ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಬೀರಶೆಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ 10 ಸ್ಥಾನಗಳ ಪೈಕಿ 7 ಸ್ಥಾನಗಳಲ್ಲಿ ಆಯ್ಕೆಯಾದ ಜೆಡಿಎಸ್- ಬಿಜೆಪಿ ಎನ್‌ಡಿಎ ಮೈತ್ರಿಕೂಟದ ನಿರ್ದೇಶಕರನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಭಿನಂದಿಸಿದರು.ನಂತರ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ. ಬೀರಶೆಟ್ಟಹಳ್ಳಿ ಡೇರಿ ಸಂಘ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 7 ಮಂದಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಸಂಘದ ಆಡಳಿತದ ಚುಕ್ಕಾಣೆಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಆಯ್ಕೆಯಾದ ಎಲ್ಲಾ ನಿರ್ದೇಶಕರಿಗೂ ಅಭಿನಂದಿಸುವುದಾಗಿ ತಿಳಿಸಿದರು.
ಈ ವೇಳೆ ನಿರ್ದೇಶಕರಾದ ಪಿ.ಜಿ.ರಮೇಶ್, ಪಿ.ದಿವಾಕರ, ವಿ.ಸುರೇಶ್, ಸುಜಾತ, ಮಧುಸೂದನ್, ಸುನಂದಮ್ಮ, ಲಕ್ಷ್ಮಮ್ಮ, ಮುಖಂಡರಾದ ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮಿ, ಮಾಜಿ ಅಧ್ಯಕ್ಷ ಪಿ.ಎಲ್.ಲಿಂಗರಾಜು(ಗುಣ), ಸದಸ್ಯ ಯಶ್ವಂತ್, ಸುರೇಶ್, ಜಯಕುಮಾರ್, ನರಸಿಂಹಚಾರಿ, ಶ್ರೀನಿವಾಸ್ ನಾಯ್ಕ, ಚಂದ್ರ, ನಟರಾಜು ಸೇರಿದಂತೆ ಹಲವರು ಇದ್ದರು.ನಾಳೆ ಕಾರ್ಮಿಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ
ಕನ್ನಡಪ್ರಭ ವಾರ್ತೆ ಮಂಡ್ಯಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದಿಂದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆ ಹಾಗೂ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಾರ್ಮಿಕ ರತ್ನ ಪ್ರಶಸ್ತಿ, ಕಾರ್ಮಿಕ ಕಾರ್ಡ್ ವಿತರಣೆ ಹಾಗೂ ನೋಂದಣಿ ಕಾರ್ಯಕ್ರಮವನ್ನು ಮೇ ೩೧ ರ ಬೆಳಗ್ಗೆ ೧೧ಕ್ಕೆ ನಗರದ ರೈತ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಕೆ.ಎಂ.ರಾಮಕೃಷ್ಣ ತಿಳಿಸಿದರು.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಕಾರ್ಮಿಕರು ಭಾಗವಹಿಸಲಿದ್ದು, ಅಂದು ೧೫೦೦ ರಿಂದ ೨೦೦೦ ಕಾರ್ಮಿಕರ ನೋಂದಣಿ ಮಾಡಲಾಗುವುದು ಎಂದರು.ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು ಭಾಗವಹಿಸಲಿದ್ದಾರೆ ಎಂದರು.
ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿರಲಿದ್ದು, ಈ ಹಿಂದೆ ನೋಂದಣಿ ಮಾಡಿಸಿದ್ದ ೪೦೦ ಮಂದಿ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ವಿತರಣೆ ಮಾಡಲಾಗುವುದು ಎಂದರು.ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಎಚ್.ಆರ್.ನವೀನ್‌ಕುಮಾರ್, ನಗರ ಅಧ್ಯಕ್ಷ ಶಿವರುದ್ರ.ಕೆ, ಎಚ್.ಆರ್.ಉದಯ್‌ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಕೃಷ್ಣ, ನವೀನ್, ಯೋಗೇಶ್, ರಾಘವೇಂದ್ರ, ಯೋಗೇಶ್ ಇತರರಿದ್ದರು.
;Resize=(128,128))
;Resize=(128,128))
;Resize=(128,128))