ಮಾಜಿ ಉಪಮುಖ್ಯಮಂತ್ರಿ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ ಹುಟ್ಟುಹಬ್ಬವನ್ನು ಮದ್ದೂರು ತಾಲೂಕು ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಅರ್ಥಪೂರ್ಣವಾಗಿ ಆಚರಣೆ.
ಕನ್ನಡಪ್ರಭ ವಾರ್ತೆ ಮದ್ದೂರು
ಮಾಜಿ ಉಪಮುಖ್ಯಮಂತ್ರಿ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ ಹುಟ್ಟುಹಬ್ಬವನ್ನು ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸಿದರು.ಪುರಾಣ ಪ್ರಸಿದ್ಧ ಶ್ರೀಹೊಳೇ ಆಂಜನೇಯ ಸ್ವಾಮಿ ದೇಗುಲದಲ್ಲಿ ಹುಟ್ಟುಹಬ್ಬದ ಅಂಗವಾಗಿ ಮೂಲ ವಿಗ್ರಹಕ್ಕೆ ಅಭಿಷೇಕ, ಪುಷ್ಪಾಲಂಕಾರ ದೊಂದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಭಗವಂತನು ಅಶ್ವಥ್ ನಾರಾಯಣ ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸನ್ನು ನೀಡಿ ನಿರಂತರವಾಗಿ ಜನಸೇವೆ ಮಾಡಲು ಅವಕಾಶ ನೀಡುವಂತೆ ಪ್ರಾರ್ಥಿಸಿದರು.
ಬಳಿಕ ಭಕ್ತಾದಿಗಳಿಗೆ ಮತ್ತು ನೆರೆದಿದ್ದಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. ತರುವಾಯ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಒಳ ರೋಗಿಗಳಿಗೆ ಮತ್ತು ಅನಾಥಾಶ್ರಮದ ಮಕ್ಕಳಿಗೆ ಹುಟ್ಟು ಹಬ್ಬದ ಅಂಗವಾಗಿ ಹಣ್ಣು ಹಂಪಲುಗಳನ್ನು ವಿತರಿಸಿದರು.ಈ ವೇಳೆ ಮಾತನಾಡಿದ ಬಿಜೆಪಿ ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ನಿಡಘಟ್ಟ ಸುನೀಲ್, ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿಸಿಎಂ ಆಗಿ ಉತ್ತಮ ಆಡಳಿತ ನೀಡಿರುವ ಅಶ್ವಥ್ ನಾರಾಯಣ ಅವರಿಗೆ ಭವಿಷ್ಯದಲ್ಲಿ ಅವರಿಗೆ ಮತ್ತೊಮ್ಮೆ ಉನ್ನತ ಸ್ಥಾನ ಸಿಗಲಿ ಎಂದು ಪ್ರಾರ್ಥಿಸಿದರು.
ಈ ವೇಳೆ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಸಿ.ಕೆ.ಸತೀಶ್, ಮಹಿಳಾ ಘಟಕದ ಅಧ್ಯಕ್ಷ ಶ್ವೇತಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಮಲ್ಲಿಕಾರ್ಜುನ್, ನಗರ ಘಟಕದ ಅಧ್ಯಕ್ಷ ಎನ್.ಜೆ.ಮಧುಕುಮಾರ್, ಜಿ.ಸಿ.ಮಹೇಂದ್ರ, ಕೆಂಪಬೋರಯ್ಯ, ಎಂ.ಸಿ.ಸಿದ್ದು, ತ್ರಿವೇಣಿ, ಮಮತಾ ರಾಂಕಾ, ಮಾ.ನ.ಪ್ರಸನ್ನ ಕುಮಾರ್, ನಾಗಣ್ಣ ಮತ್ತಿತರರು ಇದ್ದರು.ಮಾಜಿ ಉಪ ಮುಖ್ಯಮಂತ್ರಿ ಸಿ.ಎಸ್.ಅಶ್ವಥ್ ನಾರಾಯಣ ಅವರ ಹುಟ್ಟುಹಬ್ಬಕ್ಕೆ ಮದ್ದೂರು ಕ್ಷೇತ್ರದ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಹಾಗೂ ಮನ್ಮುಲ್ ನಿರ್ದೇಶಕ ಎಸ್. ಪಿ. ಸ್ವಾಮಿ ಸ್ವಾಮಿ ಶುಭಾಶಯ ಕೋರಿದರು.