ಕಳೆದ ವಿಧಾನಸಭಾ ಚುನಾವಣೆ ಮುನ್ನ ಕ್ಷೇತ್ರ ವ್ಯಾಪ್ತಿಯ ಮಣಿಗೆರೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸಿಆರ್‌ಎಸ್ ನಿಧಿಯಿಂದ 12 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಆದರೆ, ಗುತ್ತಿಗೆದಾರರು ಕಾಮಗಾರಿ ಆರಂಭಿಸಲಿಲ್ಲ. ಈಗ ಕುಮಾರಸ್ವಾಮಿ ಅವರು ಸಿಆರ್‌ಎಸ್ ನಿಧಿಯಿಂದ ಅಗತ್ಯ ಅನುದಾನ ಬಿಡುಗಡೆ ಮಾಡುವುದರೊಂದಿಗೆ ಖಾಸಗಿ ಸಂಸ್ಥೆ ಮೂಲಕ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಮದ್ದೂರು
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆ.ಬೆಳ್ಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸಿಆರ್‌ಎಸ್ ಅನುದಾನದಲ್ಲಿ ಎರಡು ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಶನಿವಾರ ಚಾಲನೆ ನೀಡಿದರು.ಶಾಲೆ ಆವರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಆರ್ಸೆಲರ್ ಮಿತ್ತಲ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಸಿಆರ್‌ಎಸ್ ಅನುದಾನ 32 .5 ಲಕ್ಷ ರು. ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಡಿ.ಸಿ.ತಮ್ಮಣ್ಣ ಜೆಡಿಎಸ್ ವಿವಿಧ ಘಟಕಗಳ ಪದಾಧಿಕಾರಿಗಳೊಂದಿಗೆ ಕಾಮಗಾರಿಗೆ ಚಾಲನೆ ನೀಡಿದರು.ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಈ ಹಿಂದೆ ಶಾಲೆಗಳ ಕಟ್ಟಡ ನಿರ್ಮಾಣ ಮಾಡುವಂತೆ ಮನವಿ ಸಲ್ಲಿಸಲಾಗಿತ್ತು. ಮನವಿ ಮೇರೆಗೆ ಸಿಆರ್‌ಎಸ್ ಅನುದಾನ ಬಿಡುಗಡೆ ಮಾಡಿದ್ದಾರೆ. ಕಾಮಗಾರಿ ಮುಂದಿನ ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.
ಕಳೆದ ವಿಧಾನಸಭಾ ಚುನಾವಣೆ ಮುನ್ನ ಕ್ಷೇತ್ರ ವ್ಯಾಪ್ತಿಯ ಮಣಿಗೆರೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸಿಆರ್‌ಎಸ್ ನಿಧಿಯಿಂದ 12 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಆದರೆ, ಗುತ್ತಿಗೆದಾರರು ಕಾಮಗಾರಿ ಆರಂಭಿಸಲಿಲ್ಲ. ಈಗ ಕುಮಾರಸ್ವಾಮಿ ಅವರು ಸಿಆರ್‌ಎಸ್ ನಿಧಿಯಿಂದ ಅಗತ್ಯ ಅನುದಾನ ಬಿಡುಗಡೆ ಮಾಡುವುದರೊಂದಿಗೆ ಖಾಸಗಿ ಸಂಸ್ಥೆ ಮೂಲಕ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದರು.ಈ ವೇಳೆ ಮಿತ್ತಲ್ ಕಂಪನಿ ಪ್ರಾಜೆಕ್ಟ್ ಎಂಜಿನಿಯರ್ ಆನಂದ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಳಿಯಪ್ಪ, ಮಹಿಳಾ ಘಟಕದ ಅಧ್ಯಕ್ಷೆ ದಿವ್ಯ ರಾಮಚಂದ್ರಶೆಟ್ಟಿ, ಮುಖಂಡರಾದ ಕೂಳೆಗೆರೆ ಶೇಖರ್, ಕೆಸ್ತೂರು ರಾಜಣ್ಣ, ಕೆಂಗಲ್ ಗೌಡ, ಗುರುದೇವರಹಳ್ಳಿ ಅರವಿಂದ್, ಮಹೇಶ್ ಕುಮಾರ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣ, ಜಿ.ಪಿ .ಅಪ್ಪಾಜಿಗೌಡ ಮತ್ತಿತರರಿದ್ದರು.