ಮಾಜಿ ಸಚಿವ ಮುರುಗೇಶ ನಿರಾಣಿಗೆ ಮಾತೃ ವಿಯೋಗ

| Published : Jan 16 2024, 01:47 AM IST

ಸಾರಾಂಶ

ಬಾಗಲಕೋಟೆ: ಮಾಜಿ ಸಚಿವ ಮುರುಗೇಶ ನಿರಾಣಿ ತಾಯಿ ಸುಶಿಲಾಬಾಯಿ ರುದ್ರಪ್ಪ ನಿರಾಣಿ (78) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಗೆ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೇ ಸೋಮವಾರ ಕೊನೆಯುಸಿರೆಳೆದರು. ಜ.16ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಸ್ವಗ್ರಾಮ ಬಸವಹಂಚಿನಾಳದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ನಿರಾಣಿ ಕುಟುಂಬಸ್ಥರು ತಿಳಿಸಿದ್ದಾರೆ.

ಬಾಗಲಕೋಟೆ: ಮಾಜಿ ಸಚಿವ ಮುರುಗೇಶ ನಿರಾಣಿ ತಾಯಿ ಸುಶಿಲಾಬಾಯಿ ರುದ್ರಪ್ಪ ನಿರಾಣಿ (78) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ವಯೋಸಹಜ ಖಾಯಿಲೆಗೆ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೇ ಸೋಮವಾರ ಕೊನೆಯುಸಿರೆಳೆದರು. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಸವಹಂಚಿನಾಳ ಗ್ರಾಮದ ಕೃಷಿ ಕುಟುಂಬದ ನಿರಾಣಿ ಪರಿವಾರದ ಮನೆಯೊಡತಿಯಾಗಿದ್ದ ಸುಶಿಲಾಬಾಯಿ ಅವರಿಗೆ ಪತಿ‌ ರುದ್ರಪ್ಪ ನಿರಾಣಿ, ಐವರು ಪುತ್ರರು, ಇಬ್ಬರು ಪುತ್ರಿಯರು, ಐವರು ಸೊಸೆಯಂದಿರು, 14 ಜನ ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವಿದೆ. ಜ.16ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಸ್ವಗ್ರಾಮ ಬಸವಹಂಚಿನಾಳದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ನಿರಾಣಿ ಕುಟುಂಬಸ್ಥರು ತಿಳಿಸಿದ್ದಾರೆ.