಸು ಮತ್ತು ಉತ್ತಮ ಆರೋಗ್ಯ ನೀಡಿ ಕಾಪಾಡಲಿ ಎಂದು ಪ್ರಾರ್ಥಿಸಿದರು.ಈ ವೇಳೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಂ.ಸತೀಶ್, ಎಂ.ಸಿ.ಸಿದ್ದು, ಮಹಿಳಾ ಘಟಕದ ಅಧ್ಯಕ್ಷ ಶ್ವೇತಾ, ಸಿಂಧು, ರಂಜಿತಾ, ಸೌಮ್ಯ, ತ್ರಿವೇಣಿ, ಮಂಜುಳಾ, ರಾಮೇಗೌಡ, ಕೆಂಪ ಬೋರಯ್ಯ, ನಿತ್ಯಾನಂದ, ಸುರೇಶ್, ಮಹೇಶ್, ಜಯಶಂಕರ, ಮಾ.ನಾ.ಪ್ರಸನ್ನ ಕುಮಾರ್ ಸೇರಿದಂತೆ ಬಿಜೆಪಿ ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.