ಬಿಜೆಪಿ ಸೇರಿ ಸಿಎಂಗೇ ‘ಪಂಚ್‌’ ನೀಡಿದ ಮಾಜಿ ಮೇಯರ್‌ ಕವಿತಾ ಸನಿಲ್‌!

| Published : Apr 21 2024, 02:19 AM IST

ಬಿಜೆಪಿ ಸೇರಿ ಸಿಎಂಗೇ ‘ಪಂಚ್‌’ ನೀಡಿದ ಮಾಜಿ ಮೇಯರ್‌ ಕವಿತಾ ಸನಿಲ್‌!
Share this Article
  • FB
  • TW
  • Linkdin
  • Email

ಸಾರಾಂಶ

ಶನಿವಾರ ಬಂಟ್ವಾಳದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಕವಿತಾ ಸನಿಲ್‌ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರ ಆಪ್ತ ಬಳಗದಲ್ಲಿ ಗುರುತಿಸಿದ್ದ, ಮಂಗಳೂರಿನ ಮಾಜಿ ಮೇಯರ್‌ ಕವಿತಾ ಸನಿಲ್‌ ಶನಿವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಮೇಯರ್‌ ಆಗಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕರಾಟೆ ಪಂಚ್‌ ನೀಡಿದ್ದ ಕವಿತಾ ಸನಿಲ್‌, ಈಗ ಬಿಜೆಪಿ ಸೇರ್ಪಡೆಯೊಂದಿಗೆ ಕಾಂಗ್ರೆಸ್‌ಗೇ ಪಂಚ್‌ ನೀಡಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ಕಾಂಗ್ರೆಸ್‌ ಮೇಯರ್‌ ಆಗಿದ್ದಾಗ ಕವಿತಾ ಸನಿಲ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೇ ಪಂಚ್‌ ನೀಡಿ ಸುದ್ದಿಯಾಗಿದ್ದರು. ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಕರಾಟೆ ಚಾಂಪ್ಯನ್‌ಶಿಪ್‌ನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ಉದ್ಘಾಟನೆ ವೇಳೆ ಕರಾಟೆಪಟು ಆಗಿರುವ ಕವಿತಾ ಸನಿಲ್‌ ಸಿಎಂಗೇ ಪಂಚ್‌ ನೀಡುವ ಮೂಲಕ ಗಮನ ಸೆಳೆದಿದ್ದರು. ಅಲ್ಲಿಂದ ಮುಂದೆ ಸಿದ್ದರಾಮಯ್ಯ ಮಂಗಳೂರಿಗೆ ಬಂದಾಗ ಕವಿತಾ ಸನಿಲ್‌ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. ರಾಜ್ಯ ಮಹಿಳಾ ಕಾಂಗ್ರೆಸ್‌ ಪದಾಧಿಕಾರಿಯಾಗಿಯೂ ಬೆಂಗಳೂರಿನಲ್ಲೂ ಸಿದ್ದರಾಮಯ್ಯರ ಸಭೆ, ಸಮಾರಂಭಗಳಲ್ಲಿ ಭಾಗವಹಿಸುತ್ತಿದ್ದರು. ಸಮಾರಂಭವೊಂದರಲ್ಲಿ ಇನ್ನೊಮ್ಮೆ ಕರಾಟೆ ಪಂಚ್‌ ನೀಡಿ ಕವಿತಾ ಸನಿಲ್‌ ಸುದ್ದಿಯಾಗಿದ್ದರು. ಈಗ ಬಿಜೆಪಿ ಸೇರ್ಪಡೆಯೊಂದಿಗೆ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಶನಿವಾರ ಬಂಟ್ವಾಳದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಕವಿತಾ ಸನಿಲ್‌ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.