ಪಕ್ಷಾತೀತವಾಗಿ ಎಚ್ಡಿಕೆಗೆ ಅತ್ಯಧಿಕ ಮತಕೊಟ್ಟ ಮತದಾರರಿಗೆ ಮಾಜಿ ಸಚಿವ ಸಿಎಸ್ಪಿ ಕೃತಜ್ಞತೆ

| Published : Jun 06 2024, 12:30 AM IST

ಪಕ್ಷಾತೀತವಾಗಿ ಎಚ್ಡಿಕೆಗೆ ಅತ್ಯಧಿಕ ಮತಕೊಟ್ಟ ಮತದಾರರಿಗೆ ಮಾಜಿ ಸಚಿವ ಸಿಎಸ್ಪಿ ಕೃತಜ್ಞತೆ
Share this Article
  • FB
  • TW
  • Linkdin
  • Email

ಸಾರಾಂಶ

2023 ವಿಧಾನಸಭೆ ಚುನಾವಣೆ ಸೋಲಿನ ಬಳಿಕ ನನ್ನ ಮನಸ್ಸಿಗೆ ಸಾಕಷ್ಟು ನೋವುಂಟಾಗಿತ್ತು. ಲೋಕಸಭೆ ಚುನಾವಣೆಯ ಗೆಲುವು ನನ್ನ ಸೋಲಿನ ನೋವು ಮರೆಸಿದೆ. ನಾನು ಶಾಸಕನಾಗಿದ್ದ ವೇಳೆ ಪಟ್ಟಣದ ತಮ್ಮ ನಿವಾಸದಲ್ಲಿ ಪ್ರತಿ ಸೋಮವಾರ ಮತ್ತು ಗುರುವಾರ ಜನರ ಸಮಸ್ಯೆ ಆಲಿಸುವ ಕೆಲಸ ಮಾಡುತ್ತಿದ್ದೆ. ನನ್ನ ಸೋಲಿನ ಬಳಿಕ ಆ ಕೆಲಸವನ್ನು ಸಹ ಮಾಡುತ್ತಿರಲಿಲ್ಲ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪಕ್ಷಾತೀತವಾಗಿ ಅತ್ಯಧಿಕ ಮತಕೊಟ್ಟು ಗೆಲ್ಲಿಸಿದ ಮತದಾರರಿಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಕೃತಜ್ಞತೆ ಸಲ್ಲಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಯಲ್ಲಿ ಜಿಲ್ಲೆಯ ಜನತೆ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪಕ್ಷಾತೀತವಾಗಿ ಬೆಂಬಲ ನೀಡಿ 2.84 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿ ಸಂಸದರನ್ನಾಗಿ ಆಯ್ಕೆ ಮಾಡುವ ಮೂಲಕ ಋಣದ ಭಾರವನ್ನು ಹೆಗಲಿಗೆ ಹೊರೆಸಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಜಿಲ್ಲೆಯ ಜನರ ಋಣ ತೀರಿಸುವ ಕೆಲಸ ಮಾಡುತ್ತೇವೆ. ಎಚ್.ಡಿ.ಕುಮಾರಸ್ವಾಮಿ ಅವರು ಗೆಲುವಿಗೆ ಶ್ರಮಿಸಿದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಎಲ್ಲಾ ಮುಖಂಡರು, ಕಾರ್‍ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಎಚ್.ಡಿ.ಕುಮಾರಸ್ವಾಮಿ ಅವರು ಸಂಸದರಾಗಿದ್ದು, ದೇಶದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಲಿದ್ದು, ಮೋದಿ ಸಂಪುಟದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮಂತ್ರಿಯಾಗುವುದು ಖಚಿತ. ಅವರು ಮಂತ್ರಿಯಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದರು.

2023 ವಿಧಾನಸಭೆ ಚುನಾವಣೆ ಸೋಲಿನ ಬಳಿಕ ನನ್ನ ಮನಸ್ಸಿಗೆ ಸಾಕಷ್ಟು ನೋವುಂಟಾಗಿತ್ತು. ಲೋಕಸಭೆ ಚುನಾವಣೆಯ ಗೆಲುವು ನನ್ನ ಸೋಲಿನ ನೋವು ಮರೆಸಿದೆ. ನಾನು ಶಾಸಕನಾಗಿದ್ದ ವೇಳೆ ಪಟ್ಟಣದ ತಮ್ಮ ನಿವಾಸದಲ್ಲಿ ಪ್ರತಿ ಸೋಮವಾರ ಮತ್ತು ಗುರುವಾರ ಜನರ ಸಮಸ್ಯೆ ಆಲಿಸುವ ಕೆಲಸ ಮಾಡುತ್ತಿದ್ದೆ. ನನ್ನ ಸೋಲಿನ ಬಳಿಕ ಆ ಕೆಲಸವನ್ನು ಸಹ ಮಾಡುತ್ತಿರಲಿಲ್ಲ ಎಂದರು.

