ಪತ್ರಕರ್ತರ ಸಂಘ ಮಾಜಿ ಜಿಲ್ಲಾಧ್ಯಕ್ಷ ವೀರಪ್ಪ ಭಾವಿ ನಿಧನ

| Published : Nov 04 2024, 12:30 AM IST

ಸಾರಾಂಶ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನಿಕಟಪೂರ್ವ ಅಧ್ಯಕ್ಷ, ಇಂದಿನ ಸುದ್ದಿ ಪತ್ರಿಕೆ ಸಂಪಾದಕ ವೀರಪ್ಪ ಎಂ. ಭಾವಿ (62) ನಗರದಲ್ಲಿ ಭಾನುವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು-ಬಳಗ, ಹಿತೈಷಿಗಳು ಇದ್ದಾರೆ. ನಗರದ ವೀರಶೈವ ರುದ್ರಭೂಮಿಯಲ್ಲಿ ಭಾನುವಾರ ಸಂಜೆ ಅಂತ್ಯಕ್ರಿಯೆ ನೆರವೇರಿತು.

- ಮಠಾಧೀಶರು, ರಾಜಕೀಯ ನಾಯಕರು, ಪತ್ರಕರ್ತರು, ಗಣ್ಯರಿಂದ ಅಂತಿಮ ದರ್ಶನ, ಸಂತಾಪ

- - - ಕನ್ನಡಪ್ರಭ ವಾರ್ತೆ ದಾವಣಗೆರೆ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನಿಕಟಪೂರ್ವ ಅಧ್ಯಕ್ಷ, ಇಂದಿನ ಸುದ್ದಿ ಪತ್ರಿಕೆ ಸಂಪಾದಕ ವೀರಪ್ಪ ಎಂ. ಭಾವಿ (62) ನಗರದಲ್ಲಿ ಭಾನುವಾರ ಬೆಳಗಿನ ಜಾವ ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು-ಬಳಗ, ಹಿತೈಷಿಗಳು ಇದ್ದಾರೆ. ನಗರದ ವೀರಶೈವ ರುದ್ರಭೂಮಿಯಲ್ಲಿ ಭಾನುವಾರ ಸಂಜೆ ಅಂತ್ಯಕ್ರಿಯೆ ನೆರವೇರಿತು.

ನಗರದ ದೇವರಾಜ ಅರಸು ಬಡಾವಣೆ ಸಿ ಬ್ಲಾಕ್‌ನಲ್ಲಿರುವ ಸ್ವಗೃಹದಲ್ಲಿ ವೀರಪ್ಪ ಭಾವಿ ಪಾರ್ಥಿವ ಶರೀರ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅಂತಿಮ ದರ್ಶನ ಪಡೆದು, ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಹಾಲಕೆರೆ ಶ್ರೀ ಅನ್ನದಾನೀಶ್ವರ ಮಠದ ಶ್ರೀ ಮುಪ್ಪಿನಾರ್ಯ ಸ್ವಾಮೀಜಿ, ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ವಿಪ ಮಾಜಿ ಮುಖ್ಯ ಸಚೇತಕ ಡಾ. ಎ.ಎಚ್. ಶಿವಯೋಗಿಸ್ವಾಮಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ, ಹಿರಿಯ ಲೆಕ್ಕ ಪರಿಶೋಧಕ ಅಥಣಿ ಎಸ್.ವೀರಣ್ಣ, ಹಿರಿಯ ವರ್ತಕ ಎನ್.ಅಡಿವೆಪ್ಪ, ಕಸಾಪ ಜಿಲ್ಲಾ ಅಧ್ಯಕ್ಷ ಬಿ.ವಾಮದೇವಪ್ಪ, ಹಿರಿಯ ಕಲಾವಿದ ಎ.ಮಹಲಿಂಗಪ್ಪ, ವರದಿಗಾರರ ಕೂಟದ ಗೌರವಾಧ್ಯಕ್ಷ ಬಿ.ಎನ್.ಮಲ್ಲೇಶ, ಅಧ್ಯಕ್ಷ ನಾಗರಾಜ ಎಸ್. ಬಡದಾಳ್, ಉಪಾಧ್ಯಕ್ಷ ಪೇಪರ್ ಕೆ.ಚಂದ್ರಣ್ಣ, ಪ್ರಧಾನ ಕಾರ್ಯದರ್ಶಿ ಎಂ.ವೈ.ಸತೀಶ, ಪವಮಾನ ಐರಣಿ, ಪಿ.ಎಸ್.ಲೋಕೇಶ, ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇ.ಎಂ.ಮಂಜುನಾಥ, ಫಕೃದ್ದೀನ್, ವೀರೇಶ, ಬದರೀನಾಥ, ಹಿರಿಯ ಪತ್ರಕರ್ತರಾದ ಬಕ್ಕೇಶ ನಾಗನೂರು, ಬಾ.ಮ. ಬಸವರಾಜಯ್ಯ, ಪೆ.ನಾ. ಗೋಪಾಲ ರಾವ್, ಎಸ್.ಕೆ. ಒಡೆಯರ್‌, ಕಾಡಜ್ಜಿ ಮಂಜುನಾಥ, ವೀರೇಶ, ಬಸವರಾಜ ಐರಣಿ, ಎಸ್.ಬಿ. ಜಿನದತ್, ಮಾಗನೂರು ಮಂಜಪ್ಪ, ಡಾ.ವರದರಾಜ, ಪುನೀತ್ ಆಪ್ತಿ, ರವಿಕುಮಾರ. ಮಹಾಂತೇಶ ವಿ.ಒಣರೊಟ್ಟಿ, ಎಂ.ಎಸ್. ರಾಮೇಗೌಡ, ಬೆಂಗಳೂರಿನ ವಿನಯ ಕುಮಾರ, ಡಿ.ಶೇಷಾಚಲ, ಡಿ.ಎಸ್. ಶಿವಶಂಕರ, ಜಿಲ್ಲೆಯ ವಿವಿಧ ತಾಲೂಕುಗಳ ಹಿರಿಯ-ಕಿರಿಯ ಪತ್ರಕರ್ತರು ಅಂತಿಮ ದರ್ಶನ ಪಡೆದರು.

- - -

ಬಾಕ್ಸ್‌* ಶಾಮನೂರು, ಡಾ.ಪ್ರಭಾ ಸಂತಾಪ ದಾವಣಗೆರೆ ಪತ್ರಿಕೋದ್ಯಮದಲ್ಲಿ ತಮ್ಮದೇ ವ್ಯಕ್ತಿತ್ವ ರೂಢಿಸಿಕೊಂಡಿದ್ದ ಜನಾನುರಾಗಿ ವ್ಯಕ್ತಿತ್ವದ ಹಿರಿಯ ಪತ್ರಕರ್ತ ವೀರಪ್ಪ ಎಂ.ಭಾವಿ ನಿಧನಕ್ಕೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಹಿರಿಯ ಕೈಗಾರಿಕೋದ್ಯಮಿ ಅಥಣಿ ಎಸ್.ವೀರಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ, ಕನ್ನಡಪ್ರಭದ ಕಾರ್ಯ ನಿರ್ವಾಹಕ ಸಂಪಾದಕ, ಪತ್ರಕರ್ತರ ಸಂಘದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಲೋಕೇಶ ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ದಿವಂಗತ ವೀರಪ್ಪ ಎಂ. ಭಾವಿ ದಾವಣಗೆರೆ ಜಿಲ್ಲೆಯಲ್ಲಿ ಇಂದಿನ ಸುದ್ದಿ ದಿನ ಪತ್ರಿಕೆ ಸ್ಥಾಪಿಸಿ, ಸಮಾಜ ಸುಧಾರಣೆ, ಸಾಮಾಜಿಕ ಕಳಕಳಿಯ ವರದಿ, ಲೇಖನಗಳನ್ನು ಪ್ರಕಟಿಸುವ ಜೊತೆಗೆ ಜನಾನುರಾಗಿ ವ್ಯಕ್ತಿತ್ವ ಮೈಗೂಡಿಸಿಕೊಂಡಿದ್ದರು. ಸದಾ ಪತ್ರಕರ್ತರ ಬಗ್ಗೆ ಮಿಡಿಯುತ್ತಿದ್ದ ಮನಸ್ಸು ಹೊಂದಿದ್ದರು. ಯುವ ಪತ್ರಕರ್ತರಿಗೆ ವೃತ್ತಿಗೆ ಸಂಬಂಧಿ ಸಲಹೆ ಸಲಹೆ, ಸೂಚನೆ, ಮಾರ್ಗದರ್ಶನ ನೀಡುತ್ತಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಸಾಕಷ್ಟು ಕೆಲಸ ಮಾಡಿದ್ದಾರೆ ಎಂದು ಅವರು ಸ್ಮರಿಸಿದ್ದಾರೆ.

ವೀರಪ್ಪ ಭಾವಿ ಅಗಲಿಕೆಯಿಂದ ದಾವಣಗೆರೆ ಜಿಲ್ಲಾ ಪತ್ರಿಕೋದ್ಯಮ ಬಳಗಕ್ಕೆ ಹಾಗೂ ಮೃತರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಿ, ನೊಂದ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಅವರು ಸಂತಾಪ ಸೂಚಿಸಿದ್ದಾರೆ.

- - - -3ಕೆಡಿವಿಜಿ4, 5: ವೀರಪ್ಪ ಎಂ. ಭಾವಿ