ಸಾರಾಂಶ
ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ಮಾಜಿ ಶಾಸಕ ಅಪ್ಪಚ್ಚು ರಂಜನ್ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಭಾರತೀಯ ಜನತಾ ಪಾರ್ಟಿಯ ಮಂಡಲ ಯುವ ಮೋರ್ಚಾ ವತಿಯಿಂದ ಮಹಾತ್ಮಾ ಗಾಂಧಿ, ದೀನ್ ದಯಾಳ್ ಉಪಾಧ್ಯಾಯ ಹಾಗೂ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ, ಸೇವಾ ಪಾಕ್ಷಿಕದ ಅಂಗವಾಗಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು.ಕಾರ್ಯಕ್ರಮಕ್ಕೆ ಮಾಜಿ ಶಾಸಕ ಅಪ್ಪಚ್ಚು ರಂಜನ್ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಆರೋಗ್ಯವಂತರು ಪ್ರತಿ 3ರಿಂದ 4 ತಿಂಗಳಿಗೊಮ್ಮೆ ರಕ್ತದಾನ ಮಾಡಬೇಕು. ರಕ್ತದಾನವು ಜೀವದಾನಕ್ಕೆ ಸಮಾನವಾಗಿದೆ ಎಂದರು.
ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಮಾತನಾಡಿ, ಯುವ ಮೋರ್ಚಾದಿಂದ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಸಮಾಜಮುಖಿ ಕೆಲಸಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.ಶಿಬಿರದಲ್ಲಿ ಒಟ್ಟು 60 ಮಂದಿ ರಕ್ತದಾನ ಮಾಡಿದರು. ಈ ಸಂದರ್ಭ ಜಿಲ್ಲಾ ರಕ್ತನಿಧಿ ಘಟಕದ ಮುಖ್ಯಸ್ಥರಾದ ಡಾ. ಕರುಂಬಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಬಿಜೆಪಿ ಯುವ ಮೋರ್ಚಾ ಮಂಡಲ ಅಧ್ಯಕ್ಷ ಮೋಹಿತ್ ತಿಮ್ಮಯ್ಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮನುಕುಮಾರ್ ರೈ, ಮಂಡಲ ಪ್ರಧಾನ ಕಾರ್ಯದರ್ಶಿ ದರ್ಶನ್ ಜೋಯಪ್ಪ, ನಗರಾಧ್ಯಕ್ಷ ಎಸ್.ಆರ್. ಸೋಮೇಶ್, ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಸಿದ್ಧ್, ಪದ್ಮನಾಭ್, ಪ.ಪಂ. ಸದಸ್ಯ ಮಹೇಶ್, ಶರತ್‌ಚಂದ್ರ, ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ವಿರೂಪಾಕ್ಷ, ಎಸ್.ಸಿ. ಮೋರ್ಚಾ ಅಧ್ಯಕ್ಷ ಜಗನ್ನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.