ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಚಂದ್ರಶೇಖರ್ ಮತ್ತು ರಾಮಲಿಂಗಯ್ಯರ ಸ್ಮರಣಾರ್ಥ ನಡೆದ ರಾಜ್ಯ ಮಟ್ಟದ ಆಹ್ವಾನಿತ ಪುರುಷರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಚಾಲನೆ ನೀಡಿದರು.ನಾಲ್ವಡಿ ಕೃಷ್ಣರಾಜ ಒಡೆಯರ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ಹಾಗೂ ಪಾಂಡವಪುರದ ಪಾಂಡವಾಸ್ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಮಂಡ್ಯ, ಹಾಸನ, ಬೆಂಗಳೂರು, ಮಂಗಳೂರು, ಕೊಡುಗು, ಮೈಸೂರು, ತುಮಕೂರು, ಚಾಮರಾಜನಗರ ಸೇರಿದಂತೆ ವಿವಿಧ ರಾಜ್ಯ ಜಿಲ್ಲೆಗಳಿಂದ ಸುಮಾರು 32 ತಂಡಗಳು ಭಾಗವಹಿಸಿದ್ದವು.
ಮೊದಲ ದಿನ ಲೀಗ್ ಹಂತ್ ಪಂದ್ಯಾವಳಿಗೆ ನಡೆದವು, ಒಂದು ತಂಡಕ್ಕೆ ಮೂರು ಪಂದ್ಯಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು, ಭಾನುವಾರ ಕ್ವಾಟರ್ ಫೈನಲ್ ಹಾಗೂ ಪೈನಲ್ ಪಂದ್ಯಗಳು ನಡೆಯಲಿವೆ.ಬಳಿಕ ಮಾತನಾಡಿದ ಮಾಜಿ ಸಿ.ಎಸ್.ಪುಟ್ಟರಾಜು ಅವರು, ಪಂದ್ಯಾವಳಿಯನ್ನು ಆಯೋಜಿಸುವ ಮೂಲಕ ಕ್ರೀಡಾ ಕ್ಷೇತ್ರದ ಉತ್ತೇಜನೆಕ್ಕೆ ಆಯೋಜಕರು ಪ್ರೋತ್ಸಾಹ ನೀಡುತ್ತಿದ್ದಾರೆ. ಪಂದ್ಯಾವಳಿ ರಾಜ್ಯದ ವಿವಿಧ ಮೂಲೆಗಳಿಂದ ಕ್ರೀಡಾಪಟುಗಳು ಆಗಮಿಸಿದ್ದಾರೆ ಎಂದರು.
ಕ್ರೀಡಾಕೂಟ ಎನ್ನುವುದು ಪರಸ್ಪರ ಸಹೋದರತ್ವ, ಸ್ನೇಹ ಬೆಳವಣಿಗೆ ಸೂಕ್ತ ವೇದಿಕೆಯಾಗಿದೆ. ಇಲ್ಲಿ ಗೆಲುವು ಸೋಲು ಸಾಮಾನ್ಯವಾಗಿದೆ. ಕ್ರೀಡಾಪಟುಗಳು ಸೋಲು ಮತ್ತು ಗೆಲುವನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಂಡು ಪ್ರತಿಯೊಬ್ಬ ಕ್ರೀಡಾಪಟುಗಳು ಶಿಸ್ತು ರೂಸಿಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಸಿ.ಪುಟ್ಟಸ್ವಾಮೀಗೌಡ(ಹೊಸಕೋಟೆಪುಟ್ಟಣ), ಪುರಸಭೆ ಸದಸ್ಯ ಶಿವಕುಮಾರ್, ಪಟೇಲ್ ಮಹೇಶ್, ಪಟೇಲ್ ಕೃಷ್ಣೇಗೌಡ, ಗುತ್ತಿಗೆದಾರ ರಮೇಶ್, ಅಶ್ವತ್, ಪವನ್, ರವಿಕುಮಾರ್ ಸೇರಿದಂತೆ ಹಲವರು ಇದ್ದರು.
ನ.12ರಂದು ವಾರ್ಡ್ ಸಭೆ, ಗ್ರಾಮಸಭೆಮಂಡ್ಯ: ತಾಲೂಕಿನ ಕೆರಗೋಡು ಹೋಬಳಿಯ ಹುಲಿವಾನ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಾರ್ಡ್ ಸಭೆ ಮತ್ತು ಗ್ರಾಮ ಸಭೆಯು ನ.12ರ ಬುಧವಾರ ಬೆಳಗ್ಗೆ 11 ಗಂಟೆಗೆ ಗ್ರಾಮ ಪಂಚಾಯ್ತಿ ಆವರಣದಲ್ಲಿ ನಡೆಯಲಿದೆ. ಗ್ರಾಪಂ ಅಧ್ಯಕ್ಷೆ ಎನ್. ಪ್ರೇಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಶಾಸಕರಾದ ಪಿ.ರವಿಕುಮಾರ್ ಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಕೆ.ವಿವೇಕಾನಂದ, ನೋಡೆಲ್ ಅಧಿಕಾರಿಯಾಗಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಜವರೇಗೌಡ, ಗ್ರಾಪಂ ಉಪಾಧ್ಯಕ್ಷ ಎಚ್.ಎನ್. ಶ್ರೀನಿವಾಸ್, ಪಂಚಾಯತ್ ರಾಜ್ ಇಲಾಖೆ ಅಭಿಯಂತರ ಮಂಜುನಾಥ್ ಇತರರು ಭಾಗವಹಿಸಲಿದ್ದಾರೆ ಎಂದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
;Resize=(128,128))
;Resize=(128,128))
;Resize=(128,128))
;Resize=(128,128))