ಸಾರಾಂಶ
ಮಾಜಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಜನ್ಮದಿನ ಪ್ರಯುಕ್ತ ಸಿದ್ದೇಶ್ವರ್ ಅಭಿಮಾನಿಗಳ ಬಳಗದಿಂದ ಜು.8 ರಂದು ಬೆಳಗ್ಗೆ 10.30ಕ್ಕೆ "ನಮ್ಮಭಿಮಾನ ಕಾರ್ಯಕ್ರಮ "ವನ್ನು ನಗರದ ಅಭಿನವ ರೇಣುಕ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಮುಖಂಡ ಯಶವಂತ ರಾವ್ ಜಾಧವ್ ಹೇಳಿದ್ದಾರೆ.
- ಸಿದ್ದೇಶ್ವರ್ ಅಭಿಮಾನಿಗಳ ಬಳಗದಿಂದ ಆಯೋಜನೆ
- - -ಕನ್ನಡಪ್ರಭ ವಾರ್ತೆ ದಾವಣಗೆರೆ
ಮಾಜಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಜನ್ಮದಿನ ಪ್ರಯುಕ್ತ ಸಿದ್ದೇಶ್ವರ್ ಅಭಿಮಾನಿಗಳ ಬಳಗದಿಂದ ಜು.8 ರಂದು ಬೆಳಗ್ಗೆ 10.30ಕ್ಕೆ "ನಮ್ಮಭಿಮಾನ ಕಾರ್ಯಕ್ರಮ "ವನ್ನು ನಗರದ ಅಭಿನವ ರೇಣುಕ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಮುಖಂಡ ಯಶವಂತ ರಾವ್ ಜಾಧವ್ ಹೇಳಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10.30 ಗಂಟೆಗೆ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಹರಿಹರ ಶಾಸಕ ಬಿ.ಪಿ. ಹರೀಶ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ವಿ.ಸೋಮಣ್ಣ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಶ್ರೀರಾಮುಲು, ಅರವಿಂದ್ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಶಾಸಕ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ನಾಯಕಿ ಗಾಯಿತ್ರಿ ಸಿದ್ದೇಶ್ವರ್, ಮಾಜಿ ಶಾಸಕರಾದ ಎಸ್.ವಿ.ರಾಮಚಂದ್ರ, ಎಚ್.ಎಸ್.ಶಿವಶಂಕರ್, ಎಚ್.ಪಿ.ರಾಜೇಶ್ ಪಾಲ್ಗೊಳ್ಳಲಿದ್ದಾರೆ ಎಂದರು.
ಪ್ರತಿ ವರ್ಷ ಸರ್ಕಾರಿ ಅಂಧ ಹೆಣ್ಣುಮಕ್ಕಳ ಶಾಲೆಯಲ್ಲಿ ಡಾ. ಜಿ.ಎಂ. ಸಿದ್ದೇಶ್ವರ್ ಜನ್ಮದಿನ ಆಚರಿಸಲಾಗುತ್ತಿತ್ತು. ಈ ಬಾರಿ ಅಲ್ಲಿ ಸ್ಥಳಾವಕಾಶದ ಕೊರತೆ ಇದೆ. ಆದ್ದರಿಂದ ವಿಭಿನ್ನವಾಗಿ ಕಾರ್ಯಕ್ರಮ ಆಯೋಜಿಸಿದ್ದು, ಅಂಧ ಮಕ್ಕಳಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಅನಂತರ ಊಟ, ಬಟ್ಟೆ ವಿತರಿಸಲಾಗುವುದು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಐವರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.ಬಳಗದ ಬಿ.ಎಸ್.ಜಗದೀಶ್, ರಾಜನಹಳ್ಳಿ ಶಿವಕುಮಾರ್, ಎಸ್.ಎಂ.ವೀರೇಶ ಹನಗವಾಡಿ, ಎ.ವೈ.ಪ್ರಕಾಶ್, ಕಿಶೋರ್ ಕುಮಾರ್, ಟಿಂಕರ್ ಮಂಜಣ್ಣ ಇತರರಿದ್ದರು.- - -
-5ಕೆಡಿವಿಜಿ40: