ಶ್ಯಾದನಹಳ್ಳಿ ಚಲುವರಾಜು, ಸುಪ್ರೀತ್ ಗೌಡರಿಗೆ ಮಾಜಿ ಸಚಿವ ಪುಟ್ಟರಾಜು ಅಭಿನಂದನೆ

| Published : Mar 23 2025, 01:33 AM IST

ಶ್ಯಾದನಹಳ್ಳಿ ಚಲುವರಾಜು, ಸುಪ್ರೀತ್ ಗೌಡರಿಗೆ ಮಾಜಿ ಸಚಿವ ಪುಟ್ಟರಾಜು ಅಭಿನಂದನೆ
Share this Article
  • FB
  • TW
  • Linkdin
  • Email

ಸಾರಾಂಶ

ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದ ಅಧ್ಯಕ್ಷ ಶ್ಯಾದನಹಳ್ಳಿ ಪಿ.ಚಲುವರಾಜು, ಉಪಾಧ್ಯಕ್ಷ ಸುಪ್ರೀತ್‌ಗೌಡ ಅವರನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪಟ್ಟಣದಲ್ಲಿ ಅಭಿನಂದಿಸಿದರು.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಕೆ.ಬೆಟ್ಟಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದ ಅಧ್ಯಕ್ಷ ಶ್ಯಾದನಹಳ್ಳಿ ಪಿ.ಚಲುವರಾಜು, ಉಪಾಧ್ಯಕ್ಷ ಸುಪ್ರೀತ್‌ಗೌಡ ಅವರನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪಟ್ಟಣದಲ್ಲಿ ಅಭಿನಂದಿಸಿದರು.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ಕೆ.ಬೆಟ್ಟಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನದ ನಡೆದ ಚುನಾವಣೆಯಲ್ಲಿ 12 ಸ್ಥಾನಗಳಲ್ಲೂ ಜೆಡಿಎಸ್ ಬೆಂಬಲಿತ ನಿರ್ದೇಶಕರನ್ನು ಆಯ್ಕೆ ಮಾಡಿದ್ದರು. ಇದೀಗ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಶ್ಯಾದನಹಳ್ಳಿ ಪಿ.ಚಲುವರಾಜು, ಉಪಾಧ್ಯಕ್ಷರಾಗಿ ಸುಪ್ರೀತ್‌ಗೌಡ ಅವರನ್ನು ಎಲ್ಲಾ ನಿರ್ದೇಶಕರು ಸೇರಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಎಂದರು.

ನೂತನ ಅಧ್ಯಕ್ಷ, ಉಪಾಧ್ಯಕ್ಷ ಇಬ್ಬರು ಜತೆಗೂಡಿ ಕೆಲಸ ಮಾಡಬೇಕು, ಸರ್ಕಾರದಿಂದ ರೈತರಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡುವ ಜತೆಗೆ ಸಹಕಾರ ಸಂಘದ ಅಭಿವೃದ್ಧಿಗೆ ಪೂರಕವಾಗಿ ಶ್ರಮಿಸಬೇಕು ಎಂದರು.

ಈ ವೇಳೆ ಸಂಘದ ನಿರ್ದೇಶಕರಾದ ಗುರುಸ್ವಾಮಿ, ವಿ.ಎಸ್.ನಿಂಗೇಗೌಡ, ಮಹೇಶ್, ಟಿಎಪಿಸಿಎಂಎಸ್ ನಿರ್ದೇಶಕ ರಾಮಕೃಷ್ಣೇಗೌಡ, ವಿಎಸ್‌ಎಸ್‌ಎನ್‌ಬಿ ಮಾಜಿ ಅಧ್ಯಕ್ಷ ತಿಮ್ಮೇಗೌಡ, ಮುಖಂಡ ದೀಪು, ಸುರೇಶ್, ಆದರ್ಶ, ಕುಮಾರ ಸೇರಿದಂತೆ ಹಲವರು ಇದ್ದರು.

ಕಮ್ಮನಾಯಕನಹಳ್ಳಿಯಲ್ಲಿ ನಾಳೆ ಅನ್ನಸಂತರ್ಪಣೆ

ಮಂಡ್ಯ: ತಾಲೂಕಿನ ಕಮ್ಮನಾಯಕನಹಳ್ಳಿಯ ಶ್ರೀಬಸವೇಶ್ವರಸ್ವಾಮಿಯ ಆರಾಧನೆ ಪ್ರಯುಕ್ತ ದೇವಸ್ಥಾನದ ಆವರಣದಲ್ಲಿ ಮಾ.24 ರಂದು 17 ವರ್ಷದ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಪುರ ಗ್ರಾಮದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಅರ್ಚಕರಾದ ಜಿ.ಕೆ.ಸಿದ್ದಲಿಂಗಪ್ಪ ಮತ್ತು ಕೆ.ಜಿ.ಬಸವಲಿಂಗಪ್ಪ ಅವರೊಂದಿಗೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ನಂತರ ಸಂಜೆ 6 ಗಂಟೆಗೆ ಅನ್ನಸಂತರ್ಪಣೆ ಜರುಗಲಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.