ಸರ್ಕಾರವು ರೈತ ವಿರೋಧಿ ಜನ ವಿರೋಧಿ ಸರ್ಕಾರವಾಗಿದ್ದು ಪ್ರಸ್ತುತ ರಾಜ್ಯದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರು ಸಂಕಷ್ಟದಲ್ಲಿದ್ದಾರೆ. ಆದರೆ ಈ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ. ಇಂತಹ ಸಂದರ್ಭದಲ್ಲಿ ನಮ್ಮ ಜನತಾದಳ ಸರ್ಕಾರವು ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಿದ್ದರೆ ರೈತರ ಪರವಾದ ಯೋಜನೆಗಳನ್ನು ಹಾಗೂ ಸಾಲಮನ್ನಾ ಯೋಜನೆಯನ್ನು ಯಾವುದೇ ಮುಲಾಜಿಲ್ಲದೆ ಘೋಷಣೆ ಮಾಡುತ್ತಿತ್ತು ಎಂದು ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷವು ರೈತ ಪರವಾಗಿದೆ ಎಂಬುದನ್ನು ತಿಳಿಸಿದರು.
ಕನ್ನಡಪ್ರಭ ವಾರ್ತೆ ಆಲೂರು
ಜೆಡಿಎಸ್ ಪಕ್ಷಕ್ಕೆ ಕಾರ್ಯಕರ್ತರೇ ನಿಜವಾದ ಶಕ್ತಿ. ತಳಮಟ್ಟದ ಸೈನಿಕರಂತೆ ಕೆಲಸ ಮಾಡುವ ಕಾರ್ಯಕರ್ತರ ಅಭಿಪ್ರಾಯಕ್ಕೆ ಪಕ್ಷದಲ್ಲಿ ಸದಾ ಗೌರವವಿದೆ. ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವ ಮೂಲಕ ಮುಂಬರುವ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ಮಾಜಿ ಸಚಿವ ಎಚ್. ಕೆ. ಕುಮಾರಸ್ವಾಮಿ ಕರೆ ನೀಡಿದರು.ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಜೆಡಿಎಸ್ ಪಕ್ಷದ ತಾಲೂಕು ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ತಾಲೂಕಿನ ಪ್ರತಿಯೊಂದು ಗ್ರಾಮ ಮಟ್ಟದಲ್ಲೂ ಜೆಡಿಎಸ್ ಪಕ್ಷವನ್ನು ಬಲಪಡಿಸಲು ಮತ್ತು ಬೂತ್ ಮಟ್ಟದ ಸಮಿತಿಗಳನ್ನು ರಚಿಸಬೇಕು ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಜನವಿರೋಧಿ ನೀತಿಗಳು ಹಾಗೂ ರೈತರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರದ ನಿರ್ಲಕ್ಷ್ಯದ ಕುರಿತು ಸಾರ್ವಜನಿಕರಲ್ಲಿ ಮತ್ತು ರೈತರಲ್ಲಿ ಅರಿವು ಮೂಡಿಸಬೇಕು. ಸರ್ಕಾರವು ರೈತ ವಿರೋಧಿ ಜನ ವಿರೋಧಿ ಸರ್ಕಾರವಾಗಿದ್ದು ಪ್ರಸ್ತುತ ರಾಜ್ಯದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರು ಸಂಕಷ್ಟದಲ್ಲಿದ್ದಾರೆ. ಆದರೆ ಈ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ. ಇಂತಹ ಸಂದರ್ಭದಲ್ಲಿ ನಮ್ಮ ಜನತಾದಳ ಸರ್ಕಾರವು ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಿದ್ದರೆ ರೈತರ ಪರವಾದ ಯೋಜನೆಗಳನ್ನು ಹಾಗೂ ಸಾಲಮನ್ನಾ ಯೋಜನೆಯನ್ನು ಯಾವುದೇ ಮುಲಾಜಿಲ್ಲದೆ ಘೋಷಣೆ ಮಾಡುತ್ತಿತ್ತು ಎಂದು ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷವು ರೈತ ಪರವಾಗಿದೆ ಎಂಬುದನ್ನು ತಿಳಿಸಿದರು ಜೆಡಿಎಸ್ ಜಿಲ್ಲಾಧ್ಯಕ್ಷ ನಟರಾಜು ಮಾತನಾಡಿ, ಜೆಡಿಎಸ್ ಪಕ್ಷವು ಎಂದಿಗೂ ಹೈಕಮಾಂಡ್ ಸಂಸ್ಕೃತಿಯನ್ನು ನಂಬದೆ ಕಾರ್ಯಕರ್ತರ ಶ್ರಮವನ್ನು ನಂಬಿ ಬೆಳೆದಿರುವ ಪ್ರಾದೇಶಿಕ ಪಕ್ಷವಾಗಿದೆ. ರಾಜ್ಯದ ಭವಿಷ್ಯದ ದೃಷ್ಟಿಯಿಂದ ರಾಜ್ಯಕ್ಕೆ ಪ್ರಾದೇಶಿಕ ಪಕ್ಷದ ಅನಿವಾರ್ಯತೆ ಇದ್ದು ತಳಮಟ್ಟದಲ್ಲಿ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಪ್ರತಿಯೊಬ್ಬ ಕಾರ್ಯಕರ್ತನೂ ಪಕ್ಷದ ನಿಜವಾದ ಶಕ್ತಿ ಎಂದು ಬಣ್ಣಿಸಿದರು. ಮುಂಬರಲಿರುವ ಜಿಪಂ ಹಾಗೂ ತಾಪಂ ಚುನಾವಣೆಗಳನ್ನು ಪಕ್ಷವು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಬೂತ್ ಮಟ್ಟದಿಂದಲೇ ಪಕ್ಷದ ಸಂಘಟನೆಯನ್ನು ಗಟ್ಟಿಗೊಳಿಸಿ, ಪಕ್ಷದ ಬಾವುಟವನ್ನು ಹಾರಿಸುವ ಮೂಲಕ ಜೆಡಿಎಸ್ನ ಪ್ರಾಬಲ್ಯವನ್ನು ಸಾಬೀತುಪಡಿಸಬೇಕು ಎಂದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಬೆಲೆ ಏರಿಕೆ ಭರಾಟೆಯಿಂದ ಬಡ ಹಾಗೂ ಮಧ್ಯಮ ವರ್ಗದ ಜನತೆ ಹೈರಾಣಾಗಿದ್ದಾರೆ. ರೈತರ ಕೃಷಿ ಚಟುವಟಿಕೆಗಳಿಗೆ ಸರಿಯಾದ ಸಮಯಕ್ಕೆ ವಿದ್ಯುತ್, ನೀರು ಮತ್ತು ರೊಕ್ಕ ಸಿಗದೆ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.ಸಭೆಯಲ್ಲಿ ಹಾಸನ ತಾಲೋಕು ಜೆಡಿಎಸ್ ಅಧ್ಯಕ್ಷ ಎಸ್. ದ್ಯಾವೇಗೌಡ, ಆಲೂರು ತಾಲೋಕು ಅಧ್ಯಕ್ಷ ಕೆ.ಎಸ್ ಮಂಜೇಗೌಡ, ಜಿ.ಪಂ ಮಾಜಿ ಸದಸ್ಯೆ ಚಂಚಲ ಕುಮಾರಸ್ವಾಮಿ, ಜೆಡಿಎಸ್ ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ ಕವನ್ ಗೌಡ,ಹಿ.ವ. ಮುಖಂಡ ಬಿ.ಸಿ ಶಂಕರಾಚಾರ್,ತಾ.ಪಂ ಮಾಜಿ ಸದಸ್ಯರಾದ ಸಿ.ವಿ ನಿಂಗರಾಜು,ಕೆ. ಎನ್ ಕಾಂತರಾಜು, ನಟರಾಜು ನಾಕಲಗೂಡು, ಎಸ್. ಕೆ ಕಾಂತರಾಜು,ಉಮೇಶ್, ಹಾಸನ ಹಾಲು ಒಕ್ಕೂಟದ ನಿರ್ದೇಶಕ ಪಿ. ಎಲ್ ನಿಂಗರಾಜು, ಪ.ಪಂ ಮಾಜಿ ಅಧ್ಯಕ್ಷರುಗಳಾದ ಎಚ್. ಬಿ ಧರ್ಮರಾಜ್, ಡಿ. ಎಸ್ ಜಯಣ್ಣ, ಸಹಕಾರ ಒಕ್ಕೂಟದ ಮಾಜಿ ಅಧ್ಯಕ್ಷ ಎಸ್. ಎನ್ ಪ್ರಕಾಶ್, ನಿರ್ದೇಶಕ ಪ್ರವೀಣ್, ಮುಖಂಡರಾದ ಅಜ್ಜೇಗೌಡ, ಹಿರಣ್ಣ ಗೌಡ, ಬಸವರಾಜು, ದೊರೆಸ್ವಾಮಿ, ಪುಟ್ಟಸ್ವಾಮಿನಾಯ್ಕ,ತನುಗೌಡ ಸೇರಿದಂತೆ ನೂರಾರು ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.