ತಾಲೂಕುಗಳ ಅಭಿವೃದ್ಧಿಗೆ ಪ್ರತ್ಯೇಕ ಪ್ರಣಾಳಿಕೆ ರಚನೆ: ವಿಜಯ್ ರಾಮೇಗೌಡ

| Published : Apr 23 2024, 12:45 AM IST

ತಾಲೂಕುಗಳ ಅಭಿವೃದ್ಧಿಗೆ ಪ್ರತ್ಯೇಕ ಪ್ರಣಾಳಿಕೆ ರಚನೆ: ವಿಜಯ್ ರಾಮೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಸಿಎಂ ಹಾಗೂ ಡಿಸಿಎಂ ಅವರೊಂದಿಗೆ ಚರ್ಚಿಸಿ ಜಿಲ್ಲೆಗೆ ಪ್ರತ್ಯೇಕ ಪ್ಯಾಕೇಜ್ ನೀಡಲು ಮುಂದಾಗಿದ್ದಾರೆ. ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಜಿಲ್ಲೆಯನ್ನು ಅಭಿವೃದ್ಧಿಗೊಳಿಸಲು ಪಣ ತೊಡಲಾಗಿದೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಜಯಶೀಲರನ್ನಾಗಿ ಮಾಡಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಮಂಡ್ಯ ಲೋಕಸಭಾ ವ್ಯಾಪ್ತಿ ಎಲ್ಲ ತಾಲೂಕುಗಳನ್ನು ಹಂತಹಂತವಾಗಿ ಅಭಿವೃದ್ಧಿಗೊಳಿಸಲು ಪ್ರತ್ಯೇಕ ಪ್ರಣಾಳಿಕೆ ರಚಿಸಲಾಗಿದೆ. ಚುನಾವಣೆ ಮುಗಿದ ನಂತರ ಅವುಗಳನ್ನು ಅನುಷ್ಟಾನಕ್ಕೆ ತರಲು ರಾಜ್ಯ ಸರ್ಕಾರ ಶ್ರಮಿಸಲಿದೆ ಎಂದು ಕಾಂಗ್ರೆಸ್ ಮುಖಂಡ ವಿಜಯ್ ರಾಮೇಗೌಡ ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ಚಂದ್ರು ಅವರನ್ನು ಗೆಲ್ಲಿಸಿ ಲೋಕಸಭೆ ಕಳುಹಿಸಬೇಕು. ರಾಜ್ಯ ಸರ್ಕಾರ 5 ಗ್ಯಾರಂಟಿಗಳನ್ನು ನೀಡುವ ಮೂಲಕ ಜಿಲ್ಲೆಯ ಜನರ ಕುಟುಂಬಗಳಿಗೆ ನೆರವು ನೀಡಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಸಿಎಂ ಹಾಗೂ ಡಿಸಿಎಂ ಅವರೊಂದಿಗೆ ಚರ್ಚಿಸಿ ಜಿಲ್ಲೆಗೆ ಪ್ರತ್ಯೇಕ ಪ್ಯಾಕೇಜ್ ನೀಡಲು ಮುಂದಾಗಿದ್ದಾರೆ. ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಜಿಲ್ಲೆಯನ್ನು ಅಭಿವೃದ್ಧಿಗೊಳಿಸಲು ಪಣ ತೊಡಲಾಗಿದೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಜಯಶೀಲರನ್ನಾಗಿ ಮಾಡಬೇಕು ಎಂದು ಕೋರಿದರು.

ಮಂಡ್ಯ ಜಿಲ್ಲೆಯ ಜನತೆ ಸ್ವಾಭಿಮಾನಿಗಳಾಗಿದ್ದು, ಬೇರೆಯವರನ್ನು ಅಷ್ಟು ಸುಲಭವಾಗಿ ಒಪ್ಪಿಕೊಳ್ಳಲ್ಲ. ಜನಪರ ಕಾಳಜಿ ಇಟ್ಟುಕೊಂಡು ಜನರ ಸೇವೆ ಮಾಡಲು ರಾಜಕೀಯ ಕ್ಷೇತ್ರಕ್ಕೆ ಆಗಮಿಸಿರುವ ನಮ್ಮ ಅಭ್ಯರ್ಥಿ ಬೆಂಬಲಿಸಬೇಕು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪುರಸಭಾ ಸದಸ್ಯ ಡಿ.ಪ್ರೇಮ್‌ಕುಮಾರ್, ಕೆ.ಸಿ.ಮಂಜುನಾಥ್, ತಾಪಂ ಮಾಜಿ ಸದಸ್ಯ ಮಾಧವಪ್ರಸಾದ್, ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಗೋವಿಂದರಾಜು, ಸಾಸಲು ಈರಪ್ಪ, ವಿಜಯ್, ನಾಟನಹಳಿ ಅನಿಲ್, ಚೌಡೇನಹಳ್ಳಿ ರಘು, ವಿಜಯ್ ರಾಮೇಗೌಡರ ಆಪ್ತಸಹಾಯಕ ಬಸವರಾಜು ಸೇರಿದಂತೆ ಹಲವರಿದ್ದರು.

ಇಂದು ಚಿತ್ರನಟ ದರ್ಶನ್ ಪ್ರಚಾರ

ನಾಗಮಂಗಲ: ಲೋಕಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಚಿತ್ರನಟ ದರ್ಶನ್ ತಾಲೂಕಿನ ವಿವಿಧೆಡೆ ರೋಡ್‌ಶೋ ಮೂಲಕ ಪ್ರಚಾರ ನಡೆಸುವರು.

ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ಏ.23ರಂದು ಸ್ಟಾರ್ ಚಂದ್ರು ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಜೊತೆಗೂಡಿ ದರ್ಶನ್ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಕದಬಹಳ್ಳಿ ಸರ್ಕಲ್, ಲಾಳನಕೆರೆ, ಬಿಂಡಿಗನವಿಲೆ, ಅದ್ದೀಹಳ್ಳಿ ಸರ್ಕಲ್, ಮಾಯಿಗೋನಹಳ್ಳಿ ಸರ್ಕಲ್‌ , ನಂತರ, ಪಟ್ಟಣದ ಟಿ.ಬಿ.ಬಡಾವಣೆ, ನಾಗಮಂಗಲ ಪಟ್ಟಣದ ಮಂಡ್ಯ ಸರ್ಕಲ್, ಬ್ರಹ್ಮದೇವರಹಳ್ಳಿ ಹಾಗೂ ಚಿಣ್ಯ ಸರ್ಕಲ್‌ನಲ್ಲಿ ರೋಡ್ ಶೋ ಮೂಲಕ ಪ್ರಚಾರ ನಡೆಸುವರು.