ಕ್ಷೇತ್ರದ ಜನತೆ ಎಚ್.ಡಿ.ಕುಮಾರಸ್ವಾಮಿ ಅವರಿಗೆ 50,369 ಅಧಿಕ ಮತಗಳ ಕೊಟ್ಟು ಅವರ ಗೆಲುವಿಗೆ ಕಾರಣರಾಗಿದ್ದಾರೆ. ಮುಂದಿನ ದಿನಗಳಲ್ಲಿ ವಾರದ ಪ್ರತಿ ಸೋಮವಾರ ಮತ್ತು ಗುರುವಾರ ಮತ್ತೆ ಜನರ ಸಮಸ್ಯೆ ಆಲಿಸುವ ಕೆಲಸ ಮಾಡುವ ಮೂಲಕ ಕ್ಷೇತ್ರದ ಜನರ ಸೇವೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಎರಡು ಪಕ್ಷಕ್ಕೂ ಹೆಚ್ಚು ಅನುಕೂಲವಾಗಿದೆ. ಅದರಲ್ಲೂ ಹಳೇ ಮೈಸೂರು ಪ್ರಾಂತ್ಯದಲ್ಲಿ ಜೆಡಿಎಸ್ ಶಕ್ತಿ ಮತ್ತಷ್ಟು ಹೆಚ್ಚಾಗಿದೆ. ಚುನಾವಣೆಯಲ್ಲಿ ಎರಡು ಪಕ್ಷದ ಕಾರ್‍ಯಕರ್ತರು ಬಹಳ ಒಗಟ್ಟು, ಶಿಸ್ತಿಯಿಂದ ಚುನಾವಣೆಯ ಕೆಲಸ ಮಾಡಿದ್ದಾರೆ. ಅದರ ಫಲವಾಗಿ ಹಳೇ ಮೈಸೂರು ಭಾಗದಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ಕಂಡಿದೆ ಎಂದರು.

ಚುನಾವಣೆಗೂ ಮುನ್ನ ಕಾಂಗ್ರೆಸ್‌ನವರು ಇನ್ನೂ ಮುಂದೆ ನಮ್ಮದೆ ಸಾಮ್ರಾಜ್ಯ ಎಂದು ಬೀಗುತ್ತಿದ್ದರು. ಜನತೆ ಮತದಾನದ ಮೂಲಕ ಕಾಂಗ್ರೆಸ್‌ನವರಿ ತಕ್ಕ ಉತ್ತರ ನೀಡಿದ್ದಾರೆ ಎಂದು ತಿರುಗೇಟು ನೀಡಿದರು.

ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್ ಮಾತನಾಡಿ, ಲೋಕಸಭಾ ಚುನಾವಣೆಗೂ ಮುನ್ನ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರೇ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಎಂದು ಫೈನಲ್ ಮಾಡಲಾಗಿತ್ತು. ಆ ಬಳಿಕ ಬದಲಾದ ರಾಜಕೀಯದಿಂದ ಎಚ್.ಡಿ.ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗಿದರು. ಆದರೆ, ಪುಟ್ಟರಾಜು ಅವರು ಚುನಾವಣೆ ನೇತೃತ್ವವಹಿಸಿಕೊಂಡು ಅಧಿಕ ಮತಗಳ ಅಂತರದಿಂದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗೆಲ್ಲಿಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರ ಗೆಲುವಿನಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಸಿಂಹಪಾಲು ಇದೆ ಎಂದು ಬಣ್ಣಿಸಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್.ಎ.ಮಲ್ಲೇಶ್, ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್, ಮುಖಂಡ ಲಿಂಗರಾಜು, ಪುರಸಭೆ ಸದಸ್ಯರಾದ ಎಂ.ಗಿರೀಶ್, ಆರ್.ಸೋಮಶೇಖರ್, ಶಿವಣ್ಣ, ಸುನೀತ, ಗೀತಾ, ಚಂದ್ರು, ಶಿವಕುಮಾರ್, ಸಗಾಯಂ ಇದ್ದರು.