ಸಾರಾಂಶ
ವಿವಿಧ ಆಸ್ಪತ್ರೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ಔಷಧಿ ವಿತರಣೆ ಶಿಬಿರ
ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಲಷ್ಕರ್ ಮೊಹಲ್ಲಾದ ಗರಡಿಕೇರಿಯಲ್ಲಿ ನಗರ ಪಾಲಿಕೆ ಮಾಜಿ ಸದಸ್ಯ ಎಂ. ಶಿವಣ್ಣ ಅವರ ನೇತೃತ್ವದಲ್ಲಿ 47ನೇ ವರ್ಷದ ಕಾರ್ತಿಕ ಮಾಸದ ಶ್ರೀ ಮಲೆ ಮಹದೇಶ್ವರ ಸ್ವಾಮಿ ಪೂಜಾ ಮಹೋತ್ಸವವನ್ನು ಶುಕ್ರವಾರ ಆಚರಿಸಲಾಯಿತು.ಇದೇ ವೇಳೆ ವಿವಿಧ ಆಸ್ಪತ್ರೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ಔಷಧಿ ವಿತರಣೆ ಶಿಬಿರವನ್ನು ಸಹ ಆಯೋಜಿಸಲಾಗಿತ್ತು. ಕಾಗಿನೆಲೆ ಮೈಸೂರು ಶಾಖಾ ಮಠದ ಶ್ರೀ ಶಿವಾನಂದಪುರಿ ಸ್ವಾಮೀಜಿ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಪಾಲಿಕೆ ಮಾಜಿ ಸದಸ್ಯ ಎಂ. ಶಿವಣ್ಣ, ಮಹದೇಶ್ವರ ದೇವಸ್ಥಾನದ ಗುಡ್ಡಪ್ಪ ರವಿಕುಮಾರ್, ಕಾಂಗ್ರೆಸ್ ಮುಖಂಡರಾದ ಸುನಿಲ್, ನಾರಾಯಣ್, ರವಿ ನಾಯಕ್ ಮೊದಲಾದವರು ಇದ್ದರು.