ಸಾರಾಂಶ
ಬೈಲಹೊಂಗಲ: ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಸಿ.ಟಿ.ರವಿ ನೇತೃತ್ವದಲ್ಲಿ ಬೈಲಹೊಂಗಲದ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಬಿಜೆಪಿಗೆ ಸೇರ್ಪಡೆಗೊಂಡರು.
ಬೈಲಹೊಂಗಲ: ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಸಿ.ಟಿ.ರವಿ ನೇತೃತ್ವದಲ್ಲಿ ಬೈಲಹೊಂಗಲದ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಬಿಜೆಪಿಗೆ ಸೇರ್ಪಡೆಗೊಂಡರು. ಅವರನ್ನು ಪಕ್ಷದ ಶಾಲು ಹೊದಿಸಿ, ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಡಾ.ವಿಶ್ವನಾಥ ಪಾಟೀಲ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಆಡಳಿತ ವೈಖೈರ್ಯವನ್ನು ಮೆಚ್ಚಿ ಸೇರ್ಪಡೆಗೊಂಡಿದ್ದು, 3ನೇ ಬಾರಿ ಪ್ರಧಾನಿಯನ್ನಾಗಿ ಮಾಡಲು ಶ್ರಮಿಸುವುದಾಗಿ ಭರವಸೆ ನೀಡಿದರು.
ಮತಕ್ಷೇತ್ರದ ಎಲ್ಲೆಡೆ ಕಾರ್ಯಕರ್ತರ ತಂಡ ರಚಿಸಿ ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ಮುಟ್ಟಿಸಿ ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಪರ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))