ಪಬ್ಲಿಕ್ ಸ್ಕೂಲ್‌ ಅಭಿವೃದ್ಧಿಗೆ ₹40 ಲಕ್ಷ: ಶಾಸಕ ಟಿ.ಡಿ.ರಾಜೇಗೌಡ

| Published : Aug 26 2025, 01:02 AM IST

ಪಬ್ಲಿಕ್ ಸ್ಕೂಲ್‌ ಅಭಿವೃದ್ಧಿಗೆ ₹40 ಲಕ್ಷ: ಶಾಸಕ ಟಿ.ಡಿ.ರಾಜೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ಪಬ್ಲಿಕ್ ಸ್ಕೂಲಿನ ರಂಗ ಮಂದಿರದ ಅಭಿವೃದ್ಧಿಗಾಗಿ 40 ಲಕ್ಷ ರುಪಾಯಿ ಮಂಜೂರು ಮಾಡಿಸಿದ್ದೇನೆ ಎಂದು ಶಾಸಕ ಹಾಗೂ ರಾಜ್ಯ ನವೀಕರಿಸಬಹುದಾದ ಇಂದನ ಅಭಿವೃದ್ದಿ ನಿಮಗದ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.

ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ಕರ್ನಾಟಕ ಪಬ್ಲಿಕ್ ಸ್ಕೂಲಿನ ರಂಗ ಮಂದಿರದ ಅಭಿವೃದ್ಧಿಗಾಗಿ 40 ಲಕ್ಷ ರುಪಾಯಿ ಮಂಜೂರು ಮಾಡಿಸಿದ್ದೇನೆ ಎಂದು ಶಾಸಕ ಹಾಗೂ ರಾಜ್ಯ ನವೀಕರಿಸಬಹುದಾದ ಇಂದನ ಅಭಿವೃದ್ದಿ ನಿಮಗದ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕುವೆಂಪು ಕ್ರೀಡಾಂಗಣದಲ್ಲಿ ಸೋಮವಾರ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಬುದ್ಧಿ ಶಕ್ತಿಯೂ ಜಾಸ್ತಿಯಾಗಲಿದೆ. ರಾಜ್ಯ ಹಾಗೂ ರಾಷ್ಟ ಮಟ್ಟದಲ್ಲಿ ಕ್ರೀಡೆಯಲ್ಲಿ ಗೆದ್ದವರಿಗೆ ಉದ್ಯೋಗದಲ್ಲೂ ಮೀಸಲಾತಿ ಸಿಗಲಿದೆ. ನಾನು ಶೃಂಗೇರಿ ಕ್ಷೇತ್ರದಲ್ಲಿ ಆರೋಗ್ಯ, ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲಿನ ಕಟ್ಟಡಕ್ಕೆ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದರು.

ಶಿವಮೊಗ್ಗ ಭದ್ರಾ ಕಾಡ ಭಿವೃದ್ದಿ ನಿಗಮದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ಮುಂದಿನ ದೇಶದ ಭವಿಷ್ಯ ರೂಪಿಸುವ ಯುವ ಜನರು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ.ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಕ್ರೀಡಾಪಟುಗಳು ಕ್ರೀಡೆಯನ್ನು ಸ್ಪರ್ಧಾ ಮನೋಭಾವದಿಂದ ಆಟವಾಡಬೇಕು. ಪ್ರತಿ ಸ್ಪರ್ಧಿಯನ್ನು ಗೌರವಿಸಬೇಕು ಎಂದು ಕರೆ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಪಬ್ಲಿಕ್ ಸ್ಕೂಲಿನ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಲಕ್ಷ್ಮಣಶೆಟ್ಟಿ ಮಾತನಾಡಿ, ಸರ್ಕಾರವು ಕ್ರೀಡಾಕೂಟಕ್ಕೆ ಕಡಿಮೆ ಅನುದಾನ ನೀಡುತ್ತಿದೆ.ಅನುದಾನ ಜಾಸ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತಶೆಟ್ಟಿ, ಸದಸ್ಯ ವಸೀಂ, ಪಿಸಿಎಆರ್‌ಡಿ ಬ್ಯಾಂಕಿನ ಅಧ್ಯಕ್ಷ ಕೆ.ಎಂ.ಸುಂದರೇಶ್, ದಾನಿ ಗದ್ದೇಮನೆ ಶ್ರೀಕಾಂತ್, ಎಸ್‌ಡಿಎಂಸಿ ಉಪಾಧ್ಯಕ್ಷ ಪುರುಶೋತ್ತಮ್, ಶೈಕ್ಷಣಿಕ ಗುಣಮಟ್ಟದ ಸಮಿತಿ ಅಧ್ಯಕ್ಷ ಕೆ.ಎ.ಅಬೂಬಕರ್, ಉಪ ಪ್ರಾಂಶುಪಾಲ ರುದ್ರಪ್ಪ, ಎಸ್‌ಡಿಎಂಸಿ ಸದಸ್ಯರಾದ ದೇವೆಂದ್ರ, ಉದಯಗಿಲ್ಲಿ, ವಾಣಿ ನರೇಂದ್ರ, ಮೇಘನ,ಸಲೀಂ,ಫಿತಮ, ವಸಂತಿ, ಶಕುಂತಳ, ಕೆ.ಪಿ.ಎಸ್. ಪ್ರಾಂಶುಪಾಲ ಸರಸ್ವತಿ, ವಿವಿಧ ಕಾಲೇಜಿನ ಪ್ರಾಂಶುಪಾಲರು ಇದ್ದರು.

ಡೇವೀಸ್ ಹಾಗೂ ಬೀನಾ ಕಾರ್ಯಕ್ರಮ ನಿರೂಪಿಸಿದರು. ಕುಮಾರ್ ವಂದಿಸಿದರು. ತಾಲೂಕಿನ 7 ಪದವಿಪೂರ್ವ ಕಾಲೇಜಿಗಳ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಗುಂಪು ಆಟ ಹಾಗೂ ಅಥ್ಲೆಟಿಕ್ ನಡೆಯಿತು.

ಶಾಸಕ ಟಿ.ಡಿ.ರಾಜೇಗೌಡ, ಭದ್ರಾ ಕಾಡಾ ನಿಮಗದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ದಾನಿ ಶ್ರೀಕಾಂತ್ ಹಾಗೂ ಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಲಕ್ಷ್ಮಣಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.