ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಜಾಗಟೆಮಲ್ಲೇನಹಳ್ಳಿಯಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಬುಧವಾರ ನಡೆದ ಶ್ರೀಲಕ್ಷ್ಮೀದೇವಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಚಾಲನೆ ನೀಡಿದರು.ಜಾತ್ರಾ ಮಹೋತ್ಸವದಲ್ಲಿ ಜಾಗಟೆಮಲ್ಲೇನಹಳ್ಳಿ, ಶ್ಯಾದನಹಳ್ಳಿ ಹಾಗೂ ಅರಳಕುಪ್ಪೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶಕ್ತಿದೇವತೆಗೆ ವಿಶೇಷ ಪೂಜೆಸಲ್ಲಿಸಿದರು. ಜಾತ್ರೆ ಅಂಗವಾಗಿ ಹರಕೆ ಹೊತ್ತು ಭಕ್ತರು ದೇವಿಗೆ ಬಾಳೆಹಣ್ಣಿನ ಗೊನೆ ನೀಡಿದರು.ಬುಧವಾರ ಬೆಳಗ್ಗೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ಆಗಮಿಸಿ ದೇವಿ ದರ್ಶನಪಡೆದು ಭಕ್ತಿಭಾವ ಸಮರ್ಪಿಸಿದರು. ಭಕ್ತರಿಗೆ ಜಾತ್ರಾ ಸಮಿತಿಯಿಂದ ಅನ್ನಸಂಪರ್ತಣೆ ನಡೆಯಿತು. ಇದೇ ವೇಳೆ ಗ್ರಾಮರಂಗ ವೇದಿಕೆಯ ಪ್ರಸಿದ್ದ ಗಾಯಕ ನಾಗಲಿಂಗೇಗೌಡ ಮತ್ತು ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಶ್ರೀಲಕ್ಷ್ಮೀದೇವಿ ದರ್ಶನ ಪಡೆದು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿ ಅಭಿನಂದನೆ ಸ್ವೀಕರಿಸಿದರು. ಜಿಪಂ ಮಾಜಿ ಸದಸ್ಯ ಸಿ.ಅಶೋಕ್ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಸೋದರ ರಾಘವ ಪಾಲ್ಗೊಂಡರು.ಈ ವೇಳೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ಪ್ರತಿವರ್ಷ ದೀಪಾವಳಿ ಹಬ್ಬದಂದು ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ದೇವಸ್ಥಾನವನ್ನು ಅಭಿವೃದ್ಧಿಪಡಿಸಿ ಇದೊಂದು ಅದ್ಭುತ ಪುಣ್ಯಕ್ಷೇತ್ರವನ್ನಾಗಿಸುವುದು ನಮ್ಮೆಲ್ಲರ ಸಂಕಲ್ಪವಾಗಿದೆ ಎಂದರು.
ದೇವಸ್ಥಾನದ ಅಭಿವೃದ್ಧಿ ಕೆಲಸ ಹಂತಹಂತವಾಗಿ ಆರಂಭಗೊಂಡಿದೆ. ಜಾತ್ರಾ ಸಮಿತಿ ಅಧ್ಯಕ್ಷರಾದ ಡಿಸಿಸಿ ಬ್ಯಾಂಕ್ ನಿರ್ದೇಶಕ ಶ್ಯಾದನಹಳ್ಳಿ ಪಿ.ಚಲುವರಾಜು, ಪುತ್ರ ಉದ್ಯಮಿ ಸಿ.ಅಕ್ಷಯ್ ಅವರಿಗೆ ದೇವಸ್ಥಾನದ ಅಭಿವೃದ್ಧಿ ಕೆಲಸ ನಿಲ್ಲಬಾರದು ಎಂಬುದಾಗಿ ಸೂಚನೆ ನೀಡಿದ್ದೇನೆ. ನಾನು ಕೂಡ ಅಭಿವೃದ್ಧಿಗೆ ಸಹಕಾರ ನೀಡುತ್ತೇನೆ ಎಂದರು.ಈ ವೇಳೆ ಸಮಿತಿ ಅಧ್ಯಕ್ಷ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಚಲುವರಾಜು ಸೇರಿದಂತ ಸುತ್ತಮುತ್ತಲಿನ ಗ್ರಾಮಗಳ ಭಕ್ತರು, ಸಾರ್ವಜನಿಕರು, ಮುಖಂಡರು ಭಾಗವಹಿಸಿದ್ದರು.
;Resize=(128,128))
;Resize=(128,128))
;Resize=(128,128))