ಸಾರಾಂಶ
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಅವರು ಭೇಟಿ ನೀಡಿ, ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದುಕೊಂಡರು.
ಕನ್ನಡಪ್ರಭವಾರ್ತೆ, ಸೋಮವಾರಪೇಟೆ
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಅವರು ಸೋಮವಾರ ಭೇಟಿ ನೀಡಿ, ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದುಕೊಂಡರು.ನಾನು ಶಾಸಕನಾಗಿದ್ದ ಸಂದರ್ಭ 11 ತಜ್ಞ ವೈದ್ಯರು ಸೇರಿದಂತೆ ಅರವಳಿಕೆ ತಜ್ಞರು, ರೇಡಿಯಾಲಿಜಿಸ್ಟ್ ಕೆಲಸ ನಿರ್ವಹಿಸುತ್ತಿದ್ದರು. ಮಡಿಕೇರಿ ಮೆಡಿಕಲ್ ಕಾಲೇಜಿನಿಂದ ಹೆಚ್ಚುವರಿಯಾಗಿ ವೈದ್ಯರು ಆಸ್ಪತ್ರೆಯಲ್ಲಿ ಕೆಲಸ ಮಾಡಲು ಅವಕಾಶ ಮಾಡಲಾಗಿತ್ತು. ಆದರೆ ಈಗ 4 ವೈದ್ಯರು ಮಾತ್ರ ಇದ್ದಾರೆ. ರೋಗಿಗಳು ಸಾಲುಗಟ್ಟಿ ನಿಲ್ಲಬೇಕಾದ ಪರಿಸ್ಥಿತಿ ಇದೆ. ಸ್ಥಳೀಯ ಶಾಸಕರು ಹೆಚ್ಚಿನ ಮುತುವರ್ಜಿ ವಹಿಸಿ ತಜ್ಞವೈದ್ಯರ ನೇಮಕ ಮಾಡಿಸಬೇಕಾಗಿದೆ ಎಂದು ಹೇಳಿದರು. ಈ ಸಂದರ್ಭ ಬಿಜೆಪಿ ಪ್ರಮುಖರಾದ ಎಸ್.ಆರ್.ಸೋಮೇಶ್, ಶರತ್‌ಚಂದ್ರ, ಕಿಬ್ಬೆಟ್ಟ ಚಂದ್ರು, ಯೋಗೇಶ್, ಸುಧಾಕರ್ ಇದ್ದರು